ಗದಗ: ಸಹಾಯಕ ಎಂಜಿನಿಯರ್ (Assistant Engineer) ಓರ್ವ 1.50 ಲಕ್ಷ ರೂ. ಲಂಚ (Bribe) ಪಡೆಯುವ ವೇಳೆ ಲೋಕಾಯುಕ್ತ (Lokayukta) ಬಲೆಗೆ ಬಿದ್ದಿರುವ ಘಟನೆ ಗದಗದಲ್ಲಿ (Gadag) ನಡೆದಿದೆ.
ಗದಗ ಬೆಟಗೇರಿ (Betageri) ನಗರಸಭೆ ಸಹಾಯಕ ಎಂಜಿನಿಯರ್ ವೀರೇಂದ್ರ ಸಿಂಗ್ ಕಾಟೇವಾಲ ಲೋಕಾಯುಕ್ತದ ಕೈಗೆ ರೆಡ್‌ಹ್ಯಾಂಡ್ ಆಗಿ ಸಿಕ್ಕಿಬಿದ್ದಿರುವ ವ್ಯಕ್ತಿ. ಗುತ್ತಿಗೆದಾರ ಅಬ್ದುಲ್ ಮನಿಯಾರ್ ಎಂಬವರು ರಸ್ತೆ ಕಾಮಗಾರಿ ಮಾಡಿದ್ದರು. ಅದರ 9 ಲಕ್ಷ ರೂ. ಬಿಲ್ ಪಾಸ್ ಮಾಡಲು 1.50 ಲಕ್ಷ ರೂ. ಕೊಡುವಂತೆ ಎಂಜಿನಿಯರ್ ಬೇಡಿಕೆ ಇಟ್ಟಿದ್ದರು. ಈ ಬಗ್ಗೆ ಲೋಕಾಯುಕ್ತಕ್ಕೆ ದೂರು ನೀಡಲಾಗಿದ್ದು, ಗುತ್ತಿಗೆದಾರರಿಂದ ಲಂಚ ಪಡೆದು ಬೈಕ್‌ನ ಸೈಡ್‌ಬ್ಯಾಗ್‌ನಲ್ಲಿ ಇಡುವ ವೇಳೆ ಲೋಕಾಯುಕ್ತದ ಬಲೆಗೆ ಬಿದ್ದಿದ್ದಾರೆ. ಇದನ್ನೂ ಓದಿ: ಮಂಗಳೂರಿನಲ್ಲಿ ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ನಡುವೆ ಮಾರಾಮಾರಿ – ಮಿಥುನ್ ರೈ ಕಾರ್ ಮೇಲೆ ಕಲ್ಲು ತೂರಾಟ
ಲೋಕಾಯುಕ್ತ ಎಸ್ಪಿ ಸತೀಶ್, ಡಿವೈಎಸ್ಪಿ ಶಂಕರ್ ರಾಗಿ ಮಾರ್ಗದರ್ಶನದಲ್ಲಿ ಇನ್ಸ್ಪೆಕ್ಟರ್ ರವಿ ನೇತೃತ್ವದ ತಂಡ ದಾಳಿ ಮಾಡಿದೆ. ಸಿಕ್ಕಿಬಿದ್ದ ಬಳಿಕ ವೀರೇಂದ್ರ ಅಧಿಕಾರಿಗಳಿಗೆ ಹಣ ಹಸ್ತಾಂತರ ಮಾಡಿ ನಂತರ ಅಲ್ಲಿಂದ ಎಸ್ಕೇಪ್ ಆಗಲು ಯತ್ನಿಸಿದ್ದಾರೆ. ಆರೋಪಿಯನ್ನು ವಶಕ್ಕೆ ಪಡೆದಿದ್ದು, ವಿಚಾರಣೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಬರೋಬ್ಬರಿ 2 ಲಕ್ಷ ಮೌಲ್ಯದ 40 ಕೆ.ಜಿ ಕೂದಲು ದರೋಡೆ!