Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Latest

ಮುಂಬೈ ದಾಳಿಯ ಮಾಸ್ಟರ್ ಮೈಂಡ್ ಹಫೀಜ್ ಸಯ್ಯದ್ ಬಂಧನ

Public TV
Last updated: July 17, 2019 4:08 pm
Public TV
Share
5 Min Read
hadiz
SHARE

ಲಾಹೋರ್: ಮುಂಬೈ ಹೋಟೆಲ್ ಮೇಲೆ ನಡೆದ ಉಗ್ರರ ದಾಳಿಯ ಮಾಸ್ಟರ್ ಮೈಂಡ್ ಜಮಾತ್ ಉದ್ ದಾವಾ(ಜೆಯುಡಿ) ಮುಖ್ಯಸ್ಥ ಹಫೀಜ್ ಸಯ್ಯದ್‍ನನ್ನು ಪೊಲೀಸರು ಬಂಧಿಸಿದ್ದಾರೆ.

ಪಾಕಿಸ್ತಾನದ ಪಂಜಾಬ್‍ನ ಕೌಂಟರ್ ಟೆರರಿಸಂ ಡಿಪಾರ್ಟ್‍ಮೆಂಟ್(ಸಿಟಿಡಿ) ಪೊಲೀಸರು ಹಫೀಜ್ ಸಯ್ಯದ್‍ನನ್ನು ಲಾಹೋರ್ ಬಳಿ ಬಂಧಿಸಿದ್ದಾರೆ. ಆತ ಗುಜ್ರಾನ್‍ವಾಲಾಗೆ ತೆರಳುತ್ತಿದ್ದ ವೇಳೆ ಲಾಹೋರ್ ಬಳಿ ಪೊಲೀಸರು ಬಂಧಿಸಿದ್ದು, ಇದೀಗ ನ್ಯಾಯಾಂಗ ಬಂಧನದಲ್ಲಿರಿಸಲಾಗಿದೆ.

Jamatud Dawa's Hafiz Saeed arrested and sent to judicial custody: Pakistan media (file pic) pic.twitter.com/1Txu9BlvoK

— ANI (@ANI) July 17, 2019

ಪಾಕಿಸ್ತಾನ ಮಂಗಳವಾರವಷ್ಟೇ ಭಾರತದ ವಿಮಾನಗಳಿಗೆ ಹೇರಿದ್ದ ವಾಯುಸೀಮೆ ನಿಷೇಧವನ್ನು ತೆಗೆದುಹಾಕಿತ್ತು. ಇದರ ಬೆನ್ನಲ್ಲೇ ಇಂದು ಹಫೀಜ್ ಸಯ್ಯದ್‍ನನ್ನು ಬಂಧಿಸಿ ಅಚ್ಚರಿಯ ನಿರ್ಧಾರವನ್ನು ಪ್ರಕಟಿಸಿದೆ.

ಇಮ್ರಾನ್ ಖಾನ್ ನೇತೃತ್ವದ ಸರ್ಕಾರಕ್ಕೆ ಉಗ್ರರ ಹಣಕಾಸು ವ್ಯವಸ್ಥೆಯ ಮೇಲಿನ ಕಣ್ಗಾವಲು ಸಂಸ್ಥೆಯಾದ ಹಣಕಾಸು ಕ್ರಮ ಕ್ರಿಯಾ ಪಡೆಯ (ಎಫ್‍ಎಟಿಎಫ್) ಎಚ್ಚರಿಕೆಯ ಬೆನ್ನಲ್ಲೇ ಈ ಕ್ರಮ ಕೈಗೊಂಡಿದೆ ಎನ್ನುವ ವಿಶ್ಲೇಷಣೆ ಕೇಳಿ ಬಂದಿದೆ.

