ಬೆಳ್ಳಂಬೆಳಗ್ಗೆ ಜೆಡಿಎಸ್ ಪ್ರಧಾನ ಕಾರ್ಯದರ್ಶಿ ಕೊಲೆ ಆರೋಪಿಗಳ ಮೇಲೆ ಫೈರಿಂಗ್

Public TV
1 Min Read
RMG FIRING

ರಾಮನಗರ: ಜೆಡಿಎಸ್ ನ ರಾಜ್ಯ ಎಸ್ಸಿ/ಎಸ್ಟಿ ಘಟಕದ ಪ್ರಧಾನ ಕಾರ್ಯದರ್ಶಿ ರಾಜಗೋಪಾಲ್ ಕೊಲೆ ಪ್ರಕರಣದ ಆರೋಪಿಗಳ ಮೇಲೆ ಪೊಲೀಸರು ಗುಂಡು ಹಾರಿಸಿರುವ ಘಟನೆ ಕನಕಪುರ ತಾಲೂಕಿನ ಸಾತನೂರು ಬಳಿ ನಡೆದಿದೆ.

ಕೊಲೆ ಆರೋಪಿಗಳಾದ ರಾಮ(21) ಮತ್ತು ದೀಪು(27) ಎಂಬವರ ಮೇಲೆ ಪೊಲೀಸರು ಫೈರಿಂಗ್ ಮಾಡಿದ್ದು, ಇಬ್ಬರು ಆರೋಪಿಗಳ ಕಾಲಿನ ಭಾಗಕ್ಕೆ ಪೊಲೀಸರು ಗುಂಡೇಟು ಹೊಡೆದಿದ್ದಾರೆ.

POLICE 1

ರಾಜ್ಯ ಜೆಡಿಎಸ್ ಎಸ್ಟಿ ಎಸ್ಟಿ ಘಟಕದ ಪ್ರಧಾನ ಕಾರ್ಯದರ್ಶಿ ರಾಜಗೋಪಾಲ್ ರನ್ನ ಇದೇ ನವೆಂಬರ್ 11ರ ಸಂಜೆ ಕನಕಪುರದಲ್ಲಿ ಹಳೆ ಪೊಲೀಸ್ ಠಾಣೆ ರಸ್ತೆಯ ಮುಸ್ಲಿಂ ಬ್ಲಾಕ್ ನಲ್ಲಿ ಹತ್ಯೆ ಮಾಡಲಾಗಿತ್ತು. ಮಾರಕಾಸ್ತ್ರಗಳಿಂದ ಕೊಚ್ಚಿ, ಡ್ಯಾಗರ್ ನಿಂದ ಇರಿದು ಕೊಲೆ ಮಾಡಿ ಆನಂತರ ಆರೋಪಿಗಳು ತಲೆ ಮರೆಸಿಕೊಂಡಿದ್ದರು. ಇಂದು ಖಚಿತ ಮಾಹಿತಿ ಮೇರೆಗೆ ಇಂದು ಬೆಳಗಿನ ಜಾವ ಆರೋಪಿಗಳನ್ನು ಬಂಧಿಸುವ ವೇಳೆ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ್ದಾರೆ.

ಈ ವೇಳೆ ಕೊಲೆ ಆರೋಪಿಗಳಾದ ರಾಮನ ಬಲಗಾಲು, ದೀಪಕ್‍ನ ಎಡಗಾಲಿಗೆ ಗುಂಡೇಟು ಹೊಡೆಯಲಾಗಿದೆ. ಗಾಯಾಳುಗಳನ್ನು ಕನಕಪುರ ತಾಲೂಕಿನ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

Share This Article