ಕೋಲ್ಕತ್ತಾ: ಪಶ್ಚಿಮ ಬಂಗಾಳದ (West Bengal) ಬಿರ್‌ಭೂಮ್‌ನಲ್ಲಿ (Birbhum Incident) ನಡೆದ ಹಿಂಸಾಚಾರ ಪ್ರಕರಣದ ಪ್ರಮುಖ ಆರೋಪಿಯೊಬ್ಬ ಸಿಬಿಐ (CBI) ಕಸ್ಟಡಿಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಪೊಲೀಸರು, ಕೇಂದ್ರ ತನಿಖಾ ಸಂಸ್ಥೆಯ ಅಧಿಕಾರಿಗಳ ವಿರುದ್ಧ ಕೊಲೆ ಕೇಸ್ ದಾಖಲಿಸಿದ್ದಾರೆ.
ಬಿರ್ಭೂಮ್ ಜಿಲ್ಲೆಯ ಬೊಗ್ಟುಯಿ ಗ್ರಾಮದಲ್ಲಿ ಈ ವರ್ಷದ ಆರಂಭದಲ್ಲಿ ನಡೆದಿದ್ದ ಹಿಂಸಾಚಾರದ ಪ್ರಮುಖ ಆರೋಪಿಗಳಲ್ಲಿ ಒಬ್ಬನಾದ ಲಾಲೋನ್ ಶೇಖ್ ಸೋಮವಾರ ಸಿಬಿಐ ಕಸ್ಟಡಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದ. ಕಸ್ಟಡಿ ಚಿತ್ರಹಿಂಸೆ ಆರೋಪದಡಿ ಲಾಲೋನ್ ಕುಟುಂಬ ಸಲ್ಲಿಸಿದ ದೂರಿನ ಆಧಾರದ ಮೇಲೆ ಎಫ್‌ಐಆರ್ ದಾಖಲಿಸಲಾಗಿದೆ. ಇದನ್ನೂ ಓದಿ: ಸಿಎಂ ಸ್ಟಾಲಿನ್ ಪುತ್ರ ತಮಿಳುನಾಡಿನ ಸಚಿವರಾಗಿ ಪ್ರಮಾಣ ವಚನ ಸ್ವೀಕಾರ
Advertisement
Advertisement
ಹಿಂಸಾಚಾರದಲ್ಲಿ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ 10 ಮಂದಿಯನ್ನು ಜೀವಂತವಾಗಿ ಸುಟ್ಟುಹಾಕಲಾಗಿತ್ತು. ಇದಾದ ಎಂಟು ತಿಂಗಳ ನಂತರ ಲಾಲೋನ್ ಶೇಖ್‌ನನ್ನು ಡಿಸೆಂಬರ್ 4 ರಂದು ಜಾರ್ಖಂಡ್‌ನಲ್ಲಿ ಬಂಧಿಸಲಾಗಿತ್ತು. ಜಿಲ್ಲೆಯಲ್ಲಿ ಸಿಬಿಐ ಸ್ಥಾಪಿಸಿದ್ದ ತಾತ್ಕಾಲಿಕ ಶಿಬಿರದಲ್ಲಿ ಆತನನ್ನು ಇರಿಸಲಾಗಿತ್ತು.
Advertisement
ಸಿಬಿಐ ಅಧಿಕಾರಿಗಳು ತನ್ನ ಪತಿಯನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾರೆ. ಪ್ರಕರಣದಿಂದ ಅವರ ಹೆಸರು ತೆಗೆಯಲು 50 ಲಕ್ಷಕ್ಕೆ ಬೇಡಿಕೆಯಿಟ್ಟಿದ್ದರು ಎಂದು ಲಾಲೋನ್ ಶೇಖ್ ಪತ್ನಿ ಆರೋಪಿಸಿದ್ದಾರೆ. ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕೂಡ ಪ್ರಕರಣದಲ್ಲಿ ಸಿಬಿಐ ಪಾತ್ರವನ್ನು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಶಾಲಾ ಬಾಲಕಿಯ ಮೇಲೆ ಆ್ಯಸಿಡ್ ದಾಳಿ – ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ
Advertisement
ಕೋಲ್ಕತ್ತಾ ಹೈಕೋರ್ಟ್‌ನ ಆದೇಶದ ಮೇರೆಗೆ ಸಿಬಿಐ ಈ ಪ್ರಕರಣದ ತನಿಖೆ ನಡೆಸುತ್ತಿದೆ. ಬೊಗ್ಟುಯಿಯಲ್ಲಿ ಮನೆಗಳಿಗೆ ಬೆಂಕಿ ಹಚ್ಚಿದ ಗಂಪಿನ ನೇತೃತ್ವವನ್ನು ಶೇಖ್ ನೇತೃತ್ವ ವಹಿಸಿದ್ದ ಎಂದು ಶಂಕಿಸಲಾಗಿದೆ.