ಮುಂಬೈ: ಬಾಲಿವುಡ್ ಸೂಪರ್ ಸ್ಟಾರ್ ಸಲ್ಮಾನ್ ಖಾನ್ (Salman Khan) ಅವರನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದ ವ್ಯಕ್ತಿಯನ್ನು ಗುಜರಾತ್‌ನ (Gujarat) ವಡೋದರಾ ಜಿಲ್ಲೆಯಲ್ಲಿ ಪೊಲೀಸರು ಪತ್ತೆ ಹಚ್ಚಿದ್ದಾರೆ. 26 ವರ್ಷದ ಯುವಕನಾಗಿರುವ ಆರೋಪಿ ಮಾನಸಿಕವಾಗಿ ಅಸ್ವಸ್ಥನಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ.
ಮುಂಬೈ ಸಂಚಾರ ಪೊಲೀಸರ ವಾಟ್ಸಪ್ ಸಹಾಯವಾಣಿಗೆ ಸಲ್ಮಾನ್ ಖಾನ್ ಅವರಿಗೆ ಬೆದರಿಕೆ ಹಾಕಲಾದ ಸಂದೇಶ ಬಂದಿತ್ತು. ಸಲ್ಮಾನ್ ಅವರ ಕಾರನ್ನು ಬಾಂಬ್ ಇಟ್ಟು ಸ್ಫೋಟಿಸಲಾಗುವುದು ಮತ್ತು ಅವರ ಮನೆಗೆ ಪ್ರವೇಶಿಸಿದ ನಂತರ ಅವರ ಮೇಲೆ ದಾಳಿ ಮಾಡಲಾಗುವುದು ಎಂದು ಸಂದೇಶದಲ್ಲಿ ಹೇಳಲಾಗಿತ್ತು. ಇದನ್ನೂ ಓದಿ: ಮನೆಗೆ ನುಗ್ಗಿ, ಕಾರು ಸ್ಫೋಟಿಸಿ ಕೊಲೆ ಮಾಡುವುದಾಗಿ ನಟ ಸಲ್ಮಾನ್ ಖಾನ್‌ಗೆ ಬೆದರಿಕೆ
ಸಲ್ಮಾನ್ ಖಾನ್‌ಗೆ ಈಗಾಗಲೇ ವೈ-ಪ್ಲಸ್ ಭದ್ರತೆ ನೀಡಲಾಗಿದೆ. ಆದರೆ ಈ ಬೆದರಿಕೆಯ ನಂತರ, ಮುಂಬೈನ ವರ್ಲಿ ಪೊಲೀಸರು ತಕ್ಷಣ ಕ್ರಮ ಕೈಗೊಂಡರು. ಪೊಲೀಸರು ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 351(2)(3)ರ ಅಡಿಯಲ್ಲಿ ಅಪರಿಚಿತ ವ್ಯಕ್ತಿಯ ವಿರುದ್ಧ ಕ್ರಿಮಿನಲ್ ಬೆದರಿಕೆ ಪ್ರಕರಣವನ್ನು ದಾಖಲಿಸಿದ್ದಾರೆ. ಅಲ್ಲದೆ, ಬಾಂದ್ರಾದಲ್ಲಿರುವ ಸಲ್ಮಾನ್ ಮನೆಯ ಹೊರಗೆ ಪೊಲೀಸರು ಭದ್ರತೆಯನ್ನು ಹೆಚ್ಚಿಸಿದ್ದಾರೆ. ಇದನ್ನೂ ಓದಿ: ಗಲಭೆಕೋರರಿಗೆ ದಂಡವೇ ಒಳ್ಳೆ ಚಿಕಿತ್ಸೆ: ಬಂಗಾಳ ಹಿಂಸಾಚಾರಕ್ಕೆ ಯೋಗಿ ಆದಿತ್ಯನಾಥ್ ಕಿಡಿ
