ಮುಂಬೈ: ಲಿವ್-ಇನ್ ರಿಲೇಶನ್ಶಿಪ್ ನಲ್ಲಿದ್ದ ಯುವತಿಯನ್ನು ಹತ್ಯೆ ಮಾಡಿದ ಆರೋಪ ಸಂಬಂಧ ಆಕೆಯ ಗೆಳೆಯನನ್ನು ವಕೋಲಾ ಪೊಲೀಸರು ಬಂಧಿಸಿದ್ದಾರೆ.
ಹತ್ಯೆಯಾದ ಯುವತಿಯನ್ನು 30 ವರ್ಷದ ಮರಿನಾ ಲಾಲ್ಮನ್ಸ್ವಾಮಿ ಎಂದು ಗುರುತಿಸಲಾಗಿದೆ. ಯುವತಿ ಹಾಗೂ ಆರೋಪಿ ರಾಮ್ಸೇನ್ ಕ್ಯೂರಿಯೊ ಮಿಝೋರಾಂನಲ್ಲಿ ನೆಲೆಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
Advertisement
ಯುವತಿ ಮೃತಪಟ್ಟ ನಂತರ ವೈದ್ಯಕೀಯ ಪರೀಕ್ಷೆ ನಡೆಸಿದ್ದು, ವರದಿ ಕೈ ಸೇರಿದ ನಂತರ ಎಫ್ಐಆರ್ ದಾಖಲಿಸಿಕೊಂಡಿದ್ದಾರೆ. ಈ ವರದಿಯಲ್ಲಿ ಯುವತಿಯ ಮೇಲೆ ಕ್ರೂರವಾಗಿ ಹಲ್ಲೆ ಮಾಡಲಾಗಿದೆ. ಹೀಗಾಗಿ ಆಕೆ ಮೃತಪಟ್ಟಿದ್ದಾಳೆ. ಆದರೆ ಗೆಳೆಯ ಮಾತ್ರ ಆಕೆ ಆಕಸ್ಮಿಕವಾಗಿ ಮೃತಪಟ್ಟಿದ್ದಾಳೆ ಎಂದು ಹೇಳುವ ಮೂಲಕ ಪರಾರಿಯಾಗಲು ಯತ್ನಿಸಿದ್ದಾರೆ. ಆದರೆ ಈ ಮಧ್ಯೆ ಪೊಲೀಸರು ಆತನನ್ನು ಬಂಧಿಸಿದ್ದಾರೆ.
Advertisement
Advertisement
ಮೃತ ಯುವತಿ ಹಾಗೂ ಆರೋಪಿ ಕಲಿನಾ ಫ್ಲ್ಯಾಟ್ ನಲ್ಲಿ ಕಳೆದ ಒಂದೂವರೆ ವರ್ಷಗಳಿಂದ ವಾಸಿಸುತ್ತಿದ್ದರು. ಲಿವ್-ಇನ್ ರಿಲೇಶನ್ಶಿಪ್ ನಲ್ಲಿದ್ದ ಇವರಿಬ್ಬರು ಆಗಾಗ ಕ್ಷುಲ್ಲಕ ವಿಚಾರಕ್ಕೆ ಸಂಬಂಧಿಸಿದಂತೆ ಜಗಳವಾಡುತ್ತಿದ್ದರು. ಅವರಿಬ್ಬರು ಕಳೆದ ಕೆಲ ವಾರಗಳಿಂದ ಬೇರೆ ಬೇರೆ ವಿಚಾರಕ್ಕೆ ಸಂಬಂಧಿಸಿದಂತೆ ಗಲಾಟೆ ಮಾಡುತ್ತಿದ್ದರು. ಆತ ಯುವತಿ ಮೇಲೆ ಸಂಶಯ ವ್ಯಕ್ತಪಡಿಸುತ್ತಿದ್ದನು ನೆರೆಮನೆಯವರು ತಿಳಿಸಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
Advertisement
ಹೀಗೆ ಮೂರು ದಿನಗಳ ಹಿಂದೆಯೂ ಅವರಿಬ್ಬರ ಮಧ್ಯೆ ಜಗಳ ನಡೆದಿದ್ದು, ಈ ವೇಳೆ ಆರೋಪಿ, ಯುವತಿಗೆ ಥಳಿಸಿದ್ದಾನೆ. ಇದರಿಂದ ನೊಂದು ಆಕೆ ಮಾತ್ರೆ ತೆಗೆದುಕೊಳ್ಳಲು ಆರಂಭಿಸಿದ್ದಾಳೆ. ಪರಿಣಾಮ ದಿನ ಹೋಗುತ್ತಿದ್ದಂತೆಯೇ ಆಕೆಯ ಆರೋಗ್ಯ ಕ್ಷೀಣಿಸುತ್ತಾ ಬಂದಿದೆ. ಯುವತಿಯ ಆರೋಗ್ಯ ಚಿಂತಾಜನಕ ಸ್ಥಿತಿಗೆ ಬಂದಾಗ ಗೆಳೆಯ ಆಕೆಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾನೆ. ಆದರೆ ಅದಾಗಲೇ ಆಕೆ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.
ಘಟನೆ ಸಂಬಂಧ ಕೊಲೆ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ತನಿಖೆ ಮುಂದುವರಿದಿದೆ ಎಂದು ಅವರು ತಿಳಿಸಿದರು.