Imran Khan

ಭಯೋತ್ಪಾದನೆ ಪ್ರೋತ್ಸಾಹಿಸಲು ಹಣ ನೀಡಿದ್ದಾನೆ ಎಂಬ ಆರೋಪದ ಮೇಲೆ ಹಫೀಜ್ ಸಯ್ಯದ್ ಹಾಗೂ ಆತನ 12 ಸಹಚರರನ್ನು ಬಂಧಿಸಲಾಗಿದೆ. ಭಯೋತ್ಪಾದನೆಗೆ ಸಂಬಂಧಿಸಿದಂತೆ ಈತನ ವಿರುದ್ಧ ಈಗಾಗಲೇ 23 ಪ್ರಕರಣಗಳು ದಾಖಲಾಗಿವೆ. ಹಿಂದೆ ಬಂಧನಕ್ಕೆ ಒಳಗಾದ ಸಂದರ್ಭದಲ್ಲಿ ಸೂಕ್ತ ಸಾಕ್ಷ್ಯಾಧಾರಗಳನ್ನು ನೀಡಿಲ್ಲ ಎಂಬ ಕಾರಣಕ್ಕೆ ಪಾಕಿಸ್ತಾನ ಕೋರ್ಟ್ ಜಾಮೀನು ಮಂಜೂರು ಮಾಡಿತ್ತು.

ಮುಂಬೈ ದಾಳಿಯ ಬಳಿಕ ಭಾರತ ಪಾಕಿಸ್ತಾನಕ್ಕೆ ಸಾಕಷ್ಟು ಸಾಕ್ಷ್ಯಾಧಾರಗಳನ್ನು ಸಲ್ಲಿಸಿದ್ದರೂ ಹಫೀಜ್ ವಿರುದ್ಧ ಯಾವುದೇ ಕ್ರಮ ತೆಗೆದುಕೊಂಡಿರಲಿಲ್ಲ. ಈ ಸಂಬಂಧ ಭಾರತ ವಿಶ್ವಸಂಸ್ಥೆಯಲ್ಲಿ ಹಲವು ಬಾರಿ ಪಾಕಿಸ್ತಾನ ಉಗ್ರರಿಗೆ ಸಹಾಯ ಮಾಡುವ ಮುಖವನ್ನು ಬಯಲು ಮಾಡಿತ್ತು.

mumbai taj hotel 4

ಇತ್ತಿಚೆಗೆ ಪಾಕಿಸ್ತಾನ ಕೌಂಟರ್ ಟೆರರಿಸಂ ಡಿಪಾರ್ಟ್‍ಮೆಂಟ್‍ನ ಮಾಹಿತಿ ಪ್ರಕಾರ, ಹಫೀಜ್ ವಿರುದ್ಧ 23 ಪ್ರಕರಣಗಳು ದಾಖಲಾಗಿವೆ. ಈತ ಐದು ಸಂಸ್ಥೆಗಳ ಮೂಲಕ ಹಣ ಸಂಗ್ರಹಿಸಿ ಭಯೋತ್ಪಾದಕರಿಗೆ ಹಣದ ಸಹಾಯ ಮಾಡುತ್ತಿದ್ದ ಎಂಬ ಆರೋಪದ ಮೇಲೆ 23 ಪ್ರಕರಣಗಳು ದಾಖಲಾಗಿವೆ ಎಂದು ತಿಳಿದು ಬಂದಿದೆ.

ಉಗ್ರರಿಗೆ ಹಣಕಾಸು ನೀಡುವ ಹಾಗೂ ಅಕ್ರಮ ಹಣ ವರ್ಗಾವಣೆ ಮಾಡುತ್ತಿರುವ ಜಾಲ ಹತ್ತಿಕ್ಕಿ, ಅಕ್ಟೋಬರ್ ಒಳಗಾಗಿ ಅವರ ವಿರುದ್ಧ ನಿರ್ದಿಷ್ಟ ಕ್ರಮ ಕೈಗೊಳ್ಳದಿದ್ದಲ್ಲಿ ಪಾಕಿಸ್ತಾನವನ್ನು ಕಪ್ಪು ಪಟ್ಟಿಗೆ ಸೇರಿಸಲಾಗುತ್ತದೆ ಎಂದು ಫೈನಾನ್ಶಿಯಲ್ ಆಕ್ಷನ್ ಟಾಸ್ಕ್ ಫೋರ್ಸ್(ಎಫ್‍ಎಟಿಎಫ್) ಈಗಾಗಲೇ ಎಚ್ಚರಿಕೆ ನೀಡಿದೆ.

