ಮೋದಿಯಿಂದ ದೇಶದ ಅತಿ ಉದ್ದದ ಸಮುದ್ರ ಸೇತುವೆ ಲೋಕಾರ್ಪಣೆ – 2 ಗಂಟೆ ಪ್ರಯಾಣ 20 ನಿಮಿಷಕ್ಕೆ ಇಳಿಕೆ

Public TV
2 Min Read
Modi 1

ಮುಂಬೈ: ದೇಶದ ಅತೀ ಉದ್ದದ ಸಮುದ್ರ ಸೇತುವೆಯಾದ ಮುಂಬೈ ಟ್ರಾನ್ಸ್ ಹಾರ್ಬರ್ ಲಿಂಕ್ (Mumbai Trans Harbour Link) ಅನ್ನು ಪ್ರಧಾನಿ ನರೇಂದ್ರ ಮೋದಿ (Narendra Modi) ಲೋಕಾರ್ಪಣೆಗೊಳಿಸಿದ್ದಾರೆ. ಈ ಸೇತುವೆಗೆ ʻಅಟಲ್ ಬಿಹಾರಿ ವಾಜಪೇಯಿ ಸೇವ್ರಿ-ನ್ಹವ ಶೇವಾ ಅಟಲ್ ಸೇತುʼ ಎಂದು ಹೆಸರಿಡಲಾಗಿದೆ.

ಈ ಸಮುದ್ರ ಸೇತುವೆಯ ಮೂಲಕ ಎರಡು ಮಹಾನಗರಗಳ ಸಂಪರ್ಕ ಸುಲಭವಾಗಿದೆ. ಈ ಸಮುದ್ರ ಸೇತುವೆಯು ದಕ್ಷಿಣ ಮುಂಬೈನಿಂದ ನವಿ ಮುಂಬೈಗೆ (Mumbai To Navi Mumbai) ಸಂಪರ್ಕ ಕಲ್ಪಿಸಲಿದ್ದು, ಎರಡು ಗಂಟೆಗಳ ಪ್ರಯಾಣವನ್ನ 15-20 ನಿಮಿಷಗಳಲ್ಲಿ ತಲುಪಬಹುದಾಗಿದೆ. ರಾಜ್ಯದ ಎರಡು ದೊಡ್ಡ ನಗರಗಳನ್ನು ಸಂಪರ್ಕಿಸುವ ಮುಂಬೈ ಪುಣೆ ಎಕ್ಸ್‌ಪ್ರೆಸ್‌ವೇಗೆ MTHL ಮತ್ತಷ್ಟು ಸಂಪರ್ಕ ಕಲ್ಪಿಸುತ್ತದೆ. 17,840 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿರುವ MTHL, 6 ಲೇನ್ ಮಾರ್ಗ ಹೊಂದಿದೆ. ಸಮುದ್ರದ ಮೇಲೆ 16.50 ಕಿಲೋಮೀಟರ್ ಮತ್ತು ಭೂಮಿಯಲ್ಲಿ 5.50 ಕಿಲೋಮೀಟರ್ ಉದ್ದವನ್ನು ಹೊಂದಿದೆ.

ಸೇತುವೆಯ ವಿಶೇಷತೆ ಏನು?
ಈ ಯೋಜನೆಯು ಸರಿಸುಮಾರು 21 ಕಿ.ಮೀ. ಉದ್ದದ 6 ಲೇನ್‌ (3+3-ಲೇನ್, 2 ತುರ್ತು ಲೇನ್) ಸೇತುವೆಯನ್ನು ಮುಂಬೈ ನಗರದ ಶಿವಡಿ ಮತ್ತು ಮುಖ್ಯ ಭೂಭಾಗದ ನ್ಹಾವಾವನ್ನು ಸಂಪರ್ಕಿಸುತ್ತದೆ. ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇ, ಮುಂಬೈ-ಗೋವಾ ಎಕ್ಸ್‌ಪ್ರೆಸ್‌ವೇ, ವಿರಾರ್‌-ರಾಯ್‌ಘಡರ್‌ ಕಾರಿಡರ್‌ ಸಂಪರ್ಕ ಇನ್ನು ಮುಂದೆ ಸುಲಭವಾಗಲಿದೆ. ಇದನ್ನೂ ಓದಿ: Ayodhya Ram Mandir: ರಾಮಮಂದಿರಕ್ಕೆ 4 ಮಾರ್ಗ – ರಾಮನೂರಿಗೆ ಬರುವ ಭಕ್ತರಿಗಿದು ಮೋಕ್ಷದ ಹಾದಿ

PM Narendra Modi to inaugurate Indias longest sea bridge Mumbai Trans Harbour Link today Know all about Atal Setu 3

