ಮುಂಬೈ: ಬಾಲಿವುಡ್ ನಟ ಟೈಗರ್ ಶ್ರಾಫ್ (Tiger Shroff) ಕಾರಿನ ಮೇಲೆ ಗುಂಡಿನ ದಾಳಿ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈ ಪೊಲೀಸರು (Mumbai Police) ವಡೋದರಾದಲ್ಲಿ ಮತೋರ್ವ ಆರೋಪಿಯನ್ನು ಅರೆಸ್ಟ್ ಮಾಡಿದ್ದಾರೆ.
ಬಂಧಿತ ಆರೋಪಿಯನ್ನು ಅಂಕಿತ ಎಂದು ಗುರುತಿಸಲಾಗಿದೆ. ಗುಂಡಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಯುತ್ತಿದ್ದು, ಗೊಹಾನಾ ಪೊಲೀಸರು ಮತ್ತು ಮುಂಬೈ ಪೊಲೀಸರು ಜಂಟಿಯಾಗಿ ಕಾರ್ಯಾಚರಣೆ ನಡೆಸಿದ್ದಾರೆ. ಸದ್ಯ ಆರೋಪಿಯನ್ನು ಹರಿಯಾಣದ ಗೊಹಾನಾ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ಹೆಚ್ಚಿನ ತನಿಖೆಗಾಗಿ ಮುಂಬೈಗೆ ಕರೆತರಲು ಮುಂಬೈ ಪೊಲೀಸರು ಅನುಮತಿ ಪಡೆದಿದ್ದಾರೆ. ಇದನ್ನೂ ಓದಿ: ಟೈಗರ್ ಶ್ರಾಫ್ ಕಾರಿನ ಮೇಲೆ ಶೂಟೌಟ್ ಕೇಸ್ – ಇಬ್ಬರು ಮಹಿಳೆಯರು ಸೇರಿ ಮತ್ತೆ ನಾಲ್ವರು ಅರೆಸ್ಟ್
ಬಂಧಿತ ಆರೋಪಿಯು ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ನ ಸಹಚರನೆಂದು ಹೇಳಲಾದ ಅನಿಲ್ ಪಂಡಿತ್ ಜೊತೆ ಆರ್ಥಿಕ ನಂಟು ಹೊಂದಿರುವ ಶಂಕೆಯ ಮೇಲೆ ಆರೋಪಿಯನ್ನು ಬಂಧಿಸಲಾಗಿದೆ.
ಲಭ್ಯವಿರುವ ಮಾಹಿತಿಯ ಪ್ರಕಾರ, ಗುಂಡಿನ ದಾಳಿಯ ಹಿಂದಿನ ಪ್ಲಾö್ಯನ್ನಲ್ಲಿ ಈತ ಭಾಗಿಯಾಗಿದ್ದಾನೆ ಎಂದು ಆರೋಪಿಸಲಾಗಿದೆ. ಅಲ್ಲದೆ, ಅನಿಲ್ ಪಂಡಿತ್ ಹಾಗೂ ಅಂಕಿತ ನಡುವೆ ಆರ್ಥಿಕ ವ್ಯವಹಾರ ನಡೆದಿರುವುದಕ್ಕೆ ಸಂಬಂಧಿಸಿದ ಸಾಕ್ಷ್ಯಗಳನ್ನು ತನಿಖಾಧಿಕಾರಿಗಳು ಪತ್ತೆ ಹಚ್ಚಿದ್ದಾರೆ ಎಂದು ವರದಿಯಾಗಿದೆ.ಇದನ್ನೂ ಓದಿ: ಟೈಗರ್ ಶ್ರಾಫ್ ಕಾರಿನ ಮೇಲೆ ಫೈರಿಂಗ್ ಕೇಸ್ಗೆ ಟ್ವಿಸ್ಟ್ – ಅ.11ರಂದೇ ದಾಳಿಗೆ ಸಂಚು
