ಮುಂಬೈ: ಇಲ್ಲಿನ ತಾಜ್ ಹೋಟೆಲ್ ಮತ್ತು ವಿಮಾನ ನಿಲ್ದಾಣದಲ್ಲಿ ಬಾಂಬ್ ಇರಿಸಲಾಗಿದೆ (Bomb Threat) ಎಂದು ಮುಂಬೈ ಪೊಲೀಸ್ ಕಂಟ್ರೋಲ್ ರೂಮ್‌ಗೆ ಬೆದರಿಕೆ ಕರೆ ಬಂದಿದೆ.
ಬೆದರಿಕೆ ಕರೆ ಬಂದ ಹಿನ್ನೆಲೆ ಬಾಂಬ್ ಪತ್ತೆ ಮತ್ತು ನಿಷ್ಕ್ರಿಯ ದಳ, ಶ್ವಾನ ದಳದೊಂದಿಗೆ ಪೊಲೀಸರು (Mumbai Police) ಸ್ಥಳಕ್ಕೆ ದೌಡಾಯಿಸಿ ತೀವ್ರ ತಪಾಸಣೆ ನಡೆಸಿದ್ದಾರೆ. ಈ ವೇಳೆ ಅನುಮಾನಾಸ್ಪದವಾದ ಯಾವುದೇ ವಸ್ತುಗಳು ಪತ್ತೆಯಾಗಿಲ್ಲ. ದೂರವಾಣಿ ಕರೆಯ ಲೊಕೇಶನ್ ಉತ್ತರ ಪ್ರದೇಶದಲ್ಲಿ (Uttar Pradesh) ಪತ್ತೆಯಾಗಿದೆ ಎಂದಿರುವ ಪೊಲೀಸರು ಕಿಡಿಗೇಡಿಗಳಿಗಾಗಿ ಶೋಧಕಾರ್ಯ ಆರಂಭಿಸಿದ್ದಾರೆ. ಇದನ್ನೂ ಓದಿ: ಬಿಹಾರದಲ್ಲಿ ರಾಹುಲ್ ಪ್ರಚಾರದ ವೇಳೆ ಕುಸಿದ ವೇದಿಕೆ
ಇತ್ತೀಚೆಗಷ್ಟೇ ದೆಹಲಿಯ ಸುಮಾರು 130 ಶಾಲೆಗಳಿಗೆ ಬಾಂಬ್ ಬೆದರಿಕೆ ಬಂದಿತ್ತು. ಇದಾದ ಎರಡು ದಿನಗಳ ನಂತರ ಜೈಪುರದ ಶಾಲೆಗಳಿಗೂ ಬಾಂಬ್ ಬೆದರಿಕೆಯ ಇಮೇಲ್ ಬಂದಿತ್ತು. ಸದ್ಯ ಮುಂಬೈ ತಾಜ್ ಹೋಟೆಲ್‌ನಲ್ಲಿ (Taj Hotel) ಬಾಂಬ್ ಇರಿಸಿರುವುದಾಗಿ ಬೆದರಿಕೆ ಕರೆ ಬಂದಿರುವುದು 2008ರಲ್ಲಿ ನಡೆದ ಮುಂಬೈ ದಾಳಿಯನ್ನೇ ನೆನಪಿಸಿದೆ. ಇದನ್ನೂ ಓದಿ: ಪ್ರಣಾಳಿಕೆ ಭರವಸೆಯಿಂದಾಗುವ ಆರ್ಥಿಕ ಲಾಭ ಅಭ್ಯರ್ಥಿಯ ಭ್ರಷ್ಟಾಚಾರವಲ್ಲ – ಜಮೀರ್‌ಗೆ ಸುಪ್ರೀಂ ರಿಲೀಫ್
ನೆನಪಿದೆಯಾ ಆ ಕರಾಳ ದಿನ..?
2008ರ ನವೆಂಬರ್ 26 ರಂದು ಪಾಕಿಸ್ತಾನದಿಂದ ಸಮುದ್ರ ಮಾರ್ಗದ ಮೂಲಕ ಭಾರತದ ಆರ್ಥಿಕ ರಾಜಧಾನಿ ಮುಂಬೈಗೆ 10 ಲಷ್ಕರ್-ಎ-ತೈಬಾ ಭಯೋತ್ಪಾದಕರು ಪ್ರವೇಶಿಸಿದ್ದರು. 60 ಗಂಟೆಗಳಿಗೂ ಹೆಚ್ಚು ಕಾಲ ಮುತ್ತಿಗೆ ಹಾಕಿ, ಭಯೋತ್ಪಾದಕರು ಸರಣಿ ಗುಂಡಿನ ದಾಳಿ ಮತ್ತು ಬಾಂಬ್ ಸ್ಫೋಟಗಳನ್ನ ನಡೆಸಿ 166 ಜನರನ್ನು ಹತ್ಯೆಗೈದಿದ್ದರು. 300ಕ್ಕೂ ಹೆಚ್ಚು ಜನರನ್ನ ಗಾಯಗೊಳಿಸಿದ್ದರು. ಛತ್ರಪತಿ ಶಿವಾಜಿ ಟರ್ಮಿನಸ್ ರೈಲು ನಿಲ್ದಾಣ, ಕಾಮಾ ಆಸ್ಪತ್ರೆ, ನಾರಿಮನ್ ಹೌಸ್ ವ್ಯಾಪಾರ ಮತ್ತು ವಸತಿ ಸಂಕೀರ್ಣ, ಲಿಯೋಪೋಲ್ಡ್ ಕೆಫೆ, ತಾಜ್ ಹೋಟೆಲ್ ಮತ್ತು ಒಬೆರಾಯ್ ಟ್ರೈಡೆಂಟ್ ಹೋಟೆಲ್‌ಗಳಲ್ಲಿ ದಾಳಿ ನಡೆಸಲಾಗಿತ್ತು. ಇದನ್ನೂ ಓದಿ: ಕೇಜ್ರಿವಾಲ್‌ಗೆ ಕ್ಯಾನ್ಸರ್ ಗಂಭೀರ ಹಂತದಲ್ಲಿಯೇ?- ಜಾಮೀನು ವಿಸ್ತರಣೆ ಅರ್ಜಿಯ ಕುರಿತು ಅತಿಶಿ ಹೇಳಿದ್ದೇನು?