ರಾಯಚೂರು: ರಾಜ್ಯದಲ್ಲಿ ಕಲುಷಿತ ನೀರು (Contaminated Water) ಕುಡಿದು ಎಷ್ಟೇ ಜನ ಸಾವನ್ನಪ್ಪಿದರೂ ರಾಯಚೂರಿನ (Raichur) ಅಧಿಕಾರಿಗಳು ಮಾತ್ರ ತಲೆಕೆಡಿಸಿಕೊಳ್ಳುವ ಹಾಗೇ ಕಾಣುವುದಿಲ್ಲ. ರಾಯಚೂರಿನಲ್ಲಿ ಕಳೆದ ಎರಡು ವರ್ಷಗಳಲ್ಲಿ 9 ಸಾವಾಗಿದ್ದರೂ ಗ್ರಾಮೀಣ ಭಾಗದಲ್ಲಿ ಶುದ್ಧ ಕುಡಿಯುವ ನೀರು ಮರೀಚಿಕೆಯಾಗಿದೆ.
ರಾಯಚೂರು ತಾಲೂಕಿನ ಬಿಚ್ಚಾಲಿ ಗ್ರಾಮದಲ್ಲಿನ ಸ್ಲೋ ಸ್ಯಾಂಡ್ ಫಿಲ್ಟರ್ ಅಕ್ಷರಶಃ ಹಾಳಾಗಿದ್ದು, ನೀರಿನ ಶುದ್ಧೀಕರಣ (Purification) ಎಂಬುವುದೇ ಮಾಯಾವಾಗಿದೆ. 17 ಗ್ರಾಮಗಳಿಗೆ ಶುದ್ಧ ಕುಡಿಯುವ ನೀರನ್ನು ಸರಬರಾಜು ಮಾಡಬೇಕಾದ ನೀರಿನ ಘಟಕ ಸಂಪೂರ್ಣ ಹಾಳಾಗಿದೆ. ಇಲ್ಲಿನ ನೀರು ಪಾಚಿಗಟ್ಟಿ ಸಂಪೂರ್ಣ ಕಲುಷಿತಗೊಂಡಿದೆ. ಇದನ್ನೂ ಓದಿ: ಇಂದು ಕಾವೇರಿ ನೀರು ನಿಯಂತ್ರಣಾ ಸಮಿತಿ ಹೈವೋಲ್ಟೇಜ್ ಸಭೆ
Advertisement
Advertisement
ಇಷ್ಟು ದಿನ ಇದೇ ನೀರನ್ನು ಸರಬರಾಜು ಮಾಡುತ್ತಿದ್ದ ಅಧಿಕಾರಿಗಳು ಈಗ ತುಂಗಭದ್ರಾ ನದಿ ನೀರನ್ನು ಪಂಪ್ ಮಾಡುತ್ತಿದ್ದ ಎರಡು ಮೋಟಾರ್‌ಗಳು ಕೆಟ್ಟಿವೆ ಎಂದು ಕಳೆದ 15-20 ದಿನಗಳಿಂದ ಗ್ರಾಮಗಳಿಗೆ ನೀರು ಸರಬರಾಜು ಮಾಡುವುದನ್ನೇ ನಿಲ್ಲಿಸಿದ್ದಾರೆ. ಹೀಗಾಗಿ ನೀರಿನ ಸಮಸ್ಯೆ ತೀವ್ರವಾಗಿ ಉಲ್ಬಣಗೊಂಡಿದ್ದು, ನೀರಿಗಾಗಿ ಜನ ಪರದಾಟ ನಡೆಸಿದ್ದಾರೆ. ಬಿಚ್ಚಾಲಿ ಗ್ರಾಮದ ಜನ ನೇರವಾಗಿ ಶುದ್ಧೀಕರಣ ಘಟಕಕ್ಕೆ ಬಂದು ಟ್ಯಾಂಕ್ ಏರಿ ಹರಸಾಹಸ ಮಾಡಿ ಪಾಚಿಗಟ್ಟಿದ ಕಲುಷಿತ ನೀರನ್ನು ತೆಗೆದುಕೊಂಡು ಹೋಗುತ್ತಿದ್ದಾರೆ. ಆಗಾಗ ಅನಾರೋಗ್ಯ ಸಮಸ್ಯೆಗಳು