ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ರೌಡಿಶೀಟರ್ ಜೆಸಿಬಿ ನಾರಾಯಣ ಹತ್ಯೆಗೆ ಸ್ಕೆಚ್ ಹಾಕಲಾಗಿದ್ದು, ಭಾರೀ ಅಪಾಯದಿಂದ ಪಾರಾಗಿದ್ದಾರೆ.
ಹಾಡಹಗಲೇ ರೌಡಿಶೀಟರ್ ಹತ್ಯೆಗೆ ದುಷ್ಕರ್ಮಿಗಳು ಸ್ಕೆಚ್ ಹಾಕಿ ವಿಫಲರಾಗಿದ್ದಾರೆ. ಜೆಸಿಬಿ ನಾರಾಯಣ ಕಾರು ಅಡ್ಡಗಟ್ಟಿ ಹತ್ಯೆಗೆ ಸಂಚು ರೂಪಿಸಿದ್ದಾರೆ. ಆದರೆ ರೌಡಿಶೀಟರ್, ದುಷ್ಕರ್ಮಿಗಳ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ. ಇದನ್ನೂ ಓದಿ: ವೆಡ್ಡಿಂಗ್ ಕೇಕ್ ಬೀಳಿಸಿ ದಂಪತಿಗೆ ಶಾಕ್ ಕೊಟ್ಟ ಸಪ್ಲೈಯರ್
ಹುಳಿಮಾವು ಠಾಣಾ ವ್ಯಾಪ್ತಿಯ ಡಿಎಲ್‍ಎಫ್ ರಸ್ತೆಯಲ್ಲಿ ರೌಡಿಶೀಟರ್ ಮೇಲೆ ದಾಳಿ ನಡೆಸಲಾಗಿದೆ. ದಾಳಿ ಆಗುತ್ತಿದ್ದಂತೆ ಕಾರು ರಿವರ್ಸ್ ತೆಗೆದುಕೊಂಡು ನಾರಾಯಣ ಬಚಾವ್ ಆಗಿದ್ದಾರೆ. ಇದನ್ನೂ ಓದಿ: ಸರ್ಕಾರ ಆರ್ಡರ್ ನೀಡದಿದ್ರೆ ಕೋವಿಶೀಲ್ಡ್ ಉತ್ಪಾದನೆ ಶೇ.50ರಷ್ಟು ಕಡಿತಕ್ಕೆ ನಿರ್ಧಾರ: ಆದಾರ್ ಪೂನಾವಾಲಾ
ಘಟನೆ ಸಂಬಂಧ ಬೇಗೂರು ಠಾಣೆಯಲ್ಲಿ ಎಫ್‍ಐಆರ್ ದಾಖಲಾಗಿದೆ. ಇದನ್ನೂ ಓದಿ: 3ನೇ ಅಲೆ ತೀವ್ರತೆ ಹೆಚ್ಚಾಗಬಹುದು – ಐಎಂಎ ವಾರ್ನಿಂಗ್