ಜೈಪುರ: 18 ವರ್ಷದ ಜೆಇಇ (Joint Entrance Examination) ಆಕಾಂಕ್ಷಿ ಡೆತ್‌ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಜಸ್ಥಾನದ ಕೋಟಾದಲ್ಲಿ (Kota) ಸೋಮವಾರ ನಡೆದಿದೆ.
ನನಗೆ ಜೆಇಇ ಮಾಡಲು ಸಾಧ್ಯವಾಗುತ್ತಿಲ್ಲ ಎಂದು ಪೋಷಕರಿಗೆ ಡೆತ್‌ನೋಟ್ (Death Note) ಬರೆದಿಟ್ಟು ಪರೀಕ್ಷೆ ಇನ್ನೆರಡು ದಿನಗಳು ಇರುವಾಗಲೇ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಆತ್ಮಹತ್ಯೆ ಮಾಡಿಕೊಂಡ ಯುವತಿಯನ್ನು ನಿಹಾರಿಕ ಎಂದು ಗುರುತಿಸಲಾಗಿದೆ. ಕಳೆದ ಒಂದು ವಾರದಲ್ಲಿ ಇದು 2ನೇ ಆತ್ಮಹತ್ಯೆಯ ಪ್ರಕರಣವಾಗಿದೆ.
Advertisement
Advertisement
ಜೆಇಇ ಮುಖ್ಯಪರೀಕ್ಷೆಗೆ ತಯಾರಿ ನಡೆಸುತ್ತಿದ್ದ ಸಂತ್ರಸ್ತೆ ಕೋಟಾದ ಶಿಕ್ಷಾನಗರಿ ಪ್ರದೇಶದಲ್ಲಿನ ತನ್ನ ಮನೆಯ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಇದೇ ಜನವರಿ 31 ರಂದು ಪರೀಕ್ಷೆ ನಿಗದಿಯಾಗಿತ್ತು. ಇದನ್ನೂ ಓದಿ: Rajya Sabha Elections: 15 ರಾಜ್ಯಗಳ 56 ಸ್ಥಾನಗಳಿಗೆ ಫೆ.27 ರಂದು ಚುನಾವಣೆ
Advertisement
ಯುವತಿ ಬರೆದ ಡೆತ್ ನೋಟ್‌ನಲ್ಲಿ ಏನಿದೆ?
ಮಮ್ಮಿ-ಪಪ್ಪಾ ನಾನು ಜೆಇಇ ಮಾಡಲು ಸಾಧ್ಯವಾಗುತ್ತಿಲ್ಲ. ಹಾಗಾಗಿ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ. ನಾನು ಸೋತಿದ್ದೇನೆ, ಇದಕ್ಕೆ ನಾನೇ ಕಾರಣ. ನಾನು ಕೆಟ್ಟ ಮಗಳು. ನನ್ನಮ್ಮು ಕ್ಷಮಿಸಿ, ಮಮ್ಮಿ-ಪಪ್ಪಾ ಇದು ನನ್ನ ಕೊನೆಯ ಆಯ್ಕೆಯಾಗಿದೆ ಎಂದು ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾಳೆ.
Advertisement
ಇದೇ ಜನವರಿ 23ರಂದು ಕೋಟಾದಲ್ಲಿ ನೀಟ್‌ಗೆ ತಯಾರಿ ನಡೆಸುತ್ತಿದ್ದ ಉತ್ತರ ಪ್ರದೇಶದ 17 ವರ್ಷದ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದ. ಇದನ್ನೂ ಓದಿ: Gyanvapi Mosque Case: ವಜುಖಾನಾ ಡಿ-ಸೀಲಿಂಗ್‌ಗೆ ಹಿಂದೂ ಪರ ಅರ್ಜಿದಾರರಿಂದ ಸುಪ್ರೀಂಕೋರ್ಟಿಗೆ ಅರ್ಜಿ
ಅಷ್ಟೇ ಅಲ್ಲ ಇಂಜಿನಿಯರಿಂಗ್ ಮತ್ತು ವೈದ್ಯಕೀಯ ಪ್ರವೇಶ ಪರೀಕ್ಷೆಗಳ ಕೋಚಿಂಗ್ ಸಂಸ್ಥೆಗಳಿಗೆ ಹೆಸರುವಾಸಿಯಾಗಿರುವ ಕೋಟಾದಲ್ಲಿ 2023ರಲ್ಲಿ 29 ವಿದ್ಯಾರ್ಥಿಗಳು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.