– ಧಾರ್ಮಿಕ ಸ್ಥಳಗಳು, ಜನನಿಬಿಡ ಪ್ರದೇಶಗಳಲ್ಲಿ ಹೆಚ್ಚಿದ ಭದ್ರತೆ
ಮುಂಬೈ: ಮುಂಬೈನಲ್ಲಿ (Mumbai) ಭಯೋತ್ಪಾದನಾ ಬೆದರಿಕೆಯ ಬಗ್ಗೆ ಕೇಂದ್ರೀಯ ಸಂಸ್ಥೆಗಳು ಎಚ್ಚರಿಕೆ ನೀಡಿದ ನಂತರ ಜನನಿಬಿಡ ಪ್ರದೇಶಗಳಲ್ಲಿ ಪೊಲೀಸರು ಭದ್ರತೆಯನ್ನು ಹೆಚ್ಚಿಸಿದ್ದಾರೆ.
Advertisement
ಮುಂಬೈನ ಅನೇಕ ಧಾರ್ಮಿಕ ಸ್ಥಳಗಳು ಮತ್ತು ಇತರ ಜನನಿಬಿಡ ಸ್ಥಳಗಳಲ್ಲಿ ಭದ್ರತಾ ವ್ಯವಸ್ಥೆಗಳನ್ನು ಹೆಚ್ಚಿಸಲಾಗಿದೆ. ಧಾರ್ಮಿಕ ಮತ್ತು ಜನಸಂದಣಿ ಇರುವ ಸ್ಥಳಗಳಲ್ಲಿ “ಮಾಕ್ ಡ್ರಿಲ್” ನಡೆಸಲು ಪೊಲೀಸ್ ಸಿಬ್ಬಂದಿಗೆ ತಿಳಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದವರಿಗೆ ಗಂಗಾಜಲ, ಗೋಮೂತ್ರ ಪ್ರೋಕ್ಷಣೆ ಮಾಡಿ ‘ಶುದ್ಧೀಕರಣ’
Advertisement
Advertisement
ನಗರದ ಡಿಸಿಪಿಗಳು (ಡೆಪ್ಯುಟಿ ಕಮಿಷನರ್ ಆಫ್ ಪೊಲೀಸ್) ತಮ್ಮ ತಮ್ಮ ವಲಯಗಳಲ್ಲಿ ಭದ್ರತಾ ವ್ಯವಸ್ಥೆಗಳ ಬಗ್ಗೆ ವಿಶೇಷ ಗಮನ ಹರಿಸುವಂತೆ ಕೇಳಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಯಾವುದೇ ಅನುಮಾನಾಸ್ಪದ ಚಟುವಟಿಕೆ ಕಂಡುಬಂದಲ್ಲಿ ಮಾಹಿತಿ ನೀಡುವಂತೆ ನಗರದ ದೇವಸ್ಥಾನಗಳಿಗೆ ಸೂಚನೆ ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ.
Advertisement
ಎರಡು ಪ್ರಸಿದ್ಧ ಧಾರ್ಮಿಕ ಕ್ಷೇತ್ರಗಳನ್ನು ಹೊಂದಿರುವ ಜನನಿಬಿಡ ಕ್ರಾಫರ್ಡ್ ಮಾರುಕಟ್ಟೆ ಪ್ರದೇಶದಲ್ಲಿ ಶುಕ್ರವಾರ ಪೊಲೀಸರು ಅಣಕು ಡ್ರಿಲ್ ನಡೆಸಿದರು. ಆದರೆ, ಇದು ಹಬ್ಬ-ಹರಿದಿನಗಳ ಮುನ್ನಾ ಭದ್ರತಾ ಕಸರತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: Madhya Pradesh | ಅತ್ಯಾಚಾರವೆಸಗಿ ಕಾಡಲ್ಲಿ ತಲೆಮರೆಸಿಕೊಂಡಿದ್ದವನ ಪತ್ತೆಗೆ ನೈಟ್ ವಿಷನ್ ಡ್ರೋನ್ ಬಳಕೆ
10 ದಿನಗಳ ಗಣೇಶ ಚತುರ್ಥಿ ಹಬ್ಬವನ್ನು ಆಚರಿಸಿದ ಮುಂಬೈ ಈಗ ದುರ್ಗಾಪೂಜೆ, ದಸರಾ ಮತ್ತು ದೀಪಾವಳಿಗೆ ತಯಾರಿ ನಡೆಸುತ್ತಿದೆ. 288 ಸದಸ್ಯ ಬಲದ ಮಹಾರಾಷ್ಟ್ರ ರಾಜ್ಯ ವಿಧಾನಸಭೆಗಳಿಗೆ ನವೆಂಬರ್‌ನಲ್ಲಿ ಚುನಾವಣೆ ನಡೆಯುವ ಸಾಧ್ಯತೆ ಇದೆ.