ಮುಂಬೈ: ಭಾರತದ ಹವಾಮಾನ ಇಲಾಖೆ ಮುಂಬೈ (Mumbai) ನಗರಕ್ಕೆ ಶನಿವಾರ (ಜುಲೈ 4) ಹಾಗೂ ಭಾನುವಾರ (ಜುಲೈ 5) ರೆಡ್ ಅಲರ್ಟ್ (Red Alert) ಘೋಷಿಸಿದೆ. ನಗರದಲ್ಲಿ ಹಲವೆಡೆ ಭಾರೀ ಮಳೆಯಾಗುವ (Extreme Rain) ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಿದೆ.
ಈ ವಾರವಿಡೀ ಮುಂಬೈನಲ್ಲಿ ನಿರಂತರವಾಗಿ ಸುರಿದ ಮಳೆಯಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ. ತಡವಾಗಿ ಆರಂಭವಾದ ಮುಂಗಾರು ಇದೀಗ ಬಿರುಸುಗೊಂಡಿದ್ದು, ನಗರದ ಹಲವೆಡೆ ರಸ್ತೆಗಳಲ್ಲಿ ನೀರು ನಿಂತಿರುವುದು, ಸಂಚಾರ ದಟ್ಟಣೆ, ಸ್ಥಳೀಯ ರೈಲು ಹಾಗೂ ಬಸ್ ಸೇವೆಗಳಲ್ಲಿ ವ್ಯತ್ಯಯ ಉಂಟಾಗಿರುವ ವರದಿಗಳಾಗಿವೆ. ಇದನ್ನೂ ಓದಿ: ಇಸ್ರೋ ಕೇಂದ್ರ ಕಚೇರಿಗೆ ಬಾಂಬ್ ಬೆದರಿಕೆ – ಯುಪಿ ಮೂಲದ ಆರೋಪಿ ಅರೆಸ್ಟ್
ಶುಕ್ರವಾರ ಮಧ್ಯಾಹ್ನ ಬಿಡುಗಡೆ ಮಾಡಿದ ಜಿಲ್ಲಾವಾರು ಹವಾಮಾನ ಮುನ್ಸೂಚನೆಯ ಪ್ರಕಾರ, ಜುಲೈ 4 ಮತ್ತು 5ರಂದು ಮುಂಬೈನಲ್ಲಿ ಕೆಲವೆಡೆ ಭಾರೀ ಮಳೆಯಾಗಲಿದೆ ಎಂದು ತಿಳಿಸಿದೆ. ಇದಲ್ಲದೆ, ಜುಲೈ 6ರಂದು (ಸೋಮವಾರ) ಮುಂಬೈನಲ್ಲಿ ಪ್ರತ್ಯೇಕ ಸ್ಥಳಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಜುಲೈ 7ರಂದು ಕೂಡ (ಮಂಗಳವಾರ) ಕೆಲವೆಡೆ ಮಳೆಯಾಗುವ ಸಾಧ್ಯತೆಯಿದೆ. ಇದನ್ನೂ ಓದಿ: ಮಳೆಗಾಲದ ಅಧಿವೇಶನ ಮುಗಿಯೋವರೆಗೆ ಮೋದಿ ಸಂಪುಟ ಪುನಾರಚನೆ ಇಲ್ಲ?
ಬೃಹನ್‌ಮುಂಬೈ ಮಹಾನಗರ ಪಾಲಿಕೆ ಅಧಿಕಾರಿಗಳ ಮಾಹಿತಿ ಪ್ರಕಾರ, ಮುಂಬೈಗೆ ಹೊಂದಿಕೊಂಡಿರುವ ಠಾಣೆ ಮತ್ತು ಪಾಲ್ಘರ್ ಜಿಲ್ಲೆಗಳಿಗೂ ಶನಿವಾರ ಹಾಗೂ ಭಾನುವಾರ ರೆಡ್ ಅಲರ್ಟ್ ಘೋಷಿಸಲಾಗಿದೆ. ಈ ಜಿಲ್ಲೆಗಳಲ್ಲೂ ಕೆಲವು ಪ್ರತ್ಯೇಕ ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಇದನ್ನೂ ಓದಿ: ಮಡಿಕೇರಿಯಲ್ಲಿ 3 ಗಂಟೆಗೂ ಹೆಚ್ಚು ಕಾಲ ಸುರಿದ ಮಳೆಗೆ ಜನಜೀವನ ಅಸ್ತವ್ಯಸ್ತ; ತಗ್ಗು ಪ್ರದೇಶಕ್ಕೆ ನುಗ್ಗಿದ ನೀರು
ಅದರ ಜೊತೆಗೆ ರಾಯಗಡ ಜಿಲ್ಲೆಗೆ ಶನಿವಾರದಂದು ರೆಡ್ ಅಲರ್ಟ್ ನೀಡಲಾಗಿದ್ದು, ಅಲ್ಲಿ ಕೂಡ ಅತಿ ಹೆಚ್ಚು ಮಳೆಯಾಗುವ ಮುನ್ಸೂಚನೆ ಇದೆ. ಹವಾಮಾನ ಇಲಾಖೆಯ ಎಚ್ಚರಿಕೆಯ ಹಿನ್ನೆಲೆಯಲ್ಲಿ ನಾಗರಿಕರು ಅಗತ್ಯವಿದ್ದರೆ ಮಾತ್ರ ಹೊರಗೆ ಸಂಚರಿಸುವಂತೆ, ಜಲಾವೃತ ಪ್ರದೇಶಗಳು ಹಾಗೂ ನದಿ-ಕಾಲುವೆಗಳ ಸಮೀಪ ಹೋಗದಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ. ತಗ್ಗು ಪ್ರದೇಶಗಳಲ್ಲಿ ವಾಸಿಸುವವರು ಸ್ಥಳೀಯ ಆಡಳಿತದ ಸೂಚನೆಗಳನ್ನು ಪಾಲಿಸುವಂತೆ ಹಾಗೂ ಹವಾಮಾನ ಇಲಾಖೆ ನೀಡುವ ಮುಂದಿನ ಮಾಹಿತಿಯನ್ನು ಗಮನದಲ್ಲಿಡುವಂತೆ ಸೂಚಿಸಲಾಗಿದೆ. ಇದನ್ನೂ ಓದಿ: ರಾಮ ಮಂದಿರ ಆಯ್ತು, ಈಗ ಬದರಿನಾಥ ಧಾಮದಲ್ಲೂ ದೇಣಿಗೆ ದುರುಪಯೋಗ ಆರೋಪ: ತನಿಖೆಗೆ ಆದೇಶ
ಮುಂಬೈ ಸೇರಿದಂತೆ ಮಹಾರಾಷ್ಟ್ರದ ಕರಾವಳಿ ಭಾಗಗಳಲ್ಲಿ ಮುಂದಿನ ಕೆಲ ದಿನಗಳವರೆಗೆ ಮಳೆಯ ಅಬ್ಬರ ಮುಂದುವರಿಯುವ ಸಾಧ್ಯತೆ ಇರುವುದರಿಂದ ಆಡಳಿತ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ. ಇದನ್ನೂ ಓದಿ: ಸಿದ್ದರಾಮಯ್ಯ ಕನಸಿನ ಕೂಸು ಜಾತಿಗಣತಿ ಜಾರಿ ಮಾಡುತ್ತೇವೆ: ಯತೀಂದ್ರ

