ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಪ್ರಸಿದ್ಧ ಮುರುಡೇಶ್ವರ ದೇವಸ್ಥಾನದ ಶಿವನ ಮೂರ್ತಿಯ ಚಿತ್ರವನ್ನು ವಿರೂಪಗೊಳಿಸಿ ಐಸಿಸ್‍ನ ಪತ್ರಿಕೆ ದಿ ವಾಯ್ಸ್ ಆಪ್ ಹಿಂದ್ ನಲ್ಲಿ ಪ್ರಕಟವಾಗುತಿದ್ದಂತೆ ಇತ್ತ ಜಿಲ್ಲೆಯ ಮುರುಡೇಶ್ವರ ದೇವಸ್ಥಾನಕ್ಕೆ ಗೃಹಸಚಿವರ ಸೂಚನೆಯಂತೆ ಭದ್ರತೆ ವದಗಿಸಲಾಗಿದೆ.
ಇಂದಿನಿಂದ ಜಾರಿ ಬರುವಂತೆ ಜಿಲ್ಲಾ ಪೊಲೀಸ್ ಇಲಾಖೆಯಿಂದ ಒಂದು ಪೊಲೀಸ್ ತುಕಡಿಯನ್ನು ನಿಯೋಜನೆ ಮಾಡಿದ್ದು, ದೇವಸ್ಥಾನದ ಒಳಭಾಗದಲ್ಲಿ ಎ.ಎಸ್.ಐ ಸೆರಿದಂತೆ ಹತ್ತು ಜನ ಪೊಲೀಸರನ್ನು ಭದ್ರತೆ ಹಾಗೂ ಬರುವ ಭಕ್ತರ ತಪಾಸಣೆಗೆ ನಿಯೋಜನೆ ಮಾಡಲಾಗಿದೆ. ಇದನ್ನೂ ಓದಿ: ಮುರುಡೇಶ್ವರದ ಶಿವನ ಬೃಹತ್ ಪ್ರತಿಮೆಯ ಮೇಲೆ ಐಸಿಸ್ ಉಗ್ರರ ಕಣ್ಣು
ವಿವಿಧ ಸಂಘಟನೆಯಿಂದ ಖಂಡನೆ ವ್ಯಕ್ತವಾಗಿದೆ. ಶಿವನ ವಿಗ್ರಹ ವಿರೂಪಗೊಳಿಸಿ ಪ್ರಕಟಿಸಿದ್ದಕ್ಕೆ ಮುರುಡೇಶ್ವರದಲ್ಲಿ ಐಸಿಸ್ ಪ್ರತಿಕೃತಿ ದಹನ ಮಾಡಿ ಬಿಜೆಪಿ ಯುವಮೋರ್ಚಾದಿಂದ ಪ್ರತಿಭಟನೆ ಮಾಡಿ ಮನವಿ ಸಲ್ಲಿಸಿದರು. ತಪ್ಪಿತಸ್ಥರ ವಿರುದ್ಧ ಶೀಘ್ರ ಕ್ರಮ ಜರುಗಿಸುವಂತೆ ಆಗ್ರಹಿಸಿದ್ದಾರೆ. ಭಟ್ಕಳ, ಕುಮಟಾ ಶಾಸಕರು ಸಹ ತಕ್ಷಣ ತನಿಖೆ ನಡೆಸಿ ತಪ್ಪಿತಸ್ಥರನ್ನು ಬಂಧಿಸುವಂತೆ ಆಗ್ರಹಿಸಿದ್ದಾರೆ. ಇದನ್ನೂ ಓದಿ: ನಾವು ನಿಮ್ಮನ್ನು ಹತ್ಯೆ ಮಾಡುತ್ತೇವೆ – ಗಂಭೀರ್‌ಗೆ ಐಸಿಸ್ ಕಾಶ್ಮೀರದಿಂದ ಜೀವ ಬೆದರಿಕೆ
ಸಿದ್ದಾಪುರ ತಾಲೂಕಿನ ಕಲಗದ್ದೆ ಗ್ರಾಮಕ್ಕೆ ಮಂಗಳವಾರ ಸಂಜೆ ಭೇಟಿ ನೀಡಿ ಮಾಧ್ಯಮದವರ ಜೊತೆ ಮಾತನಾಡಿದರು. ಮುರುಡೇಶ್ವರ ದೇವಸ್ಥಾನದ ವಿಗ್ರಹ ಧ್ವಂಸಗೊಳಿಸಿ ಐಸಿಸ್ ಧ್ವಜ ನೆಟ್ಟ ಚಿತ್ರ ಹರಿಬಿಟ್ಟವರ ಕುರಿತು ತನಿಖೆಗೆ ಸೂಚಿಸಲಾಗಿದೆ. ತಪ್ಪಿತಸ್ಥರನ್ನು ಕಠಿಣ ಶಿಕ್ಷೆಗೆ ಗುರಿ ಪಡಿಸಲಾಗುವುದು. ದೇವಸ್ಥಾನಕ್ಕೆ ಭದ್ರತೆ ಹೆಚ್ಚಿಸಲಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.