ಮುಂಬೈ: ಖ್ಯಾತ ಕೈಗಾರಿಕೋದ್ಯಮಿ ರತನ್ ಟಾಟಾ (Ratan Tata) ಅವರ ಚಿತಾ ಭಸ್ಮವನ್ನು (Ashes) ಅರಬ್ಬಿ ಸಮುದ್ರದಲ್ಲಿ (Arabian Sea) ವಿಸರ್ಜಿಸಲು ನಿರ್ಧರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಅನಾರೋಗ್ಯದಿಂದ ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ (Breach Candy Hospital) ದಾಖಲಾಗಿದ್ದ ಟಾಟಾ ಸಮೂಹದ ಮುಖ್ಯಸ್ಥ ರತನ್ ಟಾಟಾ (86) ಅ.9 ರಂದು ಕೊನೆಯುಸಿರೆಳೆದರು. ಅ.10 ರಂದು ಅಂತಿಮ ವಿಧಿವಿಧಾನಗಳನ್ನು ಮುಂಬೈನ (Mumbai) ಚಿತಾಗಾರದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಗಿತ್ತು. ಇದನ್ನೂ ಓದಿ: ಸ್ಯಾಂಡಲ್‌ವುಡ್ ನಟಿ ಅಮೂಲ್ಯ ಸಹೋದರ ದೀಪಕ್ ಅರಸ್ ನಿಧನ
Advertisement
Advertisement
ಇದೀಗ ಅವರ ಆಸೆಯಂತೆ ಅವರ ಚಿತಾ ಭಸ್ಮವನ್ನು ಅರಬ್ಬಿ ಸಮುದ್ರದಲ್ಲಿ ವಿಸರ್ಜಿಸುವುದಾಗಿ ಟಾಟಾ ಕುಟುಂಬ ನಿರ್ಧಾರ ಕೈಗೊಂಡಿದೆ. ಮುಂಬೈನ ಗೇಟ್ ವೇ ಆಫ್ ಇಂಡಿಯಾದಿಂದ (Gate Way Of India) ಹಡಗಿನಲ್ಲಿ ಮೆರವಣಿಗೆಯ ಮೂಲಕ ಚಿತಾ ಭಸ್ಮವನ್ನು ವಿಸರ್ಜಿಸಲಾಗುವುದು. ಈ ಸಂದರ್ಭದಲ್ಲಿ ಅವರ ಕುಟುಂಬ, ಅವರ ಸ್ನೇಹಿತರು ಸೇರಿದಂತೆ ಇನ್ನಿತರರು ಭಾಗಿಯಾಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
Advertisement
Advertisement
ರತನ್ ಟಾಟಾ ಮುಂಬೈ ನಗರದೊಂದಿಗೆ ಅವಿನಾಭಾವ ಸಂಬಂಧವನ್ನು ಹೊಂದಿದ್ದರು. ಜೊತೆಗೆ ತಮ್ಮ ಜೀವನದ ಬಹುಪಾಲು ದಿನಗಳನ್ನು ಅವರು ಅಲ್ಲಿಯೇ ಕಳೆದಿದ್ದು, ಟಾಟಾ ಗ್ರೂಪ್ಸ್ (Tata Groups) ಎಂಬ ವ್ಯವಹಾರ ಸಾಮ್ರಾಜ್ಯಕ್ಕೆ ಮುಂಬೈನಲ್ಲಿ ಅಡಿಪಾಯ ಹಾಕಿದ್ದರು. ಅರಬ್ಬಿ ಸಮುದ್ರದ ನೀರು ಪ್ರಶಾಂತವಾದ ನೀರು. ಒಬ್ಬ ವ್ಯಕ್ತಿಗೆ ಅಂತಿಮ ವಿಶ್ರಾಂತಿಯನ್ನು ನೀಡುತ್ತದೆ ಎಂಬ ಅಭಿಪ್ರಾಯದೊಂದಿಗೆ ಈ ನಿರ್ಧಾರ ಕೈಗೊಳ್ಳಲಾಗಿದೆ.ಇದನ್ನೂ ಓದಿ: ಭಾರತದಲ್ಲಿರುವ ಶೇಖ್ ಹಸೀನಾ ವಿರುದ್ಧ ಅರೆಸ್ಟ್ ವಾರೆಂಟ್ ಜಾರಿ