imrankhan90989879 660 022719045802

ಫ್ಲೋರಿಡಾದ ಒರ್ಲಾಂಡೋದಲ್ಲಿ ನಡೆದ ಎಎಫ್‍ಎಟಿಎಫ್ ವಾರ್ಷಿಕ ಮಹಾಸಭೆಯಲ್ಲಿ ಉಗ್ರರನ್ನು ಹತ್ತಿಕ್ಕುವಲ್ಲಿ ಪಾಕಿಸ್ತಾನದ ವೈಫಲ್ಯದ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿತ್ತು. ಪ್ರಸ್ತುತ ಎಫ್‍ಎಟಿಎಫ್ ನಲ್ಲಿ ಪಾಕಿಸ್ತಾನ ಬೂದು ಬಣ್ಣದ ಪಟ್ಟಿಯಲ್ಲಿದೆ. ಆದರೆ ಉಗ್ರರಿಗೆ ಹಣ ನೀಡಿ ಸಹಾಯ ಮಾಡುತ್ತಿರುವ ಜಾಲದ ವಿರುದ್ಧ ಅಕ್ಟೋಬರ್ ಒಳಗೆ ಕ್ರಮ ಕೈಗೊಳ್ಳದಿದ್ದಲ್ಲಿ ಪಾಕಿಸ್ಥಾನವನ್ನು ಎಫ್‍ಎಟಿಎಫ್‍ನ ಕಪ್ಪು ಪಟ್ಟೆಗೆ ಸೇರಿಸಲಾಗುವುದು ಎಂದು ಎಚ್ಚರಿಸಿತ್ತು.

FATF Pakistan India

ಈ ಹಿಂದೆ ಉಗ್ರರ ದಮನದ ಕ್ರಿಯಾ ಯೋಜನೆ ಸಿದ್ಧಪಡಿಸಿ ಕ್ರಮ ಕೈಗೊಳ್ಳಲು ಜನವರಿಯವರೆಗೂ ಪಾಕ್‍ಗೆ ಗಡುವು ನೀಡಲಾಗಿತ್ತು. ಆದರೆ ಅದನ್ನು ಪೂರೈಸುವಲ್ಲಿ ಪಾಕ್ ವಿಫಲವಾಗಿತ್ತು. ಅಷ್ಟೇ ಅಲ್ಲದೆ ಮೇ 2019ರೊಳಗೆ ಉಗ್ರರ ವಿರುದ್ಧ ಕ್ರಮ ಕೈಗೊಳ್ಳಿ ಎಂದು ಗಡುವು ನೀಡಿತ್ತು. ಈ ಅವಕಾಶವನ್ನು ಕೂಡ ಉಪಯೋಗಿಸಿಕೊಳ್ಳುವಲ್ಲಿ ಪಾಕ್ ವಿಫಲವಾಗಿತ್ತು.

Pak

ಅಕ್ಟೋಬರ್ ನಲ್ಲಿ ನಡೆಯುವ ಮಹಾ ಸಭೆಯಲ್ಲಿ ಈ ಸಂಬಂಧ ವೋಟಿಂಗ್ ನಡೆಯಲಿದ್ದು ಅದರ ಆಧಾರದ ಮೇಲೆ ನಿರ್ಣಯ ಕೈಗೊಳ್ಳಲಾಗುತ್ತದೆ. ಈ ವೋಟಿಂಗ್ ಮೇಲೆ ಪಾಕಿಸ್ತಾನದ ಭವಿಷ್ಯ ನಿಂತಿದೆ.

ಲಷ್ಕರ್ ಸಂಘಟನೆಯ ಮುಖ್ಯಸ್ಥ ಹಫೀಜ್ ಸೈಯ್ಯದ್, ಜೈಷ್ ಸಂಘಟನೆಯ ಮುಖ್ಯಸ್ಥ ಅಜರ್ ಮೊಹಮ್ಮದ್ ನನ್ನು ವಿಶ್ವಸಂಸ್ಥೆ ಜಾಗತಿಕ ಉಗ್ರರ ಪಟ್ಟಿಗೆ ಸೇರಿಸಿದೆ. ಈ ಹಿನ್ನೆಲೆಯಲ್ಲಿ ಭಾರತವು ಎಫ್‍ಎಟಿಎಫ್‍ಗೆ ಪಾಕಿಸ್ಥಾನವನ್ನು ಕಪ್ಪು ಪಟ್ಟಿಗೆ ಸೇರಿಸುವಂತೆ ಮನವಿ ಮಾಡಿತ್ತು. ಅಲ್ಲದೆ ಪಾಕಿಸ್ಥಾನವನ್ನು ಕಪ್ಪು ಪಟ್ಟಿಗೆ ಸೇರಿಸುವುದನ್ನು ತಡೆಯಲು ಕನಿಷ್ಠ ಮೂರು ರಾಷ್ಟ್ರಗಳ ಬೆಂಬಲ ಇರಬೇಕು. ಈಗಾಗಲೇ ಚೀನಾ, ಮಲೇಷ್ಯಾ ಹಾಗೂ ಟರ್ಕಿ ದೇಶಗಳು ಪಾಕ್ ಪರ ನಿಂತಿದೆ ಎನ್ನಲಾಗುತ್ತಿದೆ.

