ಮುಂಬೈ: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರನ್ನು ಹತ್ಯೆ ಮಾಡುವುದಾಗಿ ಮುಂಬೈ ಪೊಲೀಸರಿಗೆ ಶನಿವಾರ ಬೆದರಿಕೆ ಸಂದೇಶ (Threatening Massage) ಬಂದಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಇಂದು ಬೆಳಗ್ಗೆ ಮುಂಬೈ ಟ್ರಾಫಿಕ್ ಪೊಲೀಸರ ವಾಟ್ಸಪ್ ಸಹಾಯವಾಣಿಗೆ (HelpLine) ಬೆದರಿಕೆ ಸಂದೇಶ ಬಂದಿದೆ. ಅದರಲ್ಲಿ ಇಬ್ಬರು ಐಎಸ್‌ಐ ಏಜೆಂಟ್‌ಗಳು ಪ್ರಧಾನಿ ಮೋದಿಯನ್ನು ಗುರಿಯಾಗಿಸಿಕೊಂಡು ಬಾಂಬ್ ಸ್ಫೋಟ ನಡೆಸುವ ಸಂಚು ನಡೆಸಿದ್ದಾರೆ ಎಂದು ಉಲ್ಲೇಖಿಸಲಾಗಿತ್ತು ಎಂದು ಸಂಬಂಧಪಟ್ಟ ಅಧಿಕಾರಿ ತಿಳಿಸಿದ್ದಾರೆ. ಇದನ್ನೂ ಓದಿ: Pink Ball Test | ಭಾರತಕ್ಕೆ ಮತ್ತೆ ಟ್ರಾವಿಸ್ ʻಹೆಡ್ಡೇಕ್ʼ – ಆಸೀಸ್‌ಗೆ 29 ರನ್‌ಗಳ ಮುನ್ನಡೆ
ಸಂದೇಶ ಕಳುಹಿಸಿದ ಮೊಬೈಲ್ ಸಂಖ್ಯೆಯ ಲೊಕೆಶನ್ ರಾಜಸ್ಥಾನದ ಅಜ್ಮೀರ್‌ನಲ್ಲಿ ಪತ್ತೆಯಾಗಿದೆ. ಆರೋಪಿಯನ್ನ ಪತ್ತೆ ಮಾಡಲು ತಕ್ಷಣ ಪೊಲೀಸ್ ತಂಡವನ್ನು ಕಳುಹಿಸಲಾಗಿದೆ. ಸದ್ಯ ಘಟನೆ ಸಂಬಂಧ ಭಾರತೀಯ ನ್ಯಾಯ ಸಂಹಿತೆ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಇದನ್ನೂ ಓದಿ: ನಿಯಂತ್ರಣ ತಪ್ಪಿ ಕಾಲುವೆಗೆ ಬಿದ್ದ ಬೈಕ್ – ಅಂಜನಾದ್ರಿ ಬೆಟ್ಟಕ್ಕೆ ಹೊರಟಿದ್ದ ಸವಾರ ಸಾವು
ಮುಂಬೈ ಟ್ರಾಫಿಕ್ ಪೊಲೀಸರ ಸಹಾಯವಾಣಿಗೆ ಈ ಹಿಂದೆ ಹಲವು ಬಾರಿ ಹುಸಿ ಬೆದರಿಕೆ ಸಂದೇಶಗಳು ಬಂದಿದ್ದವು. ಇದನ್ನೂ ಓದಿ: ಶಿಗ್ಗಾಂವಿ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು – ಭಾನುವಾರ ಕ್ಷೇತ್ರದ ಮತದಾರರಿಗೆ ಕೃತಜ್ಞತಾ ಸಮಾವೇಶ