ತುಮಕೂರು: ಹಾಡಹಗಲೇ ನಡುರಸ್ತೆಯಲ್ಲಿ ಡಿಎಸ್‌ಎಸ್ ಮುಖಂಡನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ತುಮಕೂರಿನಲ್ಲಿ ನಡೆದಿದೆ.
ಘಟನೆ ಜಿಲ್ಲೆಯ ಗುಬ್ಬಿ ಪಟ್ಟಣದ ಬಿಎಸ್ ರಸ್ತೆಯಲ್ಲಿ ನಡೆದಿದ್ದು, ಡಿಎಸ್‌ಎಸ್ ಸಂಘದ ತಾಲೂಕು ಸಂಚಾಲಕನಾಗಿದ್ದ ನರಸಿಂಹ ಮೂರ್ತಿ ಅಲಿಯಾಸ್ ಕುರಿ ಮೂರ್ತಿ(45) ಕೊಲೆಯಾಗಿದ್ದಾರೆ.
Advertisement
ಬುಧವಾರ ಮಧ್ಯಾಹ್ನದ ವೇಳೆ ಟೀ ಅಂಗಡಿಯ ಮುಂದೆ ಕುಳಿತಿದ್ದ ಕುರಿ ಮೂರ್ತಿ ಮೇಲೆ ದುಷ್ಕರ್ಮಿಗಳು ಅಟ್ಯಾಕ್ ಮಾಡಿದ್ದರು. ಮಾರಕಾಸ್ತ್ರಗಳಿಂದ ಬರ್ಬರವಾಗಿ ಹತ್ಯೆ ನಡೆಸಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಸ್ಥಳಕ್ಕೆ ಗುಬ್ಬಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ವಿಕ್ಟೋರಿಯಾ ಆಸ್ಪತ್ರೆ ವೈದ್ಯ ಆತ್ಮಹತ್ಯೆ
Advertisement
Advertisement
ನರಸಿಂಹ ಮೂರ್ತಿ ಮೃತದೇಹವನ್ನು ಜಿಲ್ಲಾ ಆಸ್ಪತ್ರೆ ಶವಾಗಾರಕ್ಕೆ ಕಳುಹಿಸಲಾಗಿದ್ದು, ನೂರಾರು ಸಂಖ್ಯೆಯಲ್ಲಿ ಕುಟುಂಬಸ್ಥರು ಹಾಗೂ ಸ್ಥಳೀಯರು ನೆರೆದಿದ್ದಾರೆ. ಕುರಿ ಮೂರ್ತಿಯನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಸ್ಥಳಕ್ಕೆ ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕಿ ಟಿಎಸ್ ಪ್ರೇಮಾ ಭೇಟಿ ನೀಡಿ, ಮೃತರ ಕುಟುಂಬಸ್ಥರಿಂದ ಮಾಹಿತಿ ಪಡೆದಿದ್ದಾರೆ. ಇದನ್ನೂ ಓದಿ: ಅಣ್ಣನ ಹೆಸರಿಗೆ ಆಸ್ತಿ ಮಾಡಿಸ್ತಾನೆ ಅಂತ JDS ಕಾರ್ಯಕರ್ತನ ಕೊಲೆ ಮಾಡಿ ಅಪಘಾತ ಎಂದು ಬಿಂಬಿಸಿದ್ದ
Advertisement
ಸ್ಥಳಕ್ಕೆ ಗುಬ್ಬಿ ಶಾಸಕ ಎಸ್‌ಆರ್ ಶ್ರೀನಿವಾಸ್ ಭೇಟಿ ನೀಡಿದ್ದು, ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ. ಬಳಿಕ ಮಾತನಾಡಿದ ಶ್ರೀನಿವಾಸ್, ಮೂರ್ತಿ ಕೊಲೆ ವೈಯಕ್ತಿಕ ದ್ವೇಶದ ಹಿನ್ನೆಲೆ ಆಗಿರುವ ಸಾಧ್ಯತೆ ಇದೆ. ಗುಬ್ಬಿ ಮೂಲದ ಯಾರೂ ಕೊಲೆ ಮಾಡಿರುವ ಸಾಧ್ಯತೆ ಇಲ್ಲ. ಹೊರಗಿನವರು ಕೊಲೆ ಮಾಡಿರುವ ಶಂಕೆ ಇದೆ ಎಂದು ಹೇಳಿಕೆ ನೀಡಿದರು.
ನಿನ್ನೆ ಎಲ್ಲವೂ ಚೆನ್ನಾಗಿಯೇ ಇತ್ತು. ಅವರಿಗೆ ಯಾರೂ ಶತ್ರುಗಳು ಇರಲಿಲ್ಲ. ಆದರೆ ಇತ್ತೀಚೆಗೆ ರಾಜಕೀಯದಲ್ಲಿ ಮುಂದುವರಿದಿದ್ದರಿಂದ ಹೀಗಾಗಿದೆ. ಈ ಕೊಲೆಗೆ ಸರ್ಕಾರದ ವೈಫಲ್ಯವೇ ಕಾರಣ, ಸರ್ಕಾರ ನಮಗೆ ನ್ಯಾಯ ಒದಗಿಸಬೇಕು ಎಂದು ಕಟುಂಬಸ್ಥರು ಆಗ್ರಹಿಸಿದ್ದಾರೆ.