Hafiz Saeedjpg

ಕಳೆದ ವರ್ಷದ ಪಾಕಿಸ್ಥಾನವನ್ನು ಬೂದು ಬಣ್ಣದ ಪಟ್ಟಿಗೆ ಸೇರಿಸಿದ ಮೇಲೆ ಎಫ್‍ಎಟಿಎಫ್ ಪಾಕ್‍ಗೆ 27 ಅಂಶಗಳುಳ್ಳ ಕ್ರಿಯಾ ಯೋಜನೆ ಪಟ್ಟಿಯನ್ನು ನೀಡಿತ್ತು. ಹಾಗೆಯೇ ಇದನ್ನು ಪೂರ್ಣಗೊಳಿಸಿದರೆ ಪಾಕಿಸ್ಥಾನವನ್ನು ಬೂದು ಬಣ್ಣದ ಪಟ್ಟಿಯಿಂದ ತೆಗೆಯಲಾಗುತ್ತದೆ ಎಂದು ಸೂಚಿಸಿತ್ತು. ಚೀನಾದಲ್ಲಿ ನಡೆದ ಸಭೆಯಲ್ಲಿ 27 ಅಂಶಗಳಲ್ಲಿ 18 ಅಂಶಗಳನ್ನು ಇನ್ನೂ ಪಾಕಿಸ್ಥಾನ ಬಾಕಿ ಉಳಿಸಿಕೊಂಡಿತ್ತು. ಅಲ್ಲದೆ ಅಕ್ಟೋಬರಿನಲ್ಲಿ ಎಫ್‍ಎಟಿಎಫ್ ಸಭೆಯಲ್ಲಿ ನಡೆಯುವ ವೋಟಿಂಗ್‍ನಲ್ಲಿ 36 ಮತದಲ್ಲಿ ಕನಿಷ್ಠ 15 ಮತ ಇಸ್ಲಾಮಾಬಾದ್ ಪಡೆದರೆ ಬೂದು ಪಟ್ಟಿಯಿಂದ ಅದನ್ನು ಮುಕ್ತಗೊಳಿಸಲಾಗುತ್ತದೆ ಎಂದು ಎಫ್‍ಎಟಿಎಫ್ ತಿಳಿಸಿತ್ತು.

ಬೂದು ಪಟ್ಟಿಯಲ್ಲಿ (ಗ್ರೇ ಲಿಸ್ಟ್) ಪಾಕಿಸ್ತಾನ ಮುಂದುವರಿಯುತ್ತಿರುವುದರಿಂದ ವಾರ್ಷಿಕವಾಗಿ 68 ಸಾವಿರ ಕೋಟಿ ರೂ. ನಷ್ಟ ಅನುಭವಿಸುತ್ತಿದೆ ಎಂದು ವಿದೇಶಾಂಗ ಸಚಿವ ಮೆಹಮ್ಮೂದ್ ಖುರೇಷಿ ತಿಳಿಸಿದ್ದಾರೆ. ಈಗ ಭಾರತ ಪಾಕಿಸ್ತಾನವನ್ನು ಕಪ್ಪು ಪಟ್ಟಿಗೆ ಸೇರಿಸಲು ಹರಸಹಾಸ ಪಡುತ್ತಿದೆ. ಇದಕ್ಕಾಗಿ ಅಂತರಾಷ್ಟ್ರೀಯ ಮಟ್ಟದಲ್ಲಿ ಲಾಬಿ ಮಾಡುತ್ತಿದೆ ಎಂದು ಹೇಳಿದ್ದಾರೆ. ಒಂದು ವೇಳೆ ಕಪ್ಪು ಪಟ್ಟಿಗೆ ಸೇರಿದ್ದೇ ಆದಲ್ಲಿ ನಮಗೆ ಭಾರೀ ನಷ್ಟವಾಗಲಿದೆ ಎಂದು ತಿಳಿಸಿದ್ದರು.

