ಮುಂಬೈ: ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಕೇಶ್ ಅಂಬಾನಿ (Mukesh Ambani) ಅವರಿಗೆ 3ನೇ ಬಾರಿಗೆ ಕೊಲೆ ಬೆದರಿಕೆ ಬಂದಿದೆ. ಇಮೇಲ್‌ನಲ್ಲಿ ಮತ್ತೊಂದು ಬೆದರಿಕೆ ಪತ್ರ ಬಂದಿದ್ದು, ಬೇಡಿಕೆ ಮೊತ್ತವನ್ನು 200 ಕೋಟಿ ರೂ.ನಿಂದ 400 ಕೋಟಿ ರೂ.ಗಳಿಗೆ ಹೆಚ್ಚಿಸಲಾಗಿದೆ.
ಇದೇ ಅಕ್ಟೋಬರ್ 27 ರಂದು 200 ಕೋಟಿ ರೂ.ಗಳಿಗೆ ಬೇಡಿಕೆಯಿಟ್ಟು ಬೆದರಿಕೆ ಇಮೇಲ್ ಪತ್ರ (Email Death Threat Letter) ಕಳುಹಿಸಿದ್ದ ಅದೇ ಇಮೇಲ್‌ನಿಂದ ಮತ್ತೊಂದು ಬೆದರಿಕೆ ಪತ್ರ ಬಂದಿದೆ. ಈ ಬಾರಿ ಬೇಡಿಕೆ ಮೊತ್ತವನ್ನು 400 ಕೋಟಿಗೆ ಹೆಚ್ಚಿಸಲಾಗಿದೆ. ಇದನ್ನೂ ಓದಿ: ಫೇಸ್‍ಬುಕ್ ಗೆಳೆಯನಿಗಾಗಿ ಪಾಕ್‍ಗೆ ತೆರಳಿದ್ದಾಕೆಗೆ ಈಗ ಮಕ್ಕಳನ್ನು ನೋಡುವ ಬಯಕೆ!
Advertisement
Advertisement
ನಿಮಗೆ ಎಷ್ಟೇ ಉತ್ತಮ ಭದ್ರತೆ ಇದ್ದರೂ, ನಮ್ಮ ಒಬ್ಬನೇ ಒಬ್ಬ ಸ್ನೈಪರ್ ನಿಮ್ಮನ್ನು ಕೊಲ್ಲುತ್ತಾನೆ. ಈ ಬಾರಿ ನಮ್ಮಮ್ಮ ಪತ್ತೆ ಮಾಡುವುದಕ್ಕಾಗಲಿ ಅಥವಾ ಬಂಧಿಸುವುದಕ್ಕಾಗಲಿ ಸಾಧ್ಯವಿಲ್ಲ ಎಂದೂ ಇಮೇಲ್‌ನಲ್ಲಿ ಅಪರಿಚಿತ ವ್ಯಕ್ತಿ ಎಚ್ಚರಿಕೆ ನೀಡಿದ್ದಾನೆ. 3ನೇ ಬಾರಿಗೆ ಕೊಲೆ ಬೆದರಿಕೆ ಬಂದಿರುವ ಹಿನ್ನೆಲೆಯಲ್ಲಿ ಮುಂಬೈ ಪೊಲೀಸರು (Mumbai Police) ದಕ್ಷಿಣ ಮುಂಬೈನಲ್ಲಿರುವ ಅಂಬಾನಿ ನಿವಾಸಕ್ಕೆ ಭದ್ರತೆ ಹೆಚ್ಚಿಸಿದ್ದಾರೆ. ಇದನ್ನೂ ಓದಿ: ಶ್ರೀಲಂಕಾ ನೌಕಾಪಡೆಯಿಂದ 37 ಭಾರತೀಯ ಮೀನುಗಾರರ ಬಂಧನ – 5 ದೋಣಿಗಳು ವಶ
Advertisement
Advertisement
