ಮಂಡ್ಯದಲ್ಲಿ ಐಪಿಎಲ್ ಬೆಟ್ಟಿಂಗ್ ಹಣಕ್ಕಾಗಿ ಯುವಕನ ಕೊಲೆ

Public TV
1 Min Read
MANDYA MURDER

ಮಂಡ್ಯ: ಐಪಿಎಲ್ (IPL) ಬೆಟ್ಟಿಂಗ್ ಹಣದ ವಿಚಾರಕ್ಕೆ ಯುವಕರ ಗುಂಪಿನಲ್ಲಿ ಜಗಳವಾಗಿ, ಯುವಕನೊಬ್ಬನ ಕೊಲೆಯಲ್ಲಿ ಅಂತ್ಯವಾದ ಘಟನೆ ಮದ್ದೂರಿನ (Maddur) ಹುಲಿಗೆರೆಪುರದಲ್ಲಿ ನಡೆದಿದೆ.

ಚಿಕ್ಕರಸಿನಕೆರೆ ಗ್ರಾಮದ ಪುನೀತ್ (30) ಕೊಲೆಯಾದ ಯುವಕನಾಗಿದ್ದಾನೆ. ಪುನೀತ್ ಸ್ನೇಹಿತರ ಜೊತೆಗೆ ಐಪಿಎಲ್ ಬೆಟ್ಟಿಂಗ್ ಕಟ್ಟಿದ್ದ. ಆತ ಗೆದ್ದ ಹಣವನ್ನು ಕೊಡುವಂತೆ ಕೇಳಿದ್ದಾನೆ. ಆಗ ಇಬ್ಬರ ನಡುವೆ ಜಗಳವಾಗಿದೆ. ಈ ವೇಳೆ ಮರದ ತುಂಡಿನಿಂದ ಪುನೀತ್ ತಲೆಯ ಮೇಲೆ ಸ್ನೇಹಿತ ಹಲ್ಲೆ ನಡೆಸಿದ್ದಾನೆ. ಇದನ್ನೂ ಓದಿ: ಚಿಕ್ಕಬಳ್ಳಾಪುರದ ನೈತಿಕ ಪೊಲೀಸ್‍ಗಿರಿ ಪ್ರಕರಣ – ಇಬ್ಬರು ಆರೋಪಿಗಳು ಅರೆಸ್ಟ್

MANDYA SP

ಕೂಡಲೆ ಹಲ್ಲೆಗೊಳಗಾದ ಪುನೀತ್‍ನನ್ನು ಕೆ.ಎಂ ದೊಡ್ಡಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿಗೆ (Mysuru)ಕರೆದೊಯ್ಯುವಂತೆ ವೈದ್ಯರು ಸೂಚಿಸಿದ್ದಾರೆ. ಆದರೂ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಪುನೀತ್ ಸಾವನ್ನಪ್ಪಿದ್ದಾನೆ.

ಘಟನೆಯ ಸ್ಥಳಕ್ಕೆ ಮಂಡ್ಯ (Mandya) ಎಸ್ಪಿ ಯತೀಶ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಮದ್ದೂರು ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಧಾರವಾಡದಲ್ಲಿ ಡಬಲ್ ಮರ್ಡರ್ – ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದ ದುಷ್ಕರ್ಮಿಗಳು

Share This Article