ನಟ, ರಾಜಕಾರಣಿ ಮುಖ್ಯಮಂತ್ರಿ ಚಂದ್ರು ಇಂದು ಆಮ್ ಆದ್ಮಿ ಪಾರ್ಟಿಗೆ ಸೇರ್ಪಡೆಗೊಂಡಿದ್ದಾರೆ. ನಿನ್ನೆಯಷ್ಟೇ ಅವರು ಆಮ್ ಆದ್ಮಿ ಪಾರ್ಟಿ ಸೇರಲಿದ್ದಾರೆ ಎಂದು ಅಧಿಕೃತವಾಗಿ ಪಾರ್ಟಿಯ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳಲಾಗಿತ್ತು. ಅಲ್ಲದೇ, ಕೆಲವು ದಿನಗಳ ಹಿಂದೆಯಷ್ಟೇ ಚಂದ್ರು ಕೂಡ ಈ ಕುರಿತು ಮಾತನಾಡಿದ್ದಾರೆ. ದನ್ನೂ ಓದಿ: ಕಮಲ್ ಹಾಸನ್ ನಟನೆಯ ‘ವಿಕ್ರಮ್’ ಸಿನಿಮಾ : ಬಾಕ್ಸ್ ಆಫೀಸ್ ಧೂಳಿಪಟ
Advertisement
ಇಂದು ಬೆಂಗಳೂರಿನಲ್ಲಿ ನಡೆದ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾಜಿ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್, ಕರ್ನಾಟಕ ರಾಜ್ಯ ಆಮ್ ಆದ್ಮಿ ಪಾರ್ಟಿ ಅಧ್ಯಕ್ಷ ಪೃಥ್ವಿ ರೆಡ್ಡಿ, ಬೆಂಗಳೂರು ನಗರ ಅಧ್ಯಕ್ಷ ಮೋಹನ್ ದಾಸರಿ, ವಕ್ತಾರ ಮತಾಯಿ ಸೇರಿದಂತೆ ಹಲವರು ಈ ಸಂದರ್ಭದಲ್ಲಿ ಹಾಜರಿದ್ದರು. ಚಂದ್ರು ಅವರಿಗೆ ಮುಂದಿನ ದಿನಗಳಲ್ಲಿ ಸೂಕ್ತ ಸ್ಥಾನಮಾನ ಕಲ್ಪಿಸುವ ಕುರಿತು ಮಾತನಾಡಿದರು. ಇದನ್ನೂ ಓದಿ : Exclusive – ವಾಣಿಜ್ಯ ಮಂಡಳಿಯಲ್ಲಿ ಕೋಟ್ಯಂತರ ದುರುಪಯೋಗ? : ರಾಜೇಂದ್ರ ಸಿಂಗ್ ಬಾಬು ಹೇಳಿದ್ದೇನು?
Advertisement
Advertisement
ಮುಖ್ಯಮಂತ್ರಿ ಚಂದ್ರು ಅವರು ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತ ಆಗಿದ್ದರು. ಆದರೆ, ಆ ಪಕ್ಷದಲ್ಲಿ ಅವರಿಗೆ ಸೂಕ್ತ ಸ್ಥಾನ ಸಿಗಲಿಲ್ಲ ಎನ್ನುವ ಕಾರಣಕ್ಕಾಗಿ ಇತ್ತೀಚೆಗಷ್ಟೇ ಆ ಪಕ್ಷಕ್ಕೆ ರಾಜೀನಾಮೆ ನೀಡಿದ್ದರು. ಆಮ್ ಆದ್ಮಿ ಪಾರ್ಟಿಯ ಸಿದ್ಧಾಂತಗಳು ಇಷ್ಟವಾದ ಕಾರಣದಿಂದಾಗಿ ಈ ಪಕ್ಷವನ್ನು ಸೇರ್ಪಡೆಗೊಂಡಿರುವುದಾಗಿ ಅವರು ಹೇಳಿದ್ದಾರೆ.