ಸದಾ ತುಂಡುಡುಗೆ ಹಾಕಿಕೊಂಡು ಓಡಾಡುವ ಬಿಗ್ ಬಾಸ್ (Bigg Boss OTT) ಮಾಜಿ ಸ್ಪರ್ಧಿ ಉರ್ಫಿ ಜಾವೇದ್ ಅರೆಸ್ಟ್ ಆಗಿದ್ದಾರೆ ಎಂದು ಜಾಲತಾಣದಲ್ಲಿ ಹರಿದಾಡುತ್ತಿದ್ದ ವೀಡಿಯೋ ನಿಜವಲ್ಲ ಎಂದು ಮುಂಬೈ ಪೊಲೀಸರು ಸ್ಪಷ್ಟಪಡಿಸಿದ್ದಾರೆ.
View this post on Instagram
Advertisement
ಕಾಫಿ ಕುಡಿಯಲೆಂದು ಹೋಟೆಲ್‌ಗೆ ಹೋಗಿದ್ದ ಉರ್ಫಿಯನ್ನು (Urfi Javed) ಮಹಿಳಾ ಪೊಲೀಸ್ ಪೇದೆಗಳು ಅರೆಸ್ಟ್ ಮಾಡಿದ್ದಾರೆ ಎಂದು ಹೇಳಲಾಗಿತ್ತು. ಈ ಕುರಿತ ವೀಡಿಯೋ ಜಾಲತಾಣದಲ್ಲಿ ಹರಿದಾಡುತ್ತಿತ್ತು. ಆದ್ರೆ ಇದು ನಿಜವಲ್ಲ. ಚೀಪ್ ಪಬ್ಲಿಸಿಟಿಗಾಗಿ ಮಾಡಿದ ವೀಡಿಯೋ. ಇದರೊಂದಿಗೆ ಪೊಲೀಸ್ ಚಿಹ್ನೆ ಮತ್ತು ಸಮವಸ್ತ್ರ ದುರ್ಬಳಕೆ ಮಾಡುವ ಮೂಲಕ ಕಾನೂನು ಉಲ್ಲಂಘನೆ ಮಾಡಿದ್ದಾರೆ ಅಂತ ಪೊಲೀಸರು ಸ್ಪಷ್ಟಪಡಿಸಿದ್ದಾರೆ.
Advertisement
Advertisement
ಸಮಾಜವನ್ನು ದಾರಿತಪ್ಪಿಸುವ ಈ ವಿಡಿಯೋದಲ್ಲಿ ಭಾಗಿಯಾಗಿರುವವರ ವಿರುದ್ಧ ಓಶಿವಾರಾ ಪೊಲೀಸ್ ಠಾಣೆಯಲ್ಲಿ ಸೆಕ್ಷನ್ 171, 419, 500, 34 ಐಪಿಸಿ ಅಡಿಯಲ್ಲಿ ಕ್ರಿಮಿನಲ್ ಪ್ರಕರಣ ದಾಖಲಿಸಲಾಗಿದೆ. ಹೆಚ್ಚಿನ ತನಿಖೆ ನಡೆಯುತ್ತಿದ್ದು, ಈ ವೇಳೆ ನಕಲಿ ಪೊಲೀಸರನ್ನು ಬಂಧಿಸಲಾಗಿದೆ ಮತ್ತು ವೀಡಿಯೋಗೆ ಬಳಸಿದ್ದ ವಾಹನವನ್ನೂ ವಶಪಡಿಸಿಕೊಳ್ಳಲಾಗಿದೆ ಅಂತಾ ಮುಂಬೈ ಪೊಲೀಸರು ಸ್ಪಷ್ಟಪಡಿಸಿದ್ದಾರೆ.
Advertisement
ಉರ್ಫಿ ಅರೆಸ್ಟ್ ಮಾಡಿದ್ದು ನಿಜವೇ?
ಶುಕ್ರವಾರ ರೆಸ್ಟೋರೆಂಟ್‌ವೊಂದಕ್ಕೆ ಕಾಫಿ ಕುಡಿಯಲು ಹೋಟೆಲ್‌ಗೆ ಬಂದಿದ್ದ ಉರ್ಫಿಯನ್ನು (Urfi Javed) ಮಹಿಳಾ ಪೊಲೀಸ್ ಪೇದೆಗಳು ಕರೆದುಕೊಂಡು ಹೋಗಿ ಪೊಲೀಸ್ ವ್ಯಾನ್‌ನಲ್ಲಿ ಕೂರಿಸುವ ವಿಡಿಯೋ ಅದಾಗಿದ್ದು, ಪೊಲೀಸರು ಉರ್ಫಿಯನ್ನು ಅರೆಸ್ಟ್ ಮಾಡಿದ್ದಾರೆ ಎಂದು ಹೇಳಲಾಗಿತ್ತು.
