ಕೋಲಾರ: ಪುನೀತ್ ಒಬ್ಬ ನಾಯಕ ನಟನಲ್ಲದೆ, ಸೇವೆಯಲ್ಲಿ ಅವರ ಕಾರ್ಯ ಶ್ಲಾಘನೀಯವಾದುದು. ಅವರಿಗೆ ಪದ್ಮಶ್ರೀ ಪ್ರಶಸ್ತಿಯನ್ನು ನೀಡಿ ಗೌರವಿಸಿದರೆ ಅದಕ್ಕಿಂತ ದೊಡ್ಡ ಸಂತೋಷ ಮತ್ತೊಂದಿಲ್ಲ. ಕೇಂದ್ರ ಸರ್ಕಾರ ಅವರಿಗೆ ಪ್ರಶಸ್ತಿಯನ್ನು ನೀಡಬೇಕು ಎಂದು ತೋಟಗಾರಿಕಾ ಸಚಿವ ಮುನಿರತ್ನ ಆಗ್ರಹಿಸಿದ್ದಾರೆ.
ಕೋಲಾರದ ಕೋಟಿಲಿಂಗ ದೇಗುಲಕ್ಕೆ ಭೇಟಿ ನೀಡಿದ ವೇಳೆ ಅವರು ಮಾತನಾಡಿದರು. ಇದೇ ವೇಳೆ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಇಳಿಕೆ ಮಾಡಿದ ರಾಜ್ಯ ಸರ್ಕಾರದ ನಿರ್ಧಾರಕ್ಕೆ ಅವರು ಸಂತಸ ವ್ಯಕ್ತಪಡಿಸಿದರು. ಉಪಚುನಾವಣೆ ಸೋಲಿನಿಂದ ತೈಲ ಬೆಲೆ ಇಳಿಕೆಯಾಗಿಲ್ಲ. ಜಾಗತಿಕ ಮಟ್ಟದಲ್ಲಿ ತೈಲ ಬೆಲೆ ಏರಿಕೆಯಾಗಿದ್ದರಿಂದ ಇಷ್ಟು ದಿನ ದುಬಾರಿಯಾಗಿತ್ತು. ಬದಲಿಗೆ ಉಪಚುನಾವಣೆಯಲ್ಲಿ ಸೋತಿದ್ದರಿಂದ ಬೆಲೆ ಇಳಿಕೆಯಾಗಿಲ್ಲ ಎಂದರು. ಇದನ್ನೂ ಓದಿ: ಅಪ್ಪು ಸದಾ ನಮ್ಮ ಹೃದಯದಲ್ಲಿ ನಗುತ್ತಿರುತ್ತಾರೆ – ಪುನೀತ್ ನೆನೆದು ಬಿಕ್ಕಿ, ಬಿಕ್ಕಿ ಅತ್ತ ಸೂರ್ಯ
Advertisement
ಉಪಚುನಾವಣೆಯ ಸೋಲಿನಿಂದ ಬಿಜೆಪಿಗೆ ಹಿನ್ನಡೆಯಾಗಿಲ್ಲ. ಆದರೆ ಕಳೆದ ಉಪ ಚುನಾವಣೆಯಲ್ಲಿ ಸೋತಿದ್ದನ್ನು ಕಾಂಗ್ರೆಸ್‍ನವರು ಮರೆತಿದ್ದಾರೆ. ಸಿ.ಪಿ.ಯೋಗೇಶ್ವರ್ ಕಾಂಗ್ರೆಸ್ ಸೇರ್ಪಡೆ ವಿಚಾರ ಊಹಾಪೋಹ. ಯೋಗೇಶ್ವರ್ ಅವರನ್ನು ಕಾಂಗ್ರೆಸ್‍ಗೆ ಸೇರಿಸಿಕೊಳ್ಳಲು ಇನ್ನೊಬ್ಬರು ಬಯಸ್ತಿದ್ದಾರೆ. ಆದರೆ ಯೋಗೇಶ್ವರ್ ಬಿಜೆಪಿ ಬಿಡುವುದಿಲ್ಲ. ಅವರಿಗೆ ಸಚಿವ ಸ್ಥಾನ ನೀಡುವುದು ಹೈಕಮಾಂಡ್‍ಗೆ ಬಿಟ್ಟ ವಿಚಾರ ಎಂದು ಹೇಳಿದರು. ಇದನ್ನೂ ಓದಿ: ನನ್ನ ಮಗುವನ್ನು ಕಳೆದುಕೊಂಡಿದ್ದೇನೆ – ಬಿಕ್ಕಿ ಬಿಕ್ಕಿ ಅತ್ತ ಶಿವಣ್ಣ
Advertisement
Advertisement