Connect with us

Crime

ಸರಣಿ ಅಪಘಾತ- ಸ್ಥಳದಲ್ಲೇ ಐವರು ಸಾವು, ಐವರು ಗಂಭೀರ ಗಾಯ

Published

on

ಮುಂಬೈ: ವಾಹನಗಳು ಒಂದಕ್ಕೊಂದು ಡಿಕ್ಕಿ ಹೊಡೆದುಕೊಂಡ ಪರಿಣಾಮ ಐವರು ಸ್ಥಳದಲ್ಲೇ ಮೃತಪಟ್ಟಿದ್ದು, ಐವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಹಾರಾಷ್ಟ್ರದ ಕೋಪೋಲಿ ಬಳಿ ನಡೆದಿದೆ.


ನಿನ್ನೆ ತಡರಾತ್ರಿ ಈ ಘಟನೆ ಸಂಭವಿಸಿದ್ದು ಮುಂಬೈ-ಪುಣೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಒಂದಕ್ಕೊಂದು ವಾಹನಗಳು ಡಿಕ್ಕಿ ಹೊಡೆದುಕೊಂಡು ಸರಣಿ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಗಾಯಗೊಂಡಿರುವವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

ಖಲ್ಲಾಪುರ ಟೋಲ್ ಪ್ಲಾಜಾ ಬಳಿ 2 ಟ್ರಕ್ ಮತ್ತು ಕಾರಿಗೆ, ಗೂಡ್ಸ್ ವಾಹನ ಹಿಂದಿನಿಂದ ಬಂದು ಡಿಕ್ಕಿ ಹೊಡೆದಾಗ ಅಪಘಾತ ಸಂಭವಿಸಿದೆ ಎಂದು ಪೆÇಲೀಸರು ತಿಳಿಸಿದ್ದಾರೆ. ಟ್ರಕ್ ವೇಗವಾಗಿ ಬರುತ್ತಿತ್ತು. ಈ ವೇಳೆ ಟ್ರಕ್ ಮೇಲೆ ನಿಯಂತ್ರಣವನ್ನು ಕಳೆದುಕೊಂಡಾಗ ಈ ಅಪಘಾತ ಸಂಭವಿಸಿದೆ. ಈ ಅಪಘಾತದ ಕುರಿತಾಗಿ ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.

Click to comment

Leave a Reply

Your email address will not be published. Required fields are marked *