ಮುಂಬೈ: ನೃತ್ಯ ನಿರ್ದೇಶಕ, ರಿಯಾಲಿಟಿ ಶೋ ಸ್ಫರ್ಧಿಯೋರ್ವ ಅಪ್ರಾಪ್ತೆಯನ್ನು ಅಪಹರಿಸಿ ಆಕೆಯ ಮೇಲೆ ಅತ್ಯಾಚಾರ ಗೈದ ಘಟನೆಯೊಂದು ಮುಂಬೈನಲ್ಲಿ ನಡೆದಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಆರೋಪಿಯನ್ನು ಬಂಧಿಸಿಲಾಗಿದೆ. ಸದ್ಯ ಆರೋಪಿ ಆದಿತ್ಯ ಗುಪ್ತಾ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
Advertisement
ಏನಿದು ಘಟನೆ?
17 ವರ್ಷದ ಸಂತ್ರಸ್ತೆಗೆ ಆರೋಪಿ ಆದಿತ್ಯಾ ಗುಪ್ತಾನೊಂದಿಗೆ ಸಾಮಾಜಿಕ ಜಾಲತಾಣದ ಮೂಲಕ ಪರಿಚಯವಾಗಿತ್ತು. ಹೀಗೆ ಪರಿಚಯವಾಗಿ ಆದಿತ್ಯ ಒಂದು ದಿನ ಸಂತ್ರಸ್ತೆಯನ್ನು ಭೇಟಿ ಮಾಡುವಂತೆ ತಿಳಿಸಿದ್ದನು. ಹೀಗಾಗಿ ಆಕೆ ಭೇಟಿ ಮಾಡಲು ಬಂದಾಗ ಆದಿತ್ಯಾ ಆಕೆಗೆ ಮತ್ತು ಬರುವ ಪಾನೀಯವನ್ನು ನೀಡಿ ಬಳಿಕ ಅಪಹರಿಸಿ, ಅತ್ಯಾಚಾರವೆಸಗಿದ್ದಾನೆ.
Advertisement
ಇತ್ತ ಕಾಲೇಜಿಗೆಂದು ಹೋದ ಮಗಳು ಮನೆಗೆ ವಾಪಸ್ಸಾಗದಿದ್ದಾಗ ಆತಂಕಗೊಂಡ ಪೋಷಕರು, ಮಗಳು ಅಪಹರಣವಾಗಿದ್ದಾಳೆಂದು ಅಂಧೇರಿ ಪಶ್ಚಿಮ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಹೀಗಾಗಿ ದೂರು ದಾಖಲಿಸಿಕೊಂಡ ಕ್ರೈಂ ಬ್ರ್ಯಾಂಚ್ ಪೊಲೀಸರು ತನಿಖೆ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ.
Advertisement
Advertisement
ಸೋಮವಾರದಂದು ಸ್ಥಳೀಯ ರೆಸ್ಟೋರೆಂಟ್ ಒಂದರ ಬಳಿ ಬಾಲಕಿ ಅರೆಪ್ರಜ್ಞಾ ಸ್ಥಿತಿಯಲ್ಲಿ ಪೊಲೀಸರಿಗೆ ಸಿಕ್ಕಿದ್ದಾಳೆ. ಕೂಡಲೇ ಪೊಲೀಸರು ಆಕೆಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದಾರೆ. ಆನಂತರ ಆಕೆಯ ಹೇಳಿಕೆಯನ್ನು ಪಡೆದಿದ್ದಾರೆ. ಬಾಲಕಿಯ ಹೇಳಿಕೆಯಂತೆ ಪೊಲಿಸರು ಆರೋಪಿಯನ್ನು ಬಂಧಿಸಿ, ವಿಚಾರಣೆ ನಡೆಸಿದ್ದಾರೆ. ಈ ವೇಳೆ ಆತ ತನ್ನ ತಪ್ಪೊಪ್ಪಿಕೊಂಡಿದ್ದಾನೆ ಎಂಬುದಾಗಿ ವರದಿಯಾಗಿದೆ.
ಸದ್ಯ ಪೊಲೀಸರು ಪ್ರಕರಣವನ್ನು ಸ್ಥಳೀಯ ಪೊಲೀಸರಿಗೆ ಹಸ್ತಾಂತರಿಸಿದ್ದು, ಆರೋಪಿ ವಿರುದ್ಧ ದೂರು ದಾಖಲಿಸಿಕೊಂಡು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಏನಿದು ಪೋಕ್ಸೋ ಕಾಯಿದೆ?
ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ, ಕಿರುಕುಳ ಪ್ರಕರಣ ದಾಖಲಾದಾಗ ಪೊಲೀಸರು ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಳ್ಳುತ್ತಾರೆ. ಮಕ್ಕಳ ರಕ್ಷಣೆಗೆಂದೆ ರೂಪಿತವಾಗಿರುವ ಕಾಯ್ದೆ ಇದಾಗಿದ್ದು, 18 ವರ್ಷದೊಳಗಿನ ಮಕ್ಕಳನ್ನು ಎಲ್ಲಾ ರೀತಿಯ ಲೈಂಗಿಕ ದೌರ್ಜನ್ಯಗಳಿಂದ ತಡೆದು ರಕ್ಷಣೆ ನೀಡುತ್ತದೆ. ನವೆಂಬರ್ 14, 2012ರಂದು ಈ ಕಾಯ್ದೆ ಜಾರಿಗೆ ಬಂದಿದೆ.