ರೈಲಲ್ಲಿ ಮಹಿಳೆ ಮುಂದೆ ಪ್ಯಾಂಟ್ ಜಿಪ್ ಬಿಚ್ಚಿದವ ಕೊನೆಗೂ ಸಿಕ್ಕಿಬಿದ್ದ!

Public TV
1 Min Read
Mumbai Local Arrest 1

ಮುಂಬೈ: ಹೈದರಾಬಾದ್ ವಿಮಾನ ನಿಲ್ದಾಣಕ್ಕೆ ತೆರಳುತ್ತಿದ್ದ ಕಾರಿನಲ್ಲಿ ಚಾಲಕನೊಬ್ಬ ಟೆಕ್ಕಿ ಯುವತಿಯ ಮುಂದೆ ಹಸ್ತಮೈಥುನ ಮಾಡಿದ ಪ್ರಕರಣ ಮಾಸುವ ಮುನ್ನವೇ ಮುಂಬೈ ಲೋಕಲ್ ಟ್ರೈನಲ್ಲೂ ಇಂಥದ್ದೇ ಘಟನೆಯೊಂದು ವರದಿಯಾಗಿದೆ. ಮತ್ತೆ ಮತ್ತೆ ಇಂತಹ ಘಟನೆ ನಡೆಯುತ್ತಿರುವುದರಿಂದ ನಾಗರಿಕ ಸಮಾಜ ತಲೆ ತಗ್ಗಿಸುವಂತಾಗಿದೆ.

ಘಟನೆ ಸಂಬಂಧ 30 ವರ್ಷದ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ್ ಟರ್ಮಿನಸ್ ಹಾಗೂ ಮಸ್ಜಿದ್ ಬಂದರ್ ನಡುವೆ ಶನಿವಾರ ಬೆಳಗ್ಗೆ ಮಹಿಳೆ ಸಂಚರಿಸುವಾಗ ಈ ಕೃತ್ಯವೆಸಗಿದ್ದಾನೆ. ಮಹಿಳೆ ರೈಲಿನಲ್ಲಿ ಬೇಲಾಪುರಕ್ಕೆ ಪ್ರಯಾಣಿಸುತ್ತಿದ್ದರು.

ಮಹಿಳಾ ಬೋಗಿಯಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಗೆ ರೈಲಿನ ಮತ್ತೊಂದು ಕಂಪಾರ್ಟ್ ಮೆಂಟ್ ನಲ್ಲಿದ್ದ ವ್ಯಕ್ತಿ ತನ್ನ ಪ್ಯಾಂಟ್ ನ ಜಿಪ್ ಬಿಚ್ಚಿ ಗುಪ್ತಾಂಗ ಪ್ರದರ್ಶಿಸಿದ್ದಾನೆ. ಈ ಹಿನ್ನೆಲೆಯಲ್ಲಿ ರೈಲು ಇಳಿದ ತಕ್ಷಣ ಮಹಿಳೆ ಛತ್ರಪತಿ ಶಿವಾಜಿ ಮಹಾರಾಜ್ ಟರ್ಮಿನಸ್ ನಲ್ಲಿದ್ದ ಪೊಲೀಸರಿಗೆ ದೂರು ನೀಡಿದ್ದಾರೆ.

ದೂರಿನ ಹಿನ್ನೆಲೆಯಲ್ಲಿ ಆರೋಪಿಯ ಪತ್ತೆಗೆ ಹಲವು ತಂಡಗಳನ್ನು ರಚಿಸಲಾಯಿತು. ಸಿಸಿಟಿವಿ ದೃಶ್ಯಾವಳಿ ಪರಿಶೀಲಿಸಿದಾಗ ಆರೋಪಿ ಪತ್ತೆಯಾಗಿದ್ದಾನೆ. ಸಿಸಿಟಿವಿ ದೃಶ್ಯಗಳನ್ನಾಧರಿಸಿ ಪರಿಶೀಲನೆ ಮುಂದುವರೆಸಿದ ಪೊಲೀಸರು ಇಂದು ಬೆಳಗ್ಗೆ 6 ಗಂಟೆಗೆ ಬಂಧಿಸಿದ್ದಾರೆ. ಕೂಲಿ ಕಾರ್ಮಿಕನಾಗಿರುವ ಈತ ಒಡಿಶಾ ಮೂಲದವನು ಎಂದು ಪೊಲೀಸರು ತಿಳಿಸಿದ್ದಾರೆ. ಈತನ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಿಸಿ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

Mumbai Local Arrest 3

Mumbai Local Arrest 2

Rape Survivors LL Size Cover

rape

rape 124

Share This Article