ಈ ರಸ್ತೆಯಲ್ಲಿ 4 ಚಕ್ರದ ವಾಹನಗಳಿಗೆ ಗಂಟೆಗೆ ಗರಿಷ್ಠ 100 ಕಿ.ಮೀ ವೇಗದ ಮಿತಿಯನ್ನು ನಿಗದಿಪಡಿಸಲಾಗಿದೆ. ಬೈಕ್‌, ಅಟೋರಿಕ್ಷಾ, ಟ್ರ್ಯಾಕ್ಟರ್‌ ಸಂಚಾರವನ್ನು ನಿರ್ಬಂಧಿಸಲಾಗಿದೆ. ಇದನ್ನೂ ಓದಿ: ಮೌನವಾಗಿರಲು ಸಾಧ್ಯವಿಲ್ಲ, ರೂಪಾ ಕ್ಷಮೆ ಕೇಳಬೇಕು- ಸುಪ್ರೀಂಕೋರ್ಟ್ ವಿಚಾರಣೆಯಲ್ಲಿ ಸಿಂಧೂರಿ ಬಿಗಿಪಟ್ಟು

1962 ರಲ್ಲೇ ಎರಡು ನಗರಗಳ ಮಧ್ಯೆ ಸಂಚಾರ ವ್ಯವಸ್ಥೆ ಮಾಡಲು ಯೋಜನೆ ರೂಪಿಸಲಾಗಿತ್ತು. ಈ ಯೋಜನೆ ಜಾರಿ ಸಂಬಂಧ ಹಲವು ಅಧ್ಯಯನಗಳು ನಡೆದಿದ್ದವು. 2008ರಲ್ಲಿ ಮಹಾರಾಷ್ಟ್ರ ಸರ್ಕಾರ ಈ ಯೋಜನೆ ಜಾರಿಗೆ ಸಂಬಂಧ ಟೆಂಡರ್‌ ಆಹ್ವಾನಿಸಿತ್ತು. ಈ ಯೋಜನೆಯಲ್ಲಿ ರಾಜಕೀಯದ ಗಾಳಿ ಬೀಸಿ ಭಾರೀ ಟೀಕೆ ಬಂದ ಹಿನ್ನೆಲೆಯಲ್ಲಿ ಟೆಂಡರ್‌ ಪ್ರಕ್ರಿಯೆ ಸ್ಥಗಿತಗೊಂಡಿತ್ತು. ಕೊನೆಗೆ ಎಲ್ಲಾ ಇಲಾಖೆಗಳ ಅನುಮತಿ ಪಡೆದ ಬಳಿಕ 2016ರ ಡಿಸೆಂಬರ್‌ 24 ರಂದು ಪ್ರಧಾನಿ ನರೇಂದ್ರ ಮೋದಿ ಈ ಯೋಜನೆ ನಿರ್ಮಾಣಕ್ಕೆ ಶಂಕುಸ್ಥಾಪನೆ ಮಾಡಿದ್ದರು. ಭೂಮಿ ಸ್ವಾಧೀನ ಪಡಿಸಿದ ಬಳಿಕ 2018ರ ಏಪ್ರಿಲ್‌ 24 ರಂದು ಕಾಮಗಾರಿ ಆರಂಭವಾಗಿತ್ತು.

PM Narendra Modi to inaugurate Indias longest sea bridge Mumbai Trans Harbour Link today Know all about Atal Setu 2

ನಿಗದಿ ಪ್ರಕಾರ ಸೆಪ್ಟೆಂಬರ್‌ 22, 2022ಕ್ಕೆ ಮುಕ್ತಾಯವಾಗಬೇಕಿತ್ತು. ಆದರೆ ಕೋವಿಡ್‌, ಲಾಕ್‌ಡೌನ್‌ ನಂತರ ಕಾರ್ಮಿಕರ ಸಮಸ್ಯೆಯಿಂದಾಗಿ ಯೋಜನೆ ಮುಂದೂಡಲಾಗಿತ್ತು. ಆರಂಭದಲ್ಲಿ ಈ ಯೋಜನೆ ನಿರ್ಮಾಣಕ್ಕೆ 14,712.70 ಕೋಟಿ ರೂ. ವೆಚ್ಚವಾಗಬಹುದು ಎಂದು ಅಂದಾಜಿಸಲಾಗಿತ್ತು. ಆದರೆ ಈಗ ಈ ವೆಚ್ಚ 17,840 ಕೋಟಿ ರೂ.ಗೆ ಏರಿಕೆಯಾಗಿದೆ ಎಂದು ಆರ್‌ಟಿಐ ಅಡಿ ಉತ್ತರ ಸಿಕ್ಕಿತ್ತು. ಇದನ್ನೂ ಓದಿ: ರಾಮಮಂದಿರ ಥೀಮ್‌ನ ಬನಾರಸಿ ಸೀರೆಗಳಿಗೆ ಹೊರ ದೇಶಗಳಲ್ಲೂ‌ ಇದೆ ಬೇಡಿಕೆ- ವಿಶೇಷತೆ ಏನು..?

Share This Article