ಬಹುಭಾಷಾ ನಟ ಫಹಾದ್ ಫಾಸಿಲ್ ಇದೀಗ ಸಿಬಿಐ ಅಧಿಕಾರಿ

Public TV
1 Min Read
Fahadh Faasil 2

ಲಯಾಳಂ ಸೇರಿದಂತೆ ದಕ್ಷಿಣದ ಬಹುತೇಕ ಸಿನಿಮಾಗಳಲ್ಲಿ ನಟಿಸಿರುವ, ಪ್ರತಿಭಾವಂತ ಕಲಾವಿದ ಫಹಾದ್ ಫಾಸಿಲ್ (Fahad Faasil) ಇದೀಗ ಸಿಬಿಐ ಅಧಿಕಾರಿಯಾಗಿದ್ದಾರೆ. ಕನ್ನಡದ ಬಘೀರ (Bagheera)ಸಿನಿಮಾದಲ್ಲಿ ಅವರು ಇಂಥದ್ದೊಂದು ಪಾತ್ರ ನಿರ್ವಹಿಸಲಿದ್ದಾರೆ. ರೋರಿಂಗ್ ಸ್ಟಾರ್ ಶ್ರೀಮುರಳಿ (Srimurali) ನಾಯಕನಾಗಿ ನಟಿಸಿರುವ ಈ ಚಿತ್ರವು ಹೊಂಬಾಳೆ ಫಿಲ್ಮ್ಸ್ ಬ್ಯಾನರ್ ನಲ್ಲಿ ಮೂಡಿ ಬರುತ್ತಿದೆ. ಈಗಾಗಲೇ ಎರಡು ಹಂತದ ಚಿತ್ರೀಕರಣ ಕೂಡ ಮುಗಿಸಿದೆ.

Fahadh Faasil 1

ಬಘೀರ್ ಸಿನಿಮಾದ ಶೂಟಿಂಗ್ ಸಂದರ್ಭದಲ್ಲಿ ಗಾಯ ಮಾಡಿಕೊಂಡಿದ್ದ ಶ್ರೀಮುರಳಿ, ಆನಂತರ ಆಸ್ಪತ್ರೆ ಸೇರಿ ಗಾಯಕ್ಕೆ ಶಸ್ತ್ರ ಚಿಕಿತ್ಸೆಯನ್ನೂ ಮಾಡಿಕೊಂಡಿದ್ದಾರೆ. ಸದ್ಯ ಅವರು ವಿಶ್ರಾಂತಿ ಪಡೆಯುತ್ತಿದ್ದಾರೆ. ಸದ್ಯದಲ್ಲೇ ಚಿತ್ರೀಕರಣಕ್ಕೆ ಮರಳಲಿದ್ದು, ಆಗ ಫಹಾದ್ ಫಾಸಿಲ್ ಈ ತಂಡವನ್ನು ಸೇರಿಕೊಳ್ಳಲಿದ್ದಾರೆ. ಕಾಲಿವುಡ್ ವಿಕ್ರಮ್ ಸಿನಿಮಾ ಗೆಲುವಿನ ನಂತರ ಫಹಾದ್ ಗೆ ಭಾರೀ ಡಿಮಾಂಡ್ ಕ್ರಿಯೇಟ್ ಆಗಿದೆ. ಇದನ್ನೂ ಓದಿ: ವಿನಯ್ ರಾಜ್‌ಕುಮಾರ್‌ಗೆ ನಾಯಕಿಯಾದ `ವಿಕ್ರಮ್’ ನಟಿ ಸ್ವಾತಿಷ್ಟ ಕೃಷ್ಣನ್

Fahadh Faasil 3

ಅಂದಹಾಗೆ ಬಘೀರ್ ಸಿನಿಮಾವನ್ನು ಡಾ.ಸೂರಿ ನಿರ್ದೇಶನ ಮಾಡುತ್ತಿದ್ದಾರೆ. ಲಕ್ಕಿ ಚಿತ್ರದ ನಂತರ ಸೂರಿ ಈ ಸಿನಿಮಾವನ್ನು ಕೈಗೆತ್ತಿಕೊಂಡಿದ್ದು, ಪ್ರಶಾಂತ್ ನೀಲ್ ಈ ಚಿತ್ರಕ್ಕೆ ಕಥೆ ಬರೆದಿದ್ದಾರೆ. ಈ ಸಿನಿಮಾದಲ್ಲಿ ಶ್ರೀಮುರಳಿ ಪೊಲೀಸ್ ಆಫೀಸರ್ ಪಾತ್ರ ಮಾಡುತ್ತಿದ್ದು, ಫಹಾದ್ ಸಿಬಿಐ ಅಧಿಕಾರಿಯಾಗಿ ಶ್ರೀಮುರಳಿಗೆ ಸಾಥ್ ನೀಡಲಿದ್ದಾರೆ. ಮಂಗಳೂರು ಸೇರಿದಂತೆ ಹಲವು ಕಡೆ ಈಗಾಗಲೇ ಹಲವು ಹಂತದ ಚಿತ್ರೀಕರಣ ನಡೆದಿದೆ. ಫೆಬ್ರವರಿಯಿಂದ ಮುಂದಿನ ಹಂತದ ಚಿತ್ರೀಕರಣ ಎನ್ನಲಾಗುತ್ತಿದೆ.

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

Share This Article
Leave a Comment

Leave a Reply

Your email address will not be published. Required fields are marked *