ಕೋಲಾರ: ಶಾಸಕ ಕೊತ್ತೂರು ಮಂಜುನಾಥ್ (Kothur Manjunath) ಆಪ್ತ ಹಾಗೂ ಮುಳಬಾಗಿಲು (Mulbagal) ಬ್ಲಾಕ್ ಕಾಂಗ್ರೆಸ್ (Congress) ಅಧ್ಯಕ್ಷ ಎಂ.ಸಿ.ನೀಲಕಂಠೇಗೌಡ ಹೃದಯಾಘಾತದಿಂದ (Heart Attack)ನಿಧನರಾಗಿದ್ದಾರೆ.
ಕಳೆದ ರಾತ್ರಿ ಅವರಿಗೆ ತೀವ್ರ ಹೃದಯಾಘಾತವಾಗಿದೆ. ಅವರನ್ನು ಕೂಡಲೇ ಜಾಲಪ್ಪ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮಧ್ಯಾಹ್ನ 1 ಗಂಟೆ ಸುಮಾರಿಗೆ ಸಾವನ್ನಪ್ಪಿದ್ದಾರೆ.
ನೀಲಕಂಠೇಗೌಡರು ಈ ಹಿಂದೆ ಮುಳಬಾಗಿಲು ತಾಲೂಕು ಪಂಚಾಯತಿ ಅಧ್ಯಕ್ಷರಾಗಿದ್ದರು. ಸದ್ಯ ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷರಾಗಿ, ಡಿಸಿಸಿ ಬ್ಯಾಂಕ್ ನಿರ್ದೇಶಕರಾಗಿದ್ದರು. ಮುಳಬಾಗಿಲು ಕಾಂಗ್ರೆಸ್‌ನಲ್ಲಿ ಅವರು ಹಿರಿಯ ನಾಯಕರಾಗಿದ್ದರು. ತಾಲೂಕಿನ ಕಾಂಗ್ರೆಸ್ ನಾಯಕರಲ್ಲಿ ತಮ್ಮ ನಾಯಕನನ್ನು ಕಳೆದುಕೊಂಡ ಶೋಕ ಮನೆಮಾಡಿದೆ.