ಬಿಟ್‌ಕಾಯಿನ್‌ ರೂಪದಲ್ಲಿ 8 ಕೋಟಿ ಕೊಡದಿದ್ರೆ ಮುಂಬೈ ಏರ್ಪೋರ್ಟ್‌ ಬ್ಲಾಸ್ಟ್‌ – ಬೆದರಿಕೆ

Public TV
1 Min Read
Mumbai Airport

ಮುಂಬೈ: ಬಿಟ್‌ಕಾಯಿನ್‌ (ಕ್ರಿಪ್ಟೋಕರೆನ್ಸಿ) (Bitcoin) ರೂಪದಲ್ಲಿ 10 ಲಕ್ಷ ಡಾಲರ್‌ (8.33 ಕೋಟಿ ರೂ.) ಪಾವತಿಸದಿದ್ದರೇ ಮುಂಬೈ ವಿಮಾನ ನಿಲ್ದಾಣದ ಟರ್ಮಿನಲ್‌ 2 ಅನ್ನು ಸ್ಫೋಟಿಸುವುದಾಗಿ ಮುಂಬೈ ಪೊಲೀಸರಿಗೆ ಇಮೇಲ್ ಬೆದರಿಕೆ ನೀಡಲಾಗಿದೆ.

ಇ-ಮೇಲ್‌ ಬೆದರಿಕೆ ಕಳುಹಿಸಿದ್ದ ಅಪರಿಚಿತ ವ್ಯಕ್ತಿಯ ವಿರುದ್ಧ ಮುಂಬೈ ಪೊಲೀಸರು (Mumbai Police) ಪ್ರಕರಣ ದಾಖಲಿಸಿದ್ದಾರೆ. ಗುರುವಾರ ಬೆಳಗ್ಗೆ 11 ಗಂಟೆ ಸುಮಾರಿಗೆ ಮುಂಬೈ ಇಂಟರ್‌ನ್ಯಾಷನಲ್ ಏರ್‌ಪೋರ್ಟ್ ಲಿಮಿಟೆಡ್‌ಗೆ (MIAL) ID–quaidacasrol@gmail.com-ನಿಂದ ಬೆದರಿಕೆ ಇಮೇಲ್ ಬಂದಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಮೋದಿ ವಿರುದ್ಧ ಹೇಳಿಕೆ- ಕೇಂದ್ರ ಚುನಾವಣಾ ಆಯೋಗದಿಂದ ರಾಹುಲ್ ಗಾಂಧಿಗೆ ನೋಟಿಸ್

Bitcoin

ನಿಮ್ಮ ವಿಮಾನ ನಿಲ್ದಾಣಕ್ಕೆ ಇದು ಕೊನೆಯ ಎಚ್ಚರಿಕೆಯಾಗಿದೆ. 10 ಲಕ್ಷ ಡಾಲರ್‌ (Million Dollars) ಅನ್ನು ಬಿಟ್‌ಕಾಯಿನ್‌ ರೂಪದಲ್ಲಿ ಪಾವತಿಸದೇ ಇದ್ದರೇ 48 ಗಂಟೆಗಳ ಒಳಗೆ ವಿಮಾನ ನಿಲ್ದಾಣದ ಟರ್ಮಿನಲ್ 2 (Mumbai Airport Terminal 2 )ಅನ್ನು ಬಾಂಬ್‌ ಹಾಕಿ ಉಡಾಯಿಸುತ್ತೇವೆ. 24 ಗಂಟೆಗಳ ನಂತರ ಮತ್ತೊಂದು ಎಚ್ಚರಿಕೆ ನೀಡಲಾಗುವುದು ಎಂದು ಇಮೇಲ್‌ನಲ್ಲಿ ಉಲ್ಲೇಖಿಸಲಾಗಿದೆ. ಇದನ್ನೂ ಓದಿ: ಅಮೆರಿಕದಲ್ಲಿ ಭಾರತದ ವಿದ್ಯಾರ್ಥಿಗೆ ಗುಂಡಿಕ್ಕಿ ಹತ್ಯೆ

shivaji airport mumbai

ಬೆದರಿಕೆಯ ಇಮೇಲ್‌ ಬರುತ್ತಿದ್ದಂತೆ ಮುಂಬೈ ಪೊಲೀಸರು (Mumbai Police) ಫುಲ್‌ ಅಲರ್ಟ್‌ ಆಗಿದ್ದಾರೆ. ಇಮೇಲ್‌ ಕಳುಹಿಸಿದ ಅಪರಿಚಿತ ವ್ಯಕ್ತಿಯ ವಿರುದ್ಧ ಭಾರತೀಯ ದಂಡ ಸಂಹಿತೆಯ (IPC) ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಈ ಬಗ್ಗೆ ಸೂಕ್ಷ್ಮವಾಗಿ ತನಿಖೆಯನ್ನು ಮುಂದುವರಿಸಿದ್ದಾರೆ.

\

ಈ ಹಿಂದೆ ಸೆಪ್ಟೆಂಬರ್‌ 5 ರಂದು ಮುಂಬೈ ಪೊಲೀಸ್‌ ಕಂಟ್ರೋಲ್‌ ರೂಮ್‌ಗೆ ಬೆದರಿಕೆ ಕರೆ ಬಂದಿತ್ತು. ಈ ಸಂಬಂಧ ಕಾಮತಿಪುರದಲ್ಲಿ ವ್ಯಕ್ತಿಯೊಬ್ಬನನ್ನ ಬಂಧಿಸಲಾಗಿತ್ತು. ಇದನ್ನೂ ಓದಿ: ನೌಕಾಪಡೆ 8 ಮಾಜಿ ಸಿಬ್ಬಂದಿಯ ಮರಣದಂಡನೆಗೆ ವಿರೋಧ – ಭಾರತದ ಮನವಿ ಸ್ವೀಕರಿಸಿದ ಕತಾರ್

Share This Article