ಈ ವೀಡಿಯೋದಲ್ಲಿ ರೆಸ್ಟೋರೆಂಟ್ ಮುಂದೆಯೇ ಮಹಿಳಾ ಪೊಲೀಸರಿಗೆ ಉರ್ಫಿ ಪ್ರಶ್ನೆ ಮಾಡಿದ್ದರು. ಯಾಕಾಗಿ ನನ್ನನ್ನು ಅರೆಸ್ಟ್ (Arrest) ಮಾಡುತ್ತಿದ್ದೀರಿ ಎಂದು ಕೇಳಿದಾಗ ಪೊಲೀಸರು, ಅರೆಬರೆ ಬಟ್ಟೆ ಹಾಕಿಕೊಂಡು ಹೀಗೆ ಬೀದಿಗೆ ಬರಬಹುದೇ? ಎಂದು ಪ್ರಶ್ನೆ ಮಾಡಿದ್ದರು. ಆನಂತರ ಪೊಲೀಸ್ ವ್ಯಾನ್ ನಲ್ಲಿ ಉರ್ಫಿಯನ್ನು ಕೂರಿಸಿಕೊಂಡು ಹೊರಟಿದ್ದರು. ಈ ದೃಶ್ಯ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿತ್ತು.
ಈ ಪ್ರಕರಣದ ಹೊರತಾಗಿ ಈ ಹಿಂದೆಯೇ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ಚಿತ್ರಾ ಕಿಶೋರ್ ವಾಘ್, ಉರ್ಫಿ ಜಾವೇದ್ ಸಾರ್ವಜನಿಕವಾಗಿ ಅಶ್ಲೀಲತೆ ಪ್ರದರ್ಶಿಸುತ್ತಿದ್ದಾರೆ ಎಂದು ಆರೋಪಿಸಿ ಮುಂಬೈ ಪೊಲೀಸರಿಗೆ ದೂರು ನೀಡಿದ್ದರು. ಈ ದೂರಿನನ್ವಯ ಮುಂಬೈ ಪೊಲೀಸರು ಉರ್ಫಿ ಜಾವೇದ್ ಗೆ ಸಮನ್ಸ್ ನೀಡಿದ್ದರು. ದೂರಿಗೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗಲು ತಿಳಿಸಿದ್ದರು. ಇದಕ್ಕೆ ಪ್ರತಿಯಾಗಿ ಉರ್ಫಿ ಕೂಡ ಚಿತ್ರಾ ಕಿಶೋರ್ ವಾಘ್ ಮೇಲೆ ಆರೋಪ ಮಾಡಿದ್ದರು. ಇವರು ತಮಗೆ ಜೀವ ಬೆದರಿಕೆ ಹಾಕಿದ್ದಾರೆ ಹಾಗೂ ಮಾನಹಾನಿ ಮಾಡುವಂತಹ ಕೆಲಸ ಮಾಡಿದ್ದಾರೆ ಎಂದು ಆರೋಪಿಸಿ ತಮ್ಮ ವಕೀಲರ ಮೂಲಕ ಮಹಾರಾಷ್ಟ್ರ ಮಹಿಳಾ ಆಯೋಗಕ್ಕೆ ಉರ್ಫಿ ದೂರು ನೀಡಿದ್ದಾರೆ. ಅಲ್ಲದೇ, ತಮಗೆ ಜೀವ ಬೆದರಿಕೆ ಇರುವ ಕಾರಣದಿಂದಾಗಿ ರಕ್ಷಣೆ ನೀಡುವಂತೆ ಉರ್ಫಿ ಮನವಿ ಮಾಡಿದ್ದರು.
ಉರ್ಫಿ ಜಾವೇದ್ ಮಹಿಳೆಯರ ಮಾನ ಹರಾಜು ಹಾಕುವಂತಹ ಬಟ್ಟೆಗಳನ್ನು ಹಾಕುತ್ತಾರೆ. ಅಶ್ಲೀಲ ಹಾಗೂ ಅಸಭ್ಯವಾಗಿ ನಡೆದುಕೊಡುತ್ತಾರೆ. ಇಂತಹ ನಟಿಯ ಮೇಲೆ ಕ್ರಮ ತಗೆದುಕೊಳ್ಳಬೇಕು ಎಂದು ಚಿತ್ರಾ ಅವರು ಕೆಲ ದಿನಗಳ ಹಿಂದೆಯಷ್ಟೇ ದೂರು ದಾಖಲಿಸಿದ್ದರು. ಅಲ್ಲದೇ, ಅಸಹ್ಯ ಎನ್ನುವಂತಹ ಬಟ್ಟೆಗಳನ್ನು ಹಾಕಿಕೊಂಡು ಸಾರ್ವಜನಿಕವಾಗಿ ಕಾಣಿಸಿಕೊಳ್ಳುವುದಕ್ಕೆ ಚಿತ್ರ ಆಕ್ಷೇಪ ವ್ಯಕ್ತ ಪಡಿಸಿದ್ದರು. ಈ ಹಿನ್ನೆಲೆಯಲ್ಲಿ ರಕ್ಷಣೆ ಕೋರಿ ಉರ್ಫಿ ಮಹಿಳಾ ಆಯೋಗಕ್ಕೆ ಮೊರೆ ಹೋಗಿದ್ದರು.
Web Stories