ಇದೇ ತಿಂಗಳ ಅಕ್ಟೋಬರ್ 27 ರಂದು ಮೊದಲ ಇಮೇಲ್ ಬೆದರಿಕೆ ಪತ್ರ ಬಂದಿತ್ತು. ಅದರಲ್ಲಿ 20 ಕೋಟಿ ರೂ.ಗಳನ್ನು ತಪ್ಪದೇ ಕೊಡಬೇಕು. ನಮ್ಮ ಬಳಿ ಶಾರ್ಪ್ ಶೂಟರ್‌ಗಳಿದ್ದು, ಹಣ ನೀಡುವಲ್ಲಿ ವಿಫಲರಾದರೆ ಗುಂಡು ಹಾರಿಸಲಾಗುವುದು ಎಂದು ಬೆದರಿಕೆ ಹಾಕಲಾಗಿತ್ತು. ಅಕ್ಟೋಬರ್ 28 ರಂದು ಅದೇ ಇಮೇಲ್‌ನಿಂದ ಅಪರಿಚಿತ ವ್ಯಕ್ತಿಯೊಬ್ಬ ಮತ್ತೊಂದು ಬೆದರಿಕೆ ಪತ್ರ ಕಳುಹಿಸಿದ್ದ. ಹಿಂದಿನ ಇ-ಮೇಲ್‌ಗೆ ಪ್ರತಿಕ್ರಿಯೆ ನೀಡದ ಕಾರಣ ಹಣದ ಬೇಡಿಕೆಯನ್ನು 200 ಕೋಟಿ ರೂ.ಗೆ ಹೆಚ್ಚಿಸಿರುವುದಾಗಿ ಎಚ್ಚರಿಕೆ ನೀಡಿದ್ದ.
ಕೊಲೆ ಬೆದರಿಕೆ ಸಂಬಂಧ ಮುಕೇಶ್ ಅಂಬಾನಿ ಅವರ ಅವರ ಭದ್ರತಾ ಸಿಬ್ಬಂದಿ ದೂರು ದಾಖಲಿಸಿದ್ದರು. ದೂರಿನ ಆಧಾರದ ಮೇಲೆ ಮುಂಬೈನ ಗಾಮ್‌ದೇವಿ ಪೊಲೀಸರು ಅಪರಿಚಿತ ವ್ಯಕ್ತಿಯ ವಿರುದ್ಧ ಐಪಿಸಿ ಸೆಕ್ಷನ್ 387 ಮತ್ತು 506 (2) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇದೀಗ ಅದೇ ಇಮೇಲ್‌ನಿಂದ ಅಪರಿಚಿತ ವ್ಯಕ್ತಿಯೊಬ್ಬ 3ನೇ ಇಮೇಲ್ ಬೆದರಿಕೆ ಪತ್ರ ಕಳುಹಿಸಿದ್ದು, ಮುಂಬೈ ಪೊಲೀಸರಿಗೆ ತಲೆನೋವು ತಂದಿದೆ. ಇದನ್ನೂ ಓದಿ: ಕತಾರ್‌ನಲ್ಲಿ ಬಂಧಿತರಾಗಿದ್ದ 8 ಮಾಜಿ ನೌಕಾಪಡೆ ಸಿಬ್ಬಂದಿಗೆ ಮರಣದಂಡನೆ! – ಭಾರತಕ್ಕೆ ಆಘಾತ
ಅಂಬಾನಿಗೆ ಕೊಲೆ ಬೆದರಿಕೆ ಬರುತ್ತಿರುವುದು ಇದೇ ಮೊದಲೇನಲ್ಲ. ಕಳೆದ ವರ್ಷ ಮುಕೇಶ್ ಅಂಬಾನಿ ಮತ್ತು ಅವರ ಕುಟುಂಬ ಸದಸ್ಯರಿಗೆ ಕೊಲೆ ಬೆದರಿಕೆ ಕರೆಗಳನ್ನು ಮಾಡಿದ್ದಕ್ಕಾಗಿ ಬಿಹಾರದ ದರ್ಭಾಂಗ್‌ನ ವ್ಯಕ್ತಿಯನ್ನು ಮುಂಬಯಿ ಪೊಲೀಸರು ಬಂಧಿಸಿದ್ದರು. ಮುಂಬಯಿಲ್ಲಿನ ಸರ್ ಎಚ್.ಎನ್. ರಿಲಯನ್ಸ್ ಫೌಂಡೇಶನ್ ಆಸ್ಪತ್ರೆಯನ್ನು ಸ್ಫೋಟಿಸುವುದಾಗಿ ಆರೋಪಿಗಳು ಬೆದರಿಕೆ ಬಂದಿತ್ತು.
Web Stories