ಎದುರಾಗುತ್ತಿದ್ದರೂ, ನೀರಿನ ಅನಿವಾರ್ಯತೆಯಿಂದ ಕಲುಷಿತ ನೀರನ್ನೇ ಕುಡಿಯಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಇದನ್ನೂ ಓದಿ: ಸರ್ಕಾರಿ ಬಸ್, ಕಾರು ಮುಖಾಮುಖಿ ಡಿಕ್ಕಿ – 9 ಮಂದಿಗೆ ಗಂಭೀರ ಗಾಯ
Advertisement
ಟ್ಯಾಂಕ್‌ನಿಂದ ತೆಗೆದುಕೊಳ್ಳುವಾಗಲೇ ನೀರನ್ನು ಸೋಸಿಕೊಂಡು ಕೊಡಗಳಿಗೆ ತುಂಬಿಸುತ್ತಿದ್ದಾರೆ. ಪಾಚಿ ಜೊತೆಗೆ ನೀರಿಗೆ ಹುಳು ಬಿದ್ದಿರುವುದರಿಂದ ಭಯದಲ್ಲೇ ನೀರನ್ನು ಬಳಸಬೇಕಿದೆ. 2015ರಲ್ಲಿ ಬಹು ಗ್ರಾಮ ಕುಡಿಯುವ ನೀರಿನ ಯೋಜನೆಯಡಿ ನಿರ್ಮಾಣವಾದ ಘಟಕ ನಿರ್ವಹಣೆಯಿಲ್ಲದೆ ಸಂಪೂರ್ಣ ಹಾಳಾಗಿದ್ದರೂ ಅಧಿಕಾರಿಗಳಾಗಲಿ, ಜನಪ್ರತಿನಿಧಿಗಳಾಗಲಿ ಜನರ ಸಮಸ್ಯೆಗೆ ಸ್ಪಂದಿಸುತ್ತಿಲ್ಲ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಇದನ್ನೂ ಓದಿ: ರಕ್ತಚಂದನ ಸಾಗಿಸ್ತಿದ್ದ ಕಾರು ಭೀಕರ ಅಪಘಾತಕ್ಕೆ ಜಖಂ – ಪವಾಡವೆಂಬಂತೆ ಪಾರಾದ ಕಳ್ಳರು
Advertisement
ದೊಡ್ಡ ಅನಾಹುತಗಳು ಸಂಭವಿಸಿದಾಗಲೇ ಅಧಿಕಾರಿಗಳು, ಜನಪ್ರತಿನಿಧಿಗಳು ಸ್ಥಳಕ್ಕೆ ಭೇಟಿ ನೀಡುತ್ತಾರಾ ಎಂದು ಗ್ರಾಮಸ್ಥರು ರೊಚ್ಚಿಗೆದ್ದಿದ್ದಾರೆ. ಒಟ್ಟಿನಲ್ಲಿ ಎಷ್ಟೇ ಬಾರಿ ಅವಘಡಗಳು ನಡೆದರೂ ಎಚ್ಚೆತ್ತುಕೊಳ್ಳದಿರುವುದು ವಿಪರ್ಯಾಸವೇ ಸರಿ. ಕನಿಷ್ಟ ಈಗಲಾದರೂ ಸಂಬಂಧಪಟ್ಟವರು ಎಚ್ಚೆತ್ತು ಗ್ರಾಮಸ್ಥರಿಗೆ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕಿದೆ. ಇದನ್ನೂ ಓದಿ: ಡಿಕೆ ಬ್ರದರ್ಸ್‌ಗೆ ಠಕ್ಕರ್ – ಲೋಕಸಭೆಗೆ ಹೆಚ್‌ಡಿಕೆ ಸ್ಪರ್ಧೆ?
Web Stories