ಕರ್ನಾಟಕದಲ್ಲೇ ನಡೆಯಿತು ತಮಿಳು ಸಿನಿಮಾಗೆ ಮುಹೂರ್ತ: ಬೆಂಗಳೂರಿಗೆ ಬಂದಿಳಿದ ತಮಿಳು ನಟ

Advertisements

ರೆಂಜ್, ದಳಪತಿ, ಜೂಮ್, ಲವ್ ಗುರು ಸಿನಿಮಾಗಳ ಖ್ಯಾತಿಯ ಪ್ರಶಾಂತ್ ರಾಜ್ ನಿರ್ದೇಶನದ ಹೊಸ ಸಿನಿಮಾ ಸೆಟ್ಟೇರಿದೆ. ಈ ಬಾರಿ ಪ್ರಶಾಂತ್ ಕನ್ನಡದ ಜೊತೆಗೆ ತಮಿಳಿನಲ್ಲೂ ಸಿನಿಮಾ ನಿರ್ದೇಶನ ಮಾಡುತ್ತಿದ್ದಾರೆ. ಅದರ ಮೊದಲ ಭಾಗವಾಗಿ ನಿನ್ನೆ ಬೆಂಗಳೂರಿನ ಕೊಂದಂಡ ರಾಮ ದೇಗುಲದಲ್ಲಿರುವ ಸಾಯಿಬಾಬಾ ಮಂದಿರದಲ್ಲಿ ಸಿನಿಮಾದ ಮುಹೂರ್ತ ನೆರವೇರಿದೆ. ತಮಿಳು ಸಿನಿಮಾವೊಂದು ಕನ್ನಡದ ನೆಲದಲ್ಲೇ ಮುಹೂರ್ತ ಕಂಡು ಕನ್ನಡಿಗರಿಗೆ ಸಂಭ್ರಮ ತಂದಿದೆ. ಇದನ್ನೂ ಓದಿ : ಮಸಾಜ್ ಪಾರ್ಲರ್ ಹುಡುಗಿ ಪಾತ್ರದಲ್ಲಿ ಅದಿತಿ ಪ್ರಭುದೇವ್

Advertisements

ಫಾರ್ಚುನ್ ಫಿಲ್ಮಂ ಬ್ಯಾನರ್ ನಡಿ ಪ್ರೊಡಕ್ಷನ್ ನಂಬರ್ 10 ಟೈಟಲ್ ನಡಿ ಸೆಟ್ಟೇರಿರುವ ಈ ಸಿನಿಮಾದಲ್ಲಿ ತಮಿಳಿನ ಖ್ಯಾತ ನಟ ಸಂತಾನಂ ನಾಯಕನಾಗಿ ನಟಿಸ್ತಿದ್ದು, ತಾನ್ಯ ಹೋಪ್ ನಾಯಕಿಯಾಗಿ ಬಣ್ಣ ಹಚ್ಚಿದ್ದಾರೆ. ರೋಮ್ಯಾಂಟಿಕ್ ಕಾಮಿಡಿ ಜಾನರ್ ಈ ಸಿನಿಮಾಗೆ ನವೀನ್ ರಾಜ್ ಬಂಡವಾಳ ಹೂಡಿದ್ದಾರೆ. ಇಂದಿನಿಂದ ಶೂಟಿಂಗ್ ಶುರು ಮಾಡಿರುವ ಪ್ರಶಾಂತ್ ರಾಜ್, ಫಸ್ಟ್ ಡೇ ಶೆಡ್ಯೂಲ್ಡ್ ನಲ್ಲೂ ಬೆಂಗಳೂರಿನಲ್ಲಿ ಮುಗಿಸಿಕೊಂಡು, ಆ ನಂತ್ರ ಚೆನ್ನೈನಲ್ಲಿ ಹಾಗೂ ವಿದೇಶದಲ್ಲಿ ಹಾಡು, ಕೆಲವೊಂದು ದೃಶ್ಯಗಳನ್ನು ಚಿತ್ರೀಕರಿಕರಿಸಲು ಪ್ಲ್ಯಾನ್ ಹಾಕಿಕೊಂಡಿದ್ದಾರೆ. ಇದನ್ನೂ ಓದಿ : ನಮ್ಮದು ಪ್ಯಾನ್ ಇಂಡಿಯಾ ಸಿನಿಮಾವಲ್ಲ, ಸಿನಿಮಾ ಅಷ್ಟೇ : ಬಾಲಿವುಡ್ ವಿರುದ್ಧ ಕಿಚ್ಚ ಸುದೀಪ್ ಗುಡುಗು