ಪ್ರಕರಣದ ತನಿಖೆ ಆರಂಭಿಸಿದಾಗ ವಡೋದರಾದ (Vadodara) ವಾಘೋಡಿಯಾ ತಾಲೂಕಿನಲ್ಲಿ ವಾಸಿಸುತ್ತಿರುವ ವ್ಯಕ್ತಿಯೊಬ್ಬರು ಈ ಬೆದರಿಕೆ ಕರೆಯನ್ನು ಕಳುಹಿಸಿದ್ದಾರೆ ಎಂದು ತಿಳಿದು ಬಂದಿತ್ತು. ಮುಂಬೈ ಪೊಲೀಸರ ತಂಡವು ವಾಘೋಡಿಯಾ ಪೊಲೀಸರೊಂದಿಗೆ ಆ ವ್ಯಕ್ತಿಯ ಮನೆಗೆ ತಲುಪಿದೆ ಎಂದು ವಡೋದರಾ ಪೊಲೀಸ್ ವರಿಷ್ಠಾಧಿಕಾರಿ ರೋಹನ್ ಆನಂದ್ ಹೇಳಿದ್ದಾರೆ. ಇದನ್ನೂ ಓದಿ: ಮಹಾರಾಷ್ಟ್ರದಿಂದ ಬಂದು ಜಡ್ಜ್ ಮನೆಯಲ್ಲಿ ಕಳ್ಳತನ – 8 ಲಕ್ಷ ಮೌಲ್ಯದ ಚಿನ್ನಾಭರಣ ಕದ್ದಿದ್ದ ಆರೋಪಿಗಳು ಅರೆಸ್ಟ್
ಪ್ರಾಥಮಿಕ ತನಿಖೆಯಲ್ಲಿ ಈ 26 ವರ್ಷದ ಯುವಕ ಮಾನಸಿಕವಾಗಿ ಅಸ್ಥಿರನಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾನೆ ಎಂದು ತಿಳಿದುಬಂದಿದೆ. ಪೊಲೀಸರು, ಆತನನ್ನು ವಿಚಾರಣೆಗಾಗಿ ಮುಂಬೈಗೆ ಬರಲು ನೋಟಿಸ್ ನೀಡಿ, ವಾಪಸ್ ಮರಳಿದ್ದಾರೆ ಎಂದು ರೋಹನ್ ಆನಂದ್ ವಿವರಿಸಿದರು. ಇದನ್ನೂ ಓದಿ: ಶ್ರೀಲೀಲಾ ಜೊತೆ ಹೋಲಿಕೆ ಮಾಡಿದ್ದಕ್ಕೆ ನಿಧಿ ಅಗರ್ವಾಲ್ ತಿರುಗೇಟು
ಸಲ್ಮಾನ್ ಖಾನ್ ಅವರಿಗೆ ಈ ಹಿಂದೆಯೂ ಹಲವು ಬಾರಿ ಜೀವ ಬೆದರಿಕೆ ಕರೆಗಳು ಬಂದಿದ್ದವು. ಕಳೆದ ವರ್ಷ ಏಪ್ರಿಲ್‌ನಲ್ಲಿ ಬಾಂದ್ರಾದಲ್ಲಿರುವ ಸಲ್ಮಾನ್ ಅವರ ಗ್ಯಾಲಕ್ಸಿ ಅಪಾರ್ಟ್ಮೆಂಟ್ ಹೊರಗೆ ಬೈಕ್‌ನಲ್ಲಿ ಬಂದ ಇಬ್ಬರು ವ್ಯಕ್ತಿಗಳು 4 ಗುಂಡುಗಳನ್ನು ಹಾರಿಸಿದ್ದರು. ಇದನ್ನೂ ಓದಿ: ‘ಕುಬೇರ’ ಚಿತ್ರದ ಪೋಸ್ಟರ್ ಔಟ್- ಧನುಷ್ ಸಿನಿಮಾ ಬಗ್ಗೆ ಸಿಕ್ತು ಅಪ್‌ಡೇಟ್
ಇದಲ್ಲದೆ, ಲಾರೆನ್ಸ್ ಬಿಷ್ಣೋಯ್ (Lawrence Bishnoi) ಗ್ಯಾಂಗ್ ಕೂಡ ಸಲ್ಮಾನ್‌ಗೆ ಬೆದರಿಕೆ ಹಾಕಿತ್ತು. 1998ರಲ್ಲಿ ಕೃಷ್ಣಮೃಗವನ್ನು ಬೇಟೆಯಾಡಿದ ಆರೋಪ ಹೊತ್ತಿದ್ದ ಸಲ್ಮಾನ್, ಬಿಷ್ಣೋಯ್ ಸಮುದಾಯದ ಕ್ಷಮೆಯಾಚಿಸಬೇಕೆಂದು ಗ್ಯಾಂಗ್ ಕೇಳಿಕೊಂಡಿತ್ತು. ಈ ಬೆದರಿಕೆಗಳ ನಂತರ, ಮುಂಬೈ ಪೊಲೀಸರು ಸಲ್ಮಾನ್‌ಗೆ ವೈ-ಪ್ಲಸ್ ಭದ್ರತೆಯನ್ನು ನೀಡಿದ್ದರು.