ಮುಂಬೈ: ಮಾದಕ ವಸ್ತು ನಿಯಂತ್ರಣ ಸಂಸ್ಥೆ(ಎನ್‍ಸಿಬಿ) ಬಂಧನದಲ್ಲಿರುವ ಬಾಲಿವುಡ್ ಸೂಪರ್ ಸ್ಟಾರ್ ಶಾರೂಖ್ ಖಾನ್ ಪುತ್ರ ಆರ್ಯನ್ ಖಾನ್ ಅಧಿಕಾರಿಗಳ ಮುಂದೆ ವಿಜ್ಞಾನ ಪುಸ್ತಕಕ್ಕೆ ಬೇಡಿಕೆಯಿಟ್ಟಿದ್ದಾರೆ ಎಂಬುದಾಗಿ ವರದಿಯಾಗಿದೆ.
ಹೌದು. ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್ಯನ್ ಖಾನ್‍ನನ್ನು ಎನ್‍ಸಿಬಿ ಬಂಧಿಸಿದೆ. ಸದ್ಯ ಬಂಧನದಲ್ಲಿರುವ ಆರ್ಯನ್ ತನಗೆ ವಿಜ್ಞಾನ ಪುಸ್ತಕ ನೀಡುವಂತೆ ಅಧಿಕಾರಿಗಳ ಮುಂದೆ ಕೋರಿಕೆ ಇಟ್ಟಿದ್ದಾರೆ. ಅದರಂತೆ ಅಧಿಕಾರಿಗಳು ಆರ್ಯನ್ ಗೆ ವಿಜ್ಞಾನ ಪುಸ್ತಕವನ್ನು ನೀಡಿದ್ದಾರೆ.
Advertisement
Advertisement
ಡ್ರಗ್ಸ್ ವ್ಯವಹಾರಕ್ಕೆ ಸಂಬಂಧಿಸಿದಂತೆ ಕೆಲವು ಮೆಸೇಜ್ ಗಳು ಸಿಕ್ಕಿದ್ದು, ಈ ಹಿನ್ನೆಲೆಯಲ್ಲಿ ಆರ್ಯನ್ ಮೊಬೈಲನ್ನು ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ಇದನ್ನೂ ಓದಿ: ಶಾರೂಖ್ ಪುತ್ರನ ಲೆನ್ಸ್ ಬಾಕ್ಸ್, ಇನ್ನೊಬ್ಬಳು ಯುವತಿಯ ಬ್ಯಾಗಲ್ಲಿದ್ದ ಸ್ಯಾನಿಟರಿ ಪ್ಯಾಡಲ್ಲಿತ್ತು ಮಾದಕ ವಸ್ತು!
Advertisement
Advertisement
ಶನಿವಾರ ಮಧ್ಯರಾತ್ರಿ ಖಚಿತ ಮಾಹಿತಿ ಆಧರಿಸಿ ಎನ್‍ಸಿಬಿ ಅಧಿಕಾರಿಗಳು ಮಾರುವೇಷದಲ್ಲಿ ಕಾರ್ಯಾಚರಣೆ ನಡೆಸಿದ್ದರು. ಈ ವೇಳೆ ಶಾರೂಖ್ ಪುತ್ರ ಸೇರಿ 8 ಮಂದಿಯನ್ನು ವಶಕ್ಕೆ ಪಡೆದಿದ್ದ ಎನ್‍ಸಿಬಿ ಹೆಚ್ಚಿನ ವಿಚಾರಣೆ ನಡೆಸಿ ಬಂಧಿಸಿತ್ತು. ಬಳಿಕ ಶಾರೂಖ್ ಪುತ್ರ ಹಾಗೂ ಇನ್ನಿಬ್ಬರನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿತ್ತು. ಜಾಮೀನು ಅರ್ಜಿ ವಿಚಾರಣೆ ನಡೆಸಿದ ಕೋರ್ಟ್, ಆರ್ಯನ್‍ನನ್ನು ಹೆಚ್ಚಿನ ವಿಚಾರಣೆಗಾಗಿ ಅಕ್ಟೋಬರ್ 7ರವರೆಗೂ ಎನ್‍ಸಿಬಿ ವಶಕ್ಕೆ ನೀಡಿದೆ. ಇದನ್ನೂ ಓದಿ: ‘ಟೇಕ್ ಕೇರ್ ಕಿಂಗ್’ ಎಂದ ಶಾರೂಖ್ ಅಭಿಮಾನಿಗಳು
ಶಾರೂಖ್ ಖಾನ್ ಪುತ್ರ ಸೇರಿ 8 ಮಂದಿಯನ್ನು ಎನ್‍ಸಿಬಿ ಬಂಧಿಸುತ್ತಿದ್ದಂತೆಯೇ ಆ ಉಳಿದ 7 ಮಂದಿ ಯಾರು ಎಂಬ ಕುತೂಹಲ ಎಲ್ಲರಲ್ಲೂ ಇತ್ತು. ಈಗ ಒಬ್ಬೊಬ್ಬರದೇ ವಿವರ ಬಹಿರಂಗವಾಗುತ್ತಿದೆ. ಶಾರೂಖ್ ಪುತ್ರ ಆರ್ಯನ್ ಖಾನ್ ಜೊತೆ ಬಂಧಿತ ಯುವತಿಯ ಹೆಸರು ಮುನ್‍ಮುನ್ ಧಮೇಚಾ ಎಂದು ಗೊತ್ತಾಗಿದೆ. ಆರ್ಯನ್ ಗೆಳೆಯ ಅರ್ಬಾಜ್ ಸೇಥ್ ಮರ್ಚಂಟ್ ಕೂಡಾ ಇವರ ಜೊತೆಗಿದ್ದ ಎನ್ನಲಾಗಿದೆ. ಇದನ್ನೂ ಓದಿ: ಮುಂಬೈ ಡ್ರಗ್ಸ್ ಪ್ರಕರಣ – ಐಷಾರಾಮಿ ಹಡಗಿನಲ್ಲಿ ತಗ್ಲಾಕ್ಕೊಂಡ ಬೆಂಗಳೂರಿಗರು..!