ಚಿಕ್ಕಬಳ್ಳಾಪುರ: ನರೇಗಾ ಕಾಮಗಾರಿ ಮಾಡಿ ಅಕ್ರಮ ಬಿಲ್ ಮಾಡಿಕೊಳ್ಳುತ್ತಿದ್ದಾರೆ ಎಂದು ಹಿರಿಯ ಅಧಿಕಾರಿಗಳು ಹಾಗೂ ಶಾಸಕರಿಗೆ ದೂರು ನೀಡಿದ್ದಾರೆ ಎಂಬ ಅನುಮಾನಕ್ಕೆ ಅಕ್ಕ ಪಕ್ಕದ ಮನೆಯವರ ನಡುವೆ ಗಲಾಟೆ ನಡೆದಿದೆ. ಈ ವೇಳೆ ಮಕ್ಕಳ ಮೇಲೆ ಹಲ್ಲೆ ತಡೆಯಲು ಮುಂದಾದ ತಾಯಿ ಕೊಲೆಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಚಿಕ್ಕಮುದ್ದೇನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ನಿವಾಸಿ ಗೌರಮ್ಮ(60) ಮೃತ ಮಹಿಳೆ. ಗ್ರಾಮದ ಹನುಮಂತರಾಯಪ್ಪ ಮಾಜಿ ಗ್ರಾಮ ಪಂಚಾಯಿತಿ ಸದಸ್ಯನಾಗಿದ್ದು, ಗ್ರಾಮ ವ್ಯಾಪ್ತಿಯಲ್ಲಿ ನರೇಗಾ ಕಾಮಗಾರಿಗಳನ್ನು ಮಾಡಿಸುತ್ತಿದ್ದರು. ಕಾಮಗಾರಿ ಮಾಡಿದ ತದನಂತರ ನರೇಗಾ ಜಾಬ್ ಕಾರ್ಡ್ ಇರುವ ಗ್ರಾಮಸ್ಥರ ಖಾತೆಗೆ ಬಂದ ಹಣವನ್ನು ವಸೂಲಿ ಮಾಡಿಕೊಳ್ಳುತ್ತಿದ್ದರು ಎನ್ನಲಾಗಿದೆ. ಇದನ್ನೂ ಓದಿ: 7 ಭ್ರೂಣಗಳ ಪತ್ತೆ ಪ್ರಕರಣ – ಭ್ರೂಣಗಳನ್ನು ಎಸೆದಿದ್ದ ಆಸ್ಪತ್ರೆ ಸೀಜ್ ಮಾಡಿದ DHO
Advertisement
Advertisement
ಈ ವಿಚಾರದ ಬಗ್ಗೆ ಗೌರಮ್ಮನ ಮಕ್ಕಳು ಹಿರಿಯ ಅಧಿಕಾರಿಗಳು ಹಾಗೂ ಶಾಸಕ ವೆಂಕಟರಮಣಯ್ಯನಿಗೆ ದೂರು ನೀಡಿದ್ದಾರೆ ಎಂದು ಅನುಮಾನಗೊಂಡು ಅಕ್ಕಪಕ್ಕದ ಮನೆಯವರು ಅವರ ಮೇಲೆ ಹಲ್ಲೆಗೆ ಮುಂದಾಗಿದ್ದಾರೆ. ಚನ್ನರಾಯಪ್ಪ, ಸುಧಾಕರ್, ಮಾರುತಿ ಹಾಗೂ ಗಂಗಮ್ಮನ ಮಕ್ಕಳ ನಡುವೆ ಗಲಾಟೆ ನಡೆದಿದ್ದು, ಈ ವೇಳೆ ತನ್ನ ಮಕ್ಕಳ ಪರವಾಗಿ ಹಲ್ಲೆ ತಡೆಯಲು ಗೌರಮ್ಮ ಧಾವಿಸಿದ್ದರು. ಬಳಿಕ ಅವರೂ ಹಲ್ಲೆಗೆ ಒಳಗಾಗಿ ಕುಸಿದುಬಿದ್ದಿದ್ದು, ಆಸ್ಪತ್ರೆಗೆ ಸಾಗಿಸುವ ವೇಳೆ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ. ಇದನ್ನೂ ಓದಿ: ಜೈಲಿನಲ್ಲಿದ್ದ 9 ಕೈದಿಗಳಿಗೆ ಕೊರೊನಾ ಪಾಸಿಟಿವ್
Advertisement
Advertisement
ಈ ಸಂಬಂಧ ಹನುಮಂತರಾಯಪ್ಪ, ಮಾರುತಿ, ಸುಧಾಕರ್, ಚಿನ್ನಕ್ಕ ವಿರುದ್ಧ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳು ಗ್ರಾಮ ತೊರೆದು ತಲೆಮರೆಸಿಕೊಂಡಿದ್ದಾರೆ. ಮೃತದೇಹವನ್ನು ದೊಡ್ಡಬಳ್ಳಾಪುರ ಸಾರ್ವಜನಿಕ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಿದ್ದು, ಜಿಲ್ಲಾಧಿಕಾರಿ ಶ್ರೀನಿವಾಸ್, ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.