– ಮುಂದಿನ 48 ಗಂಟೆ ಭಾರೀ ಮಳೆ ಎಚ್ಚರಿಕೆ
ಮುಂಬೈ: ಮಂಗಳವಾರ ರಾತ್ರಿ ಸುರಿದ ಭಾರೀ ಮಳೆಯಿಂದ(Heavy Rain) ಮುಂಬೈನ(Mumbai) ಹಲವು ಭಾಗಗಳು ಜಲಾವೃತಗೊಂಡಿವೆ. ರಸ್ತೆಗಳಲ್ಲಿ ನೀರು ನಿಂತಿದ್ದು, ವಾಹನ ಸಂಚಾರಕ್ಕೆ ತೊಂದರೆಯಾಗಿದೆ. ಹಲವೆಡೆ ಮರಗಳು ಉರುಳಿಬಿದ್ದಿದ್ದು, ಕೆಲವು ಪ್ರದೇಶಗಳಲ್ಲಿ ಗೋಡೆ ಕುಸಿತದ ಘಟನೆಗಳೂ ವರದಿಯಾಗಿವೆ. ಭಾರತೀಯ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ನೀಡಿದ್ದು, ಮುಂದಿನ 48 ಗಂಟೆ ಭಾರೀ ಮಳೆ ಎಚ್ಚರಿಕೆ ನೀಡಲಾಗಿದೆ.
ಮಂಗಳವಾರ ರಾತ್ರಿ 8:30 ರಿಂದ ಬುಧವಾರ ಬೆಳಗ್ಗೆ 5:30ರ ನಡುವೆ ರಾಮ ಮಂದಿರ, ಕೊಲಾಬಾ ಹಾಗೂ ಸಾಂತಾಕ್ರೂಜ್ ಪ್ರದೇಶಗಳಲ್ಲಿ 200 ಮಿ.ಮೀ.ಗಿಂತ ಹೆಚ್ಚು ಮಳೆಯಾಗಿದೆ. ರಾಮ ಮಂದಿರದಲ್ಲಿ 224 ಮಿ.ಮೀ., ಕೊಲಾಬಾದಲ್ಲಿ 218.5 ಮಿ.ಮೀ. ಹಾಗೂ ಸಾಂತಾಕ್ರೂಜ್‌ನಲ್ಲಿ 210.6 ಮಿ.ಮೀ. ಮಳೆಯಾಗಿದೆ.ಗಾಯಗೊಂಡಿದ್ದಾರೆ.ಇದನ್ನೂ ಓದಿ: ಡ್ಯೂಟಿಯಲ್ಲಿರುವಾಗಲೇ ಹೃದಯಾಘಾತ – ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು
ಭಾರೀ ಮಳೆಯಿಂದ ರೈಲು ಸಂಚಾರಕ್ಕೂ ಹೊಡೆತ ಬಿದ್ದಿದೆ. ತುರ್ಭೆ ಮತ್ತು ಕೋಪರ್ಖೈರನೆ ನಿಲ್ದಾಣಗಳ ನಡುವೆ ಹಳಿ ಕುಸಿತ ಉಂಟಾದ ಹಿನ್ನೆಲೆಯಲ್ಲಿ ಕೆಲಕಾಲ ರೈಲು ಸೇವೆಯಲ್ಲಿ ವ್ಯತ್ಯಯ ಉಂಟಾಯಿತು. ನಂತರ ಹಳಿಯನ್ನು ದುರಸ್ತಿ ಮಾಡಿ ರೈಲು ಸಂಚಾರವನ್ನು ಪುನರಾರಂಭಿಸಲಾಯಿತು. ಆದರೆ, ಪರಿಸ್ಥಿತಿ ಇದೀಗ ನಿಧಾನವಾಗಿ ಸಹಜ ಸ್ಥಿತಿಗೆ ಮರಳುತ್ತಿದೆ. ನೀರು ನಿಂತಿದ್ದ ಹಲವು ಪ್ರದೇಶಗಳಲ್ಲಿ ನೀರು ಇಳಿದಿದ್ದು, ಸಂಚಾರವೂ ಸಾಮಾನ್ಯಗೊಂಡಿದೆ. ಮಳೆ ಚಟುವಟಿಕೆ ಮುಂದುವರಿಯುವ ಸಾಧ್ಯತೆ ಇರುವುದರಿಂದ, ನಗರದಲ್ಲಿ ನಾಗರಿಕ ಹಾಗೂ ವಿಪತ್ತು ನಿರ್ವಹಣಾ ತಂಡಗಳು ಕಟ್ಟೆಚ್ಚರ ವಹಿಸಿ ಪರಿಸ್ಥಿತಿಯ ಮೇಲೆ ನಿಗಾ ಇಟ್ಟಿವೆ.ಇದನ್ನೂ ಓದಿ: ದಾವಣಗೆರೆಯಲ್ಲಿ ಜಿಹಾದಿ ಸಂಚು ಬಯಲು: ರಾಮಮಂದಿರ ಸ್ಫೋಟಿಸಲು ಸ್ಕೆಚ್, ಶಸ್ತ್ರಾಸ್ತ್ರ ಹಿಡಿದು ಫೋಟೋಶೂಟ್
