ಶಿವಮೊಗ್ಗ: ಶರಾವತಿ (Sharavathi) ಹಿನ್ನೀರಿನಲ್ಲಿ ನೀರಿನ ಹರಿವು ಕಡಿಮೆಯಾದ ಹಿನ್ನೆಲೆ ಶಿವಮೊಗ್ಗ (Shivamogga) ಜಿಲ್ಲೆ ಸಾಗರ (Sagara) ತಾಲೂಕಿನ ಕಾರ್ಗಲ್ – ಜೋಗಕ್ಕೆ ತ್ವರಿತವಾಗಿ ಸಂಪರ್ಕ ಕಲ್ಪಿಸುವ ಹಲ್ಕೆ – ಮುಪ್ಪಾನೆ ಲಾಂಚ್ (Muppane Launch) ಮಾರ್ಗ ತಾತ್ಕಾಲಿಕವಾಗಿ ಸ್ಥಗಿತಗೊಂಡಿದೆ.
ಶುಕ್ರವಾರ ಬೆಳಗ್ಗೆ ಲಾಂಚ್ ಸಂಚಾರದ ವೇಳೆ ಮರದ ದಿಮ್ಮಿ ಹಾಗೂ ಮರಳಿನ ದಿಬ್ಬಗಳು ಲಾಂಚ್ ತಳಭಾಗಕ್ಕೆ ತಾಗಿದೆ. ಇದರಿಂದ ಲಾಂಚ್ ತಾಂತ್ರಿಕ ದೋಷಕ್ಕೆ ಒಳಗಾಗುವ ಸಾಧ್ಯತೆಯಿದ್ದು, ಮುಂಜಾಗ್ರತಾ ಕ್ರಮವಾಗಿ ಹಾಗೂ ಪ್ರವಾಸಿಗರ ಸುರಕ್ಷತೆಯ ದೃಷ್ಟಿಯಿಂದ ತಾತ್ಕಾಲಿಕವಾಗಿ ಲಾಂಚ್ ಸೇವೆಯನ್ನು ಅಧಿಕಾರಿಗಳು ಸ್ಥಗಿತಗೊಳಿಸಿದ್ದಾರೆ. ಇದನ್ನೂ ಓದಿ: ನನ್ನೊಬ್ಬನನ್ನು ಸೋಲಿಸಲು ಹೋಗಿ ಬಿಜೆಪಿ ತಾನೇ ಸೋತಿದೆ: ಜಗದೀಶ್ ಶೆಟ್ಟರ್
Advertisement
Advertisement
ಹೊಳೆಬಾಗಿಲು ಲಾಂಚ್‌ನಲ್ಲಿ ಪ್ರತಿನಿತ್ಯ ಜನದಟ್ಟಣೆ ಇರುವ ಕಾರಣ ತುಮರಿ, ಮಾರಲಗೋಡು, ಬ್ಯಾಕೋಡು ಭಾಗದ ತುರ್ತು ಆರೋಗ್ಯ ಸೇವೆ ಸೇರಿದಂತೆ ಜೋಗ ಕಾರ್ಗಲ್ ತೆರಳಲು ಹಾಗೂ ಸಿಗಂದೂರು ಪ್ರವಾಸಿಗರು ಈ ಸುಗಮ ಮಾರ್ಗದ ಮೊರೆ ಹೋಗಿದ್ದರು. ಸದ್ಯ ಇದು ಕೂಡ ಸ್ಥಗಿತಗೊಂಡಿದ್ದು, ಈ ಭಾಗದ ಜನರ ಆತಂಕಕ್ಕೆ ಕಾರಣವಾಗಿದೆ. ಇದನ್ನೂ ಓದಿ: ನೂತನ ಸಂಸತ್ ಭವನವನ್ನು ಶವಪೆಟ್ಟಿಗೆಗೆ ಹೋಲಿಸಿದ ಆರ್‌ಜೆಡಿ – ಕಾನೂನು ಸಮರಕ್ಕೆ ಮುಂದಾದ ಬಿಜೆಪಿ
Advertisement
Advertisement
ಸದ್ಯ ಈ ಭಾಗದಲ್ಲಿ ಮುಂಗಾರು ಇನ್ನೂ ಪ್ರಾರಂಭವಾಗಿಲ್ಲ. ಹೀಗಾಗಿ ಮುಂದಿನ ದಿನಗಳಲ್ಲಿ ನೀರಿನ ಪ್ರಮಾಣ ಆಧರಿಸಿ ಲಾಂಚ್ ಸೇವೆ ಮತ್ತೆ ಪ್ರಾರಂಭವಾಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: New Parliament Building ಉದ್ಘಾಟನೆ – ಈ ಭವನ ಹಿರಿಮೆ, ವಿಶ್ವಾಸದ ಸಂಕೇತ: ಮೋದಿ