ಮುಂಬೈ: ಮಹಿಳಾ ಪ್ರೀಮಿಯರ್ ಲೀಗ್ (WPL 2023) ಚೊಚ್ಚಲ ಆವೃತ್ತಿಯಲ್ಲಿ ಹರ್ಮನ್ ಪ್ರೀತ್ ಕೌರ್ (Harmanpreet Kaur) ನಾಯಕತ್ವದ ಮುಂಬೈ ಇಂಡಿಯನ್ಸ್ (Mumbai Indians) ತಂಡವು ಡೆಲ್ಲಿ ಕ್ಯಾಪಿಟಲ್ಸ್ (Delhi Capitals) ವಿರುದ್ಧ ರೋಚಕ ಜಯ ಸಾಧಿಸಿ ಚಾಂಪಿಯನ್ ಪಟ್ಟಕ್ಕೇರಿದೆ.
ರೋಚಕ ಫೈನಲ್ ಪಂದ್ಯದಲ್ಲಿ ಜವಾಬ್ದಾರಿಯುತ ಬ್ಯಾಟಿಂಗ್ ಹಾಗೂ ಶಿಸ್ತಿನ ಬೌಲಿಂಗ್ ದಾಳಿ ನಡೆಸಿದ ಮುಂಬೈ ಇಂಡಿಯನ್ಸ್ ತಂಡವು ಚಾಂಪಿಯನ್ ಆಗಿ ಹೊರಹೊಮ್ಮಿದೆ. ಕೊನೆಯ 12 ಎಸೆತಗಳಲ್ಲಿ ಮುಂಬೈಗೆ 21 ರನ್‌ಗಳ ಅಗತ್ಯವಿತ್ತು. ಈ ವೇಳೆ ಅಮೇಲಿಯ ಕೇರ್ 19ನೇ ಓವರ್‌ನಲ್ಲಿ ಭರ್ಜರಿ 3 ಬೌಂಡರಿ ಬಾರಿಸಿ ಗೆಲುವಿನ ಹಾದಿ ಸುಗಮವಾಗಿಸಿದರು. ಕೊನೆಯ ಓವರ್‌ನ 3ನೇ ಎಸೆತದಲ್ಲೇ ಬ್ರಂಟ್ ಬೌಂಡರಿ ಸಿಡಿಸುವ ಮೂಲಕ ಜಯ ತಂದುಕೊಟ್ಟರು. ಇದನ್ನೂ ಓದಿ: WPL 2023: ಮುಂಬೈ ಫೈನಲ್‌ಗೆ – ಯುಪಿ ವಾರಿಯರ್ಸ್ ಮನೆಗೆ
Advertisement
Advertisement
ಮೊದಲು ಬ್ಯಾಟಿಂಗ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ತಂಡವು 20 ಓವರ್‌ಗಳಲ್ಲಿ 9 ವಿಕೆಟ್ ಕಳೆದುಕೊಂಡು 131 ರನ್ ಗಳಿಸಿತು. 132 ರನ್ ಗುರಿ ಬೆನ್ನತ್ತಿದ ಮುಂಬೈ 19.3 ಓವರ್‌ಗಳಲ್ಲಿ 3 ವಿಕೆಟ್ ನಷ್ಟಕ್ಕೆ 134 ರನ್ ಗಳಿಸಿ 7 ವಿಕೆಟ್‌ಗಳ ರೋಚಕ ಜಯ ಸಾಧಿಸಿತು.
