ಶಿವಮೊಗ್ಗ: ಜಿಲ್ಲೆಯ ಭದ್ರಾವತಿ ತಾಲೂಕಿನ ಬಾರಂದೂರು ಗ್ರಾಮ ಪಂಚಾಯ್ತಿ ಸದಸ್ಯ ರಾಘವೇಂದ್ರ ಎಂಬವರ ಕೊಲೆಗೆ ಯತ್ನಿಸಿದ ಘಟನೆ ಗುರುವಾರ ರಾತ್ರಿ ನಡೆದಿದೆ.
ಈ ಘಟನೆಯಲ್ಲಿ ಮಚ್ಚಿನೇಟಿನಿಂದ ತೀವ್ರವಾಗಿ ಗಾಯಗೊಂಡಿರುವ ರಾಘವೇಂದ್ರ ಅವರಿಗೆ ಮೆಗ್ಗಾನ್ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ನೇಹಿತರ ಜೊತೆ ಕೂತು ಮಾತನಾಡುತ್ತಿದ್ದ ರಾಘವೇಂದ್ರ ಅವರನ್ನು ಕಾಲ್ ಮಾಡಿ ಕರೆಸಿಕೊಂಡು ಕೊಲ್ಲುವ ಯತ್ನ ಮಾಡಲಾಗಿದೆ.
Advertisement
Advertisement
ಬೋಜರಾಜ ಎಂಬಾತ ಈ ಕೃತ್ಯ ಮಾಡಿದ್ದು, ಈಗ ಆರೋಪಿ ತಲೆಮರೆಸಿಕೊಂಡಿದ್ದಾನೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಹಲ್ಲೆಗೆ ಕಾರಣವೇನೆಂಬುದು ತಿಳಿದುಬಂದಿಲ್ಲ.
Advertisement
ಪೇಪರ್ ಟೌನ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.