Advertisements

ಪ್ರಶಾಂತ್ ರಾಜ್ ನಿರ್ದೇಶನದ ಚೊಚ್ಚಲು ತಮಿಳು ಸಿನಿಮಾದಲ್ಲಿ ತುಪ್ಪದ ಬೆಡಗಿ ರಾಗಿಣಿ ದ್ವಿವೇದಿ ಕೂಡ ಪಾತ್ರ ಮಾಡುತ್ತಿದ್ದಾರೆ. ಈ ಸಿನಿಮಾದಲ್ಲಿ ಅವರು ಗ್ಲಾಮರೆಸ್ ಆಗಿ ಕಾಣಿಸಿಕೊಳ್ಳುತ್ತಿರುವುದಾಗಿ ತಿಳಿಸಿದ್ದಾರೆ. ತಮಿಳು ಮತ್ತು ಕನ್ನಡದಲ್ಲಿ ಏಕಕಾಲಕ್ಕೆ ಈ ಸಿನಿಮಾ ತಯಾರಾಗುತ್ತಿದ್ದು, ರಾಗಿಣಿಗಾಗಿಯೇ ಈ ಸಿನಿಮಾದಲ್ಲಿ ವಿಶೇಷ ಹಾಡು ಕೂಡ ಇದೆಯಂತೆ. ಇದನ್ನೂ ಓದಿ : ಮಂದಣ್ಣಗಾಗಿ ಮುಂಬೈನಲ್ಲಿ ಮುಗಿಬಿದ್ದ ಫ್ಯಾನ್ಸ್ : ಬಾಲಿವುಡ್ ನಲ್ಲೂ ರಶ್ಮಿಕಾ ಹವಾ

Advertisements

ಪ್ರಶಾಂತ್ ರಾಜ್ ಸಿನಿಮಾಗಳು ಅಂದ್ರೆ ಅಲ್ಲಿ ಸಂಗೀತಕ್ಕೆ ಹೆಚ್ಚಿನ ಪ್ರಾಧ್ಯಾನ್ಯತೆ ಇರುತ್ತದೆ. ಅದರಂತೆ ಈ ಬಾರಿ ಪ್ರಶಾಂತ್ ಮ್ಯೂಸಿಕಲ್ ಕಂಪೋಸರ್ ಅರ್ಜುನ್ ಜನ್ಯ ಜೊತೆ ಕೈ ಜೋಡಿಸಿದ್ದಾರೆ. ಪ್ರಶಾಂತ್ ನಿರ್ದೇಶನದ ಹೊಸ ಸಿನಿಮಾಗೆ ಅರ್ಜುನ್ ಜನ್ಯ ಮ್ಯೂಸಿಕ್ ನೀಡಲಿದ್ದು, ಸುಧಾಕರ್ ಕ್ಯಾಮೆರಾ ಕೈಚಳಕ ಸಿನಿಮಾದಲ್ಲಿರಲಿದೆ. ಸದ್ಯದಲ್ಲಿಯೇ ಉಳಿದ ತಾರಾಬಳಗದ ಮಾಹಿತಿಯನ್ನು ಚಿತ್ರತಂಡ ನೀಡಲಿದೆ. ಇದನ್ನೂ ಓದಿ : ಬಾಲಿವುಡ್ ಎಂದರೆ ಭಾರತೀಯ ಸಿನಿಮಾರಂಗವಲ್ಲ: ಮೆಗಾಸ್ಟಾರ್ ಚಿರಂಜೀವಿಗೂ ಆಗಿತ್ತು ಅವಮಾನ

ಈಗಾಗಲೇ ಹಾಡುಗಳಿಗೆ ರಾಗ ಸಂಯೋಜನೆ ಶುರು ಮಾಡಿದ್ದಾರಂತೆ ಜನ್ಯ. ಸಾಮಾನ್ಯವಾಗಿ ಪ್ರಶಾಂತ್ ರಾಜ್ ನಿರ್ದೇಶನದ ಬಹುತೇಕ ಚಿತ್ರಗಳ ಹಾಡುಗಳು ಗೆದ್ದಿವೆ. ಸೂಪರ್ ಹಿಟ್ ಸಾಲುಗಳಲ್ಲಿ ಕಾಣಿಸಿಕೊಂಡಿವೆ. ಈ ಸಿನಿಮಾದ ಹಾಡುಗಳು ಕೂಡ ಕೇಳುಗರಿಗೆ ಇಷ್ಟವಾಗಲಿವೆ ಎಂದಿದ್ದಾರೆ ನಿರ್ದೇಶಕರು.

Advertisements
Exit mobile version