Advertisement
Advertisement
ಚೇಸಿಂಗ್ ಆರಂಭಿಸಿದ ಮುಂಬೈ ಆರಂಭದಲ್ಲೇ ವಿಕೆಟ್ ಕಳೆದುಕೊಂಡು ನಿಧಾನಗತಿಯ ಬ್ಯಾಟಿಂಗ್ ಆರಂಭಿಸಿತು. ಆರಂಭಿಕರಾದ ಹೇಲಿ ಮ್ಯಾಥಿವ್ಸ್ 13 ರನ್, ಯಸ್ತಿಕಾ ಭಾಟಿಯಾ 4 ರನ್ ಗಳಿಸಿ ಪೆವಿಲಿಯನ್ ಸೇರಿಕೊಂಡರು. 3ನೇ ವಿಕೆಟ್‌ನಲ್ಲಿ ಒಂದಾದ ನಾಟ್ ಸ್ಕಿವರ್ ಬ್ರಂಟ್, ಹರ್ಮನ್ ಪ್ರೀತ್ ಕೌರ್ ತಾಳ್ಮೆಯ ಆಟವಾಡಿದರು. 74 ಎಸೆತಗಳಲ್ಲಿ ಈ ಜೋಡಿ 72 ರನ್ ಗಳಿಸಿತ್ತು. ಇದರಿಂದ ತಂಡದಲ್ಲಿ ಗೆಲುವಿನ ಆಸೆ ಚಿಗುರಿತು. ಅಷ್ಟರಲ್ಲಿ 37 ರನ್ (39 ಎಸೆತ 5 ಬೌಂಡರಿ) ಗಳಿಸಿ ಆಟವಾಡುತ್ತಿದ್ದ ಹರ್ಮನ್‌ಪ್ರೀತ್ ಕೌರ್ ರನೌಟ್‌ಗೆ ತುತ್ತಾಗಿ ಆಘಾತ ನೀಡಿದರು. ಇದನ್ನೂ ಓದಿ: ಐಪಿಎಲ್- ಆರ್‌ಸಿಬಿ ಕೆಲವು ಪಂದ್ಯಗಳಿಗೆ ಮ್ಯಾಕ್ಸ್‌ವೆಲ್ ಅನುಮಾನ
ನಂತರ ತನ್ನ ಜವಾಬ್ದಾರಿಯುತ ಬ್ಯಾಟಿಂಗ್ ಮುಂದುವರಿಸಿದ ಸ್ಕಿವರ್ ಬ್ರಂಟ್ ಅರ್ಧಶತಕ ಗಳಿಸುವ ಜೊತೆಗೆ ಕೊನೆಯವರೆಗೂ ಹೋರಾಡಿ ತಂಡವನ್ನು ಗೆಲುವಿನ ಹಾದಿಗೆ ತಂದರು. ಬ್ರಂಟ್ 55 ಎಸೆತಗಳಲ್ಲಿ 7 ಬೌಂಡರಿಗಳೊಂದಿಗೆ 60 ರನ್ ಸಿಡಿಸಿ ಮಿಂಚಿದರೆ, ಕೊನೆಯಲ್ಲಿ ಅಮೇಲಿ ಕೇರ್ 8 ಎಸೆತಗಳಲ್ಲಿ 14 ರನ್ ಚಚ್ಚಿದರು. ಅಂತಿಮವಾಗಿ ಮುಂಬೈ ಇಂಡಿಯನ್ಸ್ 19.3 ಓವರ್‌ಗಳಲ್ಲಿ 134 ರನ್ ಗಳಿಸಿ ಗೆಲುವಿನ ನಗೆ ಬೀರಿತು.
ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ಆರಂಭದಲ್ಲೇ ವಿಕೆಟ್ ಕಳೆದುಕೊಳ್ಳುವ ಮೂಲಕ ಒತ್ತಡಕ್ಕೆ ಸಿಲುಕಿತು. ಉತ್ತಮ ಫಾರ್ಮ್‌ನಲ್ಲಿದ್ದ ಸ್ಫೋಟಕ ಬ್ಯಾಟರ್ ಶಫಾಲಿ ವರ್ಮಾ ಮೊದಲ ಓವರ್‌ನಲ್ಲೇ ವಿಕೆಟ್ ಒಪ್ಪಿಸಿ ಹೊರನಡೆದರು.
ಶಫಾಲಿ ವರ್ಮಾ 4 ಎಸೆತಗಳಲ್ಲಿ 11 ರನ್ ಗಳಿಸಿ ಔಟಾಗುವ ಮೂಲಕ ನಿರಾಸೆ ಅನುಭವಿಸಿದರು. ಅಲಿಸ್ಸಾ ಕ್ಯಾಪ್ಸಿ ಕೂಡ ಮೊದಲ ಎಸೆತದಲ್ಲೇ ಇಸ್ಸಿ ವಾಂಗ್‌ಗೆ ವಿಕೆಟ್ ಒಪ್ಪಿಸಿದರು. ಜೆಮಿಮಾ ರೊಡ್ರಿಗಸ್ ಕೂಡ ಹೆಚ್ಚು ಹೊತ್ತು ಕ್ರೀಸ್‌ನಲ್ಲಿ ನಿಲ್ಲಲಿಲ್ಲ, 8 ಎಸೆತಗಳಲ್ಲಿ 9 ರನ್ ಗಳಿಸಿ ಕ್ಯಾಚ್ ನೀಡಿದರು. ಇದನ್ನೂ ಓದಿ: ಪ್ರಶ್ನೆಪತ್ರಿಕೆಯಲ್ಲಿ ಕೊಹ್ಲಿ ಫೋಟೋ ನೋಡಿ ವಿದ್ಯಾರ್ಥಿಗಳು ಶಾಕ್!
