LatestNational

ಹಗ್ಗ ಜಗ್ಗಾಟದಲ್ಲಿ ವೈದ್ಯಕೀಯ ವಿದ್ಯಾರ್ಥಿ ಸಾವು! – ವಿಡಿಯೋ ನೋಡಿ

ಮುಂಬೈ: ಹಗ್ಗ ಜಗ್ಗಾಟದಲ್ಲಿ ವೈದ್ಯಕೀಯ ವಿದ್ಯಾರ್ಥಿಯೊಬ್ಬ ಮೃತಪಟ್ಟ ದಾರುಣ ಘಟನೆ ಶುಕ್ರವಾರ ಮುಂಬೈನ ಖಾಸಗಿ ಕಾಲೇಜಿನಲ್ಲಿ ನಡೆದಿದೆ.

ಜಿಬ್ಬಿನ್ ಸನ್ನಿ (22) ಮೃತ ವೈದ್ಯ ವಿದ್ಯಾರ್ಥಿ. ಜಿಬಿನ್ ಸೋಮಯ್ಯಾ ಸ್ಕೂಲ್ ಅಂಡ್ ನರ್ಸಿಂಗ್‍ನಲ್ಲಿ ವ್ಯಾಸಂಗ ಮಾಡುತ್ತಿದ್ದ. ವಿದ್ಯಾರ್ಥಿಗಳಿಗೆ ನಿನ್ನೆ ಕಾಲೇಜು ಮೈದಾನದಲ್ಲಿ ಕ್ರೀಡಾಕೂಟ ಆಯೋಜಿಸಲಾಗಿತ್ತು. ಜಿಬ್ಬಿನ್ ಕೂಡ ಹಗ್ಗ ಜಗ್ಗಾಟದಲ್ಲಿ ಹುಮ್ಮಸ್ಸಿನಿಂದ ಭಾಗವಹಿಸಿದ್ದ.

ಎಲ್ಲರಿಗಿಂತ ಮುಂದೆ ನಿಂತಿದ್ದ ಜಿಬ್ಬಿನ್ ಹಗ್ಗ ಜಗ್ಗಾಟದ ವೇಳೆ ಕುಸಿದು ಬಿದ್ದಿದ್ದಾನೆ. ತಕ್ಷಣವೇ ಆತನನ್ನು ಸಮೀಪದ ರಾಜವಾಡಿ ಆಸ್ಪತ್ರೆಗೆ ಸಾಗಿಸಲಾಗಿತ್ತು. ಆದರೆ ಆಸ್ಪತ್ರೆಗೆ ಬರುವ ಮುನ್ನವೇ ವಿದ್ಯಾರ್ಥಿ ಮೃತಪಟ್ಟಿದ್ದಾನೆ ಎಂದು ವೈದ್ಯರು ಖಚಿತಪಡಿಸಿದ್ದಾರೆ.

ಸಾವಿಗೆ ನಿರ್ದಿಷ್ಟ ಕಾರಣ ತಿಳಿದು ಬಂದಿಲ್ಲ. ಜಿಬ್ಬಿನ್ ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಪರೀಕ್ಷೆಯ ನಂತರ ಸಾವಿಗೆ ಕಾರಣವೇನು ಎನ್ನುವುದು ತಿಳಿಯಲಿದೆ ಎಂದು ಆಸ್ಪತ್ರೆಯ ವೈದ್ಯಾಧಿಕಾರಿ ವಿದ್ಯಾ ಠಾಕೂರ್ ತಿಳಿಸಿದ್ದಾರೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

Leave a Reply

Your email address will not be published. Required fields are marked *

Back to top button