FATF 1

ಆಗಿದ್ದು ಏನು?
ಪುಲ್ವಾಮಾ ದಾಳಿಯಾದ ನಂತರ ಪಾಕಿಸ್ತಾನವನ್ನು ಯಾವುದೇ ಕಾರಣಕ್ಕೂ ಗ್ರೇ ಪಟ್ಟಿಯಿಂದ ಹೊರಗಡೆ ಇಡಬಾರದು ಎಂದು ಭಾರತ ಒತ್ತಾಯಿಸಿತ್ತು. ಇದರ ಬೆನ್ನಲ್ಲೇ ಫ್ರಾನ್ಸ್ ಸಹ ಪಾಕಿಸ್ತಾನವನ್ನು ಗ್ರೇ ಪಟ್ಟಿಯಲ್ಲೇ ಇರಿಸುವಂತೆ ಎಫ್‍ಎಟಿಎಫ್ ಮೇಲೆ ಒತ್ತಡ ಹಾಕಿತ್ತು.

ಉಗ್ರಗಾಮಿಗಳಿಗೆ ಪ್ರೋತ್ಸಾಹ ನೀಡುತ್ತಿರುವ ಪಾಕಿಸ್ತಾನದ ವಿರುದ್ಧ ಅಂತಾರಾಷ್ಟ್ರೀಯ ಮಟ್ಟದ ಒತ್ತಡ ಜಾಸ್ತಿಯಾದ ಹಿನ್ನೆಲೆಯಲ್ಲಿ ಎಫ್‍ಎಟಿಎಫ್ ಪಾಕಿಸ್ತಾನವನ್ನು ಮುಂದಿನ ಅಕ್ಟೋಬರ್ ವರೆಗೆ ಗ್ರೇ ಪಟ್ಟಿಯಲ್ಲಿ ಮುಂದುವರಿಸುವ ನಿರ್ಧಾರವನ್ನು ತೆಗೆದುಕೊಂಡಿದೆ. ಗ್ರೇ ಪಟ್ಟಿಯಿಂದ ಹೊರಗೆ ಬರಲು ಪಾಕಿಸ್ತಾನ ವಿಶ್ವದ ವಿವಿಧ ರಾಷ್ಟ್ರಗಳಲ್ಲಿ ಮನವಿ ಮಾಡಿತ್ತು. ಆದರೆ ಪಾಕ್ ಮನವಿಯನ್ನು ಇತರೇ ರಾಷ್ಟ್ರಗಳು ಗಂಭೀರವಾಗಿ ಸ್ವೀಕರಿಸಿರಲಿಲ್ಲ.

hafiz saeed released 1140x520

1989ರಲ್ಲಿ ಎಫ್‍ಎಟಿಎಫ್ ಸ್ಥಾಪಿಸಲಾಗಿದ್ದು, ಉಗ್ರರಿಗೆ ಹಣಕಾಸು ಪೂರೈಕೆ ತಡೆ, ಅಕ್ರಮ ಹಣ ವರ್ಗಾವಣೆ, ಅಂತರಾಷ್ಟ್ರೀಯ ಹಣಕಾಸು ವ್ಯವಸ್ಥೆ ಬೆದರಿಕೆ ಒಡ್ಡುವ ಕೃತ್ಯಗಳನ್ನು ತಡೆಯುವ ಕೆಲಸವನ್ನು ಈ ಕ್ರಿಯಾಪಡೆ ಮಾಡುತ್ತದೆ. ವಿಶ್ವದ ಒಟ್ಟು 38 ರಾಷ್ಟ್ರಗಳು ಎಫ್‍ಎಟಿಎಫ್ ಸದಸ್ಯ ರಾಷ್ಟ್ರಗಳಾಗಿವೆ. ತಾನು ನಿಗದಿಪಡಿಸಿದ ಕ್ರಮಗಳನ್ನು ಅನುಸರಿಸದೇ ಇದ್ದರೆ ಎಫ್‍ಎಟಿಎಫ್ ದೇಶಗಳನ್ನು ಗ್ರೇ ಅಥವಾ ಬ್ಲಾಕ್ ಲಿಸ್ಟ್ ಗೆ ಹಾಕುತ್ತದೆ. 2019ರ ಅಕ್ಟೋಬರ್ ಒಳಗಡೆ ಪಾಕಿಸ್ತಾನ ಎಫ್‍ಎಟಿಎಫ್ 27 ಬೇಡಿಕೆಯನ್ನು ಈಡೇರಿಸದೇ ಇದ್ದರೆ ಕಪ್ಪು ಪಟ್ಟಿಗೆ ಸೇರ್ಪಡೆಯಾಗುವ ಸಾಧ್ಯತೆಯಿದೆ.

