ರಿಯಲ್ ಎಸ್ಟೇಟ್ ಉದ್ಯಮಿ ಕೊಲೆ: ಆರೋಪಿ ಮೇಲೆ ಫೈರಿಂಗ್

Public TV
1 Min Read
Belgaum real estate murder firing

ಬೆಳಗಾವಿ: ಕುಂದಾನಗರಿ ಬೆಳಗಾವಿಯಲ್ಲಿ ರಿಯಲ್ ಎಸ್ಟೇಟ್ ಉದ್ಯಮಿಯನ್ನ ಕೊಲೆ ಮಾಡಿದ ಆರೋಪಿ ಮೇಲೆ ಪೊಲೀಸರು ಫೈರಿಂಗ್ ಮಾಡಿದ್ದಾರೆ.

ಬೆಳಗಾವಿ ತಾಲೂಕಿನ ಮಂಡೋಳಿ ಗ್ರಾಮದ ರಸ್ತೆಯಲ್ಲಿ ಕಳೆದ ಎರಡು ತಿಂಗಳ ಹಿಂದೆ ರಿಯಲ್ ಎಸ್ಟೇಟ್ ಉದ್ಯಮಿ ರಾಜು ದೊಡ್ಡಬೊಮ್ಮನ್ನವರ್ ಅವರನ್ನು ಮಾರಕಾಸ್ತ್ರಗಳಿಂದ ಭೀಕರವಾಗಿ ಕೊಚ್ಚಿ ಕೊಲೆ ಮಾಡಲಾಗಿತ್ತು. ರಾಜು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ನಾಲ್ಕು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

Police Jeep

ಇಂದು ಬೆಳಗಿನಜಾವ ಖಚಿತ ಮಾಹಿತಿ ಮೇರೆಗೆ ಬೆಳಗಾವಿ ಮಾರ್ಕೆಟ್ ಎಸಿಪಿ ನಾರಾಯಣ್ ಭರಮನಿ ನೇತೃತ್ವದ ಪೊಲೀಸ್ ತಂಡವು ವೀರಭದ್ರೇಶ್ವರ ನಗರದ ಕೋಯ್ಲಾ ಹೋಟೆಲ್ ಬಳಿ ಕೊಲೆ ಆರೋಪಿ ವಿಶಾಲ್‍ಸಿಂಗ್ ಚೌಹಾನ್‍ನನ್ನು ಹಿಡಿಯಲು ಹೋಗಿದ್ದರು. ಈ ಸಂದರ್ಭದಲ್ಲಿ ನಾರಾಯಣ್ ಭರಮನಿ ಮತ್ತವರ ತಂಡದ ಮೇಲೆ ಮಾರಕಾಸ್ತ್ರಗಳಿಂದ ಆರೋಪಿ ಹಲ್ಲೆಗೆ ಮುಂದಾಗಿದ್ದಾನೆ. ಇದನ್ನೂ ಓದಿ: ದೇಸಿ ಶೈಲಿಯಲ್ಲಿ ಮಾಡಿ ‘ಹೆಸರು ಕಾಳಿನ ಪಲ್ಯ’

KILLING CRIME

ಈ ವೇಳೆ ನಾರಾಯಣ್ ಅವರು ಆರೋಪಿ ವಿಶಾಲ್‍ಸಿಂಗ್‍ ಮೇಲೆ ಎರಡು ಸುತ್ತು ಫೈರಿಂಗ್ ಮಾಡಿದ್ದಾರೆ. ಪರಿಣಾಮ ವಿಶಾಲ್ ಸಿಂಗ್ ಕಾಲಿಗೆ ಗುಂಡು ತಗುಲಿದ್ದು, ಬೆಳಗಾವಿ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ.

ಪ್ರಸ್ತುತ ಈ ಪ್ರಕರಣ ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

Live Tv

Share This Article
Leave a Comment

Leave a Reply

Your email address will not be published. Required fields are marked *