ಬೆಂಗಳೂರು: ಶೂಟಿಂಗ್ ನಲ್ಲಿ ಫುಲ್ ಬ್ಯುಸಿಯಾಗಿರೋ ಮುನಿರತ್ನ ಕುರುಕ್ಷೇತ್ರ ಚಿತ್ರತಂಡ ಹೈದರಾಬಾದ್‍ನಲ್ಲಿ ದೀಪಾವಳಿ ಆಚರಿಸಿಕೊಂಡಿದೆ. ಅಭಿಮನ್ಯು ಪಾತ್ರಧಾರಿ ನಿಖಿಲ್ ಗೌಡ, ಕುರುಕ್ಷೇತ್ರದ ನಿರ್ಮಾಪಕ ಮುನಿರತ್ನ, ನಿರ್ದೇಶಕ ನಾಗಣ್ಣ ಸೇರಿದಂತೆ ಹಲವು ಸಹ ಕಲಾವಿದರು ಸಂಭ್ರಮಾಚರಣೆಯಲ್ಲಿ ಭಾಗಿಯಾಗಿದ್ರು.
ಪಟಾಕಿ ಸಿಡಿಸಿ ದೀಪಾವಳಿಯನ್ನು ಸಂಭ್ರಮದಿಂದ ಆಚರಿಸಿಕೊಂಡ ಚಿತ್ರತಂಡ ನಾಡಿನ ಜನತೆಗೆ ದೀಪಾವಳಿ ಹಬ್ಬದ ಶುಭಾಶಯ ಕೋರಿದ್ದಾರೆ. ಚಾಲೆಂಜಿಂಗ್ ಸ್ಟಾರ್ ದರ್ಶನ್ ಮುಖ್ಯಭೂಮಿಕೆಯ ಮಲ್ಟಿಸ್ಟಾರ್ ಕುರುಕ್ಷೇತ್ರ ಮುಂದಿನ ಸಂಕ್ರಾಂತಿಗೆ ತೆರೆಕಾಣುವ ಸಾಧ್ಯತೆಯಿದೆ. ಈಗಾಗಲೇ ಚಿತ್ರದ ಚಿತ್ರೀಕರಣ ಭರದಿಂದ ಸಾಗಿದೆ. ಸ್ಯಾಂಡಲ್ ವುಡ್ ಖ್ಯಾತ ಕಲಾವಿದರು ಚಿತ್ರದಲ್ಲಿ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ 50ನೇ ಚಿತ್ರ ಎಂಬ ಖ್ಯಾತಿಯೂ ಮುನಿರತ್ನ ಕುರುಕ್ಷೇತ್ರಕ್ಕಿದೆ.