ಏನಿದು ಗ್ರೇ ಲಿಸ್ಟ್?
ಫುಟ್ ಬಾಲ್ ಪಂದ್ಯಗಳಲ್ಲಿ ತಪ್ಪು ಮಾಡಿದ ಆಟಗಾರಿಗೆ ಹೇಗೆ ಹಳದಿ ಕಾರ್ಡ್ ನೀಡಿ ಎಚ್ಚರಿಕೆ ನೀಡುತ್ತಾರೋ ಅದೇ ರೀತಿಯಾಗಿ ರಾಷ್ಟ್ರವೊಂದಕ್ಕೆ ಮೊದಲ ಎಚ್ಚರಿಕೆ ನೀಡಲು ಈ ಪಟ್ಟಿಗೆ ಸೇರಿಸಲಾಗುತ್ತದೆ. ಗ್ರೇ ಪಟ್ಟಿಗೆ ಒಂದು ದೇಶ ಸೇರಿದರೆ ಅದಕ್ಕೆ ಹಲವು ಸಮಸ್ಯೆಗಳಾಗುತ್ತದೆ. ವಿವಿಧ ಹಣಕಾಸು ಸಂಸ್ಥೆಗಳು(ಐಎಂಎಫ್, ವಿಶ್ವಬ್ಯಾಂಕ್) ಸಾಲ ನೀಡಲು ಹಿಂದೇಟು ಹಾಕಬಹುದು. ಆರ್ಥಿಕ ನಿರ್ಬಂಧ ಹೇರಬಹುದು. ರಾಷ್ಟ್ರಗಳು ವ್ಯಾಪಾರವನ್ನು ಕಡಿತಗೊಳಿಸಬಹುದು. ರೇಟಿಂಗ್ ಏಜೆನ್ಸಿಗಳು ದೇಶಕ್ಕೆ ಕಡಿಮೆ ರೇಟಿಂಗ್ ಕೊಡಹುದು.

hafiz

ಏನಿದು ಕಪ್ಪು ಪಟ್ಟಿ?
ಎಫ್‍ಎಟಿಎಫ್ ನಿಗದಿ ಪಡಿಸಿದ ಮಾನದಂಡಕ್ಕೆ ಅನುಗುಣವಾಗಿ ಕೆಲಸ ಮಾಡದೇ ಇದ್ದರೆ ಗ್ರೇ ಪಟ್ಟಿಯಲ್ಲಿರುವ ದೇಶವನ್ನು ಕಪ್ಪು ಪಟ್ಟಿಗೆ ಸೇರಿಸಲಾಗುತ್ತದೆ.

ಪಾಕಿಸ್ತಾನಕ್ಕೆ ಹೊಸದೆನಲ್ಲ:
ಕುತಂತ್ರಿ ಪಾಕಿಸ್ತಾನಕ್ಕೆ ಗ್ರೇ ಪಟ್ಟಿಯಲ್ಲಿ ಸ್ಥಾನ ಪಡೆದಿರುವುದು ಹೊಸದೆನಲ್ಲ. ಈ ಹಿಂದೆ 2012 ರಿಂದ 2015 ರವರೆಗೆ ಗ್ರೇ ಪಟ್ಟಿಯಲ್ಲಿತ್ತು. ಭಾರತದ ನಿರಂತರ ಒತ್ತಡದ ಬಳಿಕ 2018ರ ಜೂನ್ ಕೊನೆಯಲ್ಲಿ ಗ್ರೇ ಪಟ್ಟಿಗೆ ಪಾಕಿಸ್ತಾನವನ್ನು ಸೇರಿಸಲಾಗಿತ್ತು. ಈಗಾಗಲೇ ಆರ್ಥಿಕ ಸಂಕಷ್ಟಕ್ಕೆ ಪಾಕಿಸ್ತಾನ ಸಿಲುಕಿದ್ದು ವಿಶ್ವದ ರಾಷ್ಟ್ರಗಳಿಂದ ಭಿಕ್ಷೆ ಬೇಡಿ ತಿನ್ನುವ ಪರಿಸ್ಥಿತಿಗೆ ಬಂದಿದೆ. ಒಂದು ವೇಳೆ ಕಪ್ಪು ಪಟ್ಟಿಗೆ ಸೇರ್ಪಡೆಯಾದರೆ ಈಗಾಗಲೇ ವಿವಿಧ ರಾಷ್ಟ್ರಗಳಿಂದ ಸಾಲ ಮಾಡಿ ಪಾಕಿಸ್ತಾನದ ಆರ್ಥಿಕ ಸ್ಥಿತಿ ಮತ್ತಷ್ಟು ಹದಗೆಟ್ಟು ಡೋಲಾಯಮಾನವಾಗಬಹುದು.