ಮೆಗ್ ಲ್ಯಾನಿಂಗ್ ಮತ್ತು ಮಾರಿಜಾನ್ನೆ ಕಪ್ 21 ಎಸೆತಗಳಲ್ಲಿ 18 ರನ್ ಗಳಿಸಿ ಔಟಾದರು. 29 ಎಸೆತಗಳಲ್ಲಿ 35 ರನ್ ಗಳಿಸಿ ಉತ್ತಮವಾಗಿ ಆಡುತ್ತಿದ್ದ ನಾಯಕಿ ಮೆಗ್ ಲ್ಯಾನಿಂಗ್ ಬೇಡದ ರನ್ ಕದಿಯಲು ಹೋಗಿ ರನೌಟ್‌ಗೆ ಬಲಿಯಾದರು. ಜೆಸ್ ಜೊನಾಸ್ಸೆನ್ 11 ಎಸೆತಗಳಲ್ಲಿ 2 ರನ್ ಗಳಿಸಿ ನಿರಾಸೆ ಮೂಡಿಸಿದರು. ಅರುಂಧತಿ ರಾಯ್ ಶೂನ್ಯಕ್ಕೆ ಔಟಾದರು.
ಒಂದು ಹಂತದಲ್ಲಿ 100 ರನ್‌ಗಳ ಗಡಿ ದಾಟುವುದೇ ಕಷ್ಟ ಎನ್ನುವಂತಿದ್ದಾಗ ಕೊನೆಯಲ್ಲಿ ಶಿಖಾ ಪಾಂಡೆ ಮತ್ತು ರಾಧಾ ಯಾದವ್ ಭರ್ಜರಿ ಸಿಕ್ಸರ್, ಬೌಂಡರಿಗಳ ಆಟವಾಡಿ ತಂಡಕ್ಕೆ ಆಸರೆಯಾದರು. ಮುರಿಯದ ಕೊನೆಯ ವಿಕೆಟ್ ಜೊತೆಯಾಟಕ್ಕೆ ಈ ಜೋಡಿ 24 ಎಸೆತಗಳಲ್ಲಿ 52 ರನ್ ಚಚ್ಚಿತ್ತು. ರಾಧಾಯಾದವ್ 12 ಎಸೆತಗಳಲ್ಲಿ ಅಜೇಯ 27 ರನ್ ಗಳಿಸಿದರೆ, ಶಿಖಾ ಪಾಂಡೆ 17 ಎಸೆತಗಳಲ್ಲಿ ಅಜೇಯ 27 ರನ್ ಗಳಿಸಿದರು.
ಬಿಗಿ ಬೌಲಿಂಗ್ ದಾಳಿ ನಡೆಸಿದ ಮುಂಬೈ ಇಂಡಿಯನ್ಸ್ ತಂಡದ ಪರವಾಗಿ ಇಸ್ಸಿ ವಾಂಗ್ 4 ಓವರ್ ಗಳಲ್ಲಿ 42 ರನ್ ನೀಡಿ 3 ವಿಕೆಟ್ ಪಡೆದರು. ಹೇಲಿ ಮ್ಯಾಥ್ಯೂಸ್ 4 ಓವರ್ ಗಳಲ್ಲಿ ಕೇವಲ 5 ರನ್ ನೀಡಿ 3 ವಿಕೆಟ್ ಪಡೆದರು. ಅಮೆಲಿ ಕೆರ್ 4 ಎಸೆತಗಳಲ್ಲಿ 18 ರನ್ ನೀಡಿ 2 ವಿಕೆಟ್ ಪಡೆದು ಮಿಂಚಿದರು.