ನವದೆಹಲಿ: ರಾಜ್ಯಸಭೆ ಅವಧಿ ಅಂತ್ಯದ ಬೆನ್ನಲ್ಲೇ ಕೇಂದ್ರ ಸಚಿವ ಸ್ಥಾನಕ್ಕೆ ಮುಖ್ತಾರ್ ಅಬ್ಬಾಸ್ ನಖ್ವಿ ರಾಜೀನಾಮೆ ನೀಡಿದ್ದು, ಅಲ್ಪಸಂಖ್ಯಾತ ವ್ಯವಹಾರಗಳ ಖಾತೆಯನ್ನು ಸ್ಮೃತಿ ಇರಾನಿ ಅವರಿಗೆ ನೀಡಲಾಗಿದೆ.
ಪ್ರಧಾನಿ ನರೇಂದ್ರ ಮೋದಿ ಅವರಿಂದು ಅಬ್ಬಾಸ್ ರಾಜೀನಾಮೆಯನ್ನು ಅಂಗೀಕರಿಸಿದ್ದಾರೆ. ಇದನ್ನೂ ಓದಿ: ಮೋದಿ ಸಂಪುಟ ಸ್ಥಾನಕ್ಕೆ ಮುಖ್ತಾರ್ ಅಬ್ಬಾಸ್ ರಾಜೀನಾಮೆ
Advertisement
Advertisement
ಕೇಂದ್ರ ಸಚಿವರ ರಾಜೀನಾಮೆ ಹಿನ್ನೆಲೆ ಸ್ಮೃತಿ ಇರಾನಿ ಮತ್ತು ಜೋತಿರಾಧಿತ್ಯ ಸಿಂಧಿಯಾಗೆ ಜವಾಬ್ದಾರಿ ನೀಡಲಾಗಿದೆ. ಅಲ್ಪಸಂಖ್ಯಾತ ವ್ಯವಹಾರಗಳ ಖಾತೆಯನ್ನು ಸ್ಮೃತಿ ಇರಾನಿ ಅವರ ಹೆಗಲಿಗೆ ನೀಡಲಾಗಿದ್ದು, ಸ್ಟೀಲ್ ಖಾತೆಯನ್ನು ಜೋತಿರಾಧಿತ್ಯ ಸಿಂಧಿಯಾಗೆ ಹೆಚ್ಚುವರಿ ಜವಾಬ್ದಾರಿಯಾಗಿ ಹಂಚಿಕೆ ಮಾಡಲಾಗಿದೆ. ಇದನ್ನೂ ಓದಿ: ರಾಜ್ಯಸಭೆಗೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆ ನಾಮ ನಿರ್ದೇಶನ: ಮೋದಿ ಟ್ವೀಟ್
Advertisement
Advertisement
ಇತ್ತೀಚೆಗಷ್ಟೆ ನಡೆದಿದ್ದ ರಾಜ್ಯಸಭೆ ಚುನಾವಣೆಯಲ್ಲಿ ಮುಖ್ತಾರ್ ಅಬ್ಬಾಸ್ ಸ್ಪರ್ಧಿಸಿರಲಿಲ್ಲ. ಈ ಹಿನ್ನೆಲೆಯಲ್ಲಿ ರಾಜ್ಯಸಭೆ ಅವಧಿ ಗುರುವಾರ ಅಂತ್ಯಗೊಳ್ಳಲಿದೆ. ಮೋದಿ ಸಂಪುಟ ಸ್ಥಾನಕ್ಕೆ ರಾಜೀನಾಮೆ ನೀಡಿರುವ ನಖ್ವಿಗೆ ಕೇಂದ್ರ ಸರ್ಕಾರ ರಾಜ್ಯಪಾಲ ಹುದ್ದೆ ನೀಡುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.