hafiz 2

TAGGED:detentionFATFHafeez SyedpakistanPublic TVUnited Nationsಎಫ್‍ಎಟಿಎಫ್ಪಬ್ಲಿಕ್ ಟಿವಿಪಾಕಿಸ್ತಾನಬಂಧನವಿಶ್ವಸಂಸ್ಥೆಹಫೀಜ್ ಸಯ್ಯದ್
Share This Article
Facebook Whatsapp Whatsapp Telegram

Cinema Updates

SAROJADEVI
ಸರೋಜಾದೇವಿ ವೈಕುಂಠ ಸಮಾರಾಧನೆ – ಭಾಗಿಯಾದ ಸೆಲೆಬ್ರೆಟಿಗಳು
Cinema Karnataka Latest Sandalwood Top Stories
Toxic movie
ಮತ್ತೆ ಟಾಕ್ಸಿಕ್ ಅಖಾಡಕ್ಕೆ ರಾಕಿಭಾಯ್
Cinema Latest Sandalwood Top Stories
Om Saiprakash
ಬಿಡುಗಡೆಗೂ ಮುನ್ನ ಓಂ ಸಾಯಿಪ್ರಕಾಶ್ ಚಿತ್ರಕ್ಕೆ ಅಂತಾರಾಷ್ಟ್ರೀಯ ಪ್ರಶಸ್ತಿ
Cinema Latest Sandalwood Top Stories
Bharjari Bachelors Zee Kannada 2
ಫಿನಾಲೆ ತಲುಪಿದ ಭರ್ಜರಿ ಬ್ಯಾಚುಲರ್ಸ್- ಗೆಲುವಿಗಾಗಿ ಸುನಿಲ್, ರಕ್ಷಕ್ ಬುಲೆಟ್ ಪೈಪೋಟಿ
Cinema Latest Sandalwood Top Stories
Ramya 2
ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗುತ್ತೆ ಎಂದು ನಂಬಿದ್ದೇನೆ: ರಮ್ಯಾ
Cinema Karnataka Latest Main Post

You Might Also Like

Joe Root
Cricket

ವಿಕೆಟ್‌ ಪಡೆಯಲು ಪರದಾಡಿದ ಬೌಲರ್‌ಗಳು – ಭರ್ಜರಿ 186 ರನ್‌ ಮುನ್ನಡೆಯಲ್ಲಿ ಇಂಗ್ಲೆಂಡ್‌

Public TV
By Public TV
10 minutes ago
An intelligence department constable committed suicide in Chikkamagaluru
Chikkamagaluru

ಚಿಕ್ಕಮಗಳೂರು | ಡೆತ್‌ನೋಟ್‌ ಬರೆದಿಟ್ಟು ಗುಪ್ತಚರ ಇಲಾಖೆ ಪೇದೆ ಆತ್ಮಹತ್ಯೆ

Public TV
By Public TV
36 minutes ago
01 10
Big Bulletin

ಬಿಗ್‌ ಬುಲೆಟಿನ್‌ 25 July 2025 ಭಾಗ-1

Public TV
By Public TV
39 minutes ago
02 11
Big Bulletin

ಬಿಗ್‌ ಬುಲೆಟಿನ್‌ 25 July 2025 ಭಾಗ-2

Public TV
By Public TV
40 minutes ago
03 8
Big Bulletin

ಬಿಗ್‌ ಬುಲೆಟಿನ್‌ 25 July 2025 ಭಾಗ-3

Public TV
By Public TV
41 minutes ago
Veda Krishnamurthy
Chikkamagaluru

ಅಂತಾರಾಷ್ಟ್ರೀಯ ಕ್ರಿಕೆಟಿಗೆ ಕನ್ನಡತಿ ವೇದಾ ಕೃಷ್ಣಮೂರ್ತಿ ವಿದಾಯ

Public TV
By Public TV
44 minutes ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?