ChitradurgaDistrictsKarnatakaLatestMain Post

ಅನಾಥ ಸೇವಾಶ್ರಮದ ಅಧ್ಯಕ್ಷ ಸ್ಥಾನದಿಂದ ಮುರುಘಾ ಶ್ರೀ ವಜಾ

ಚಿತ್ರದುರ್ಗ: ಪೊಕ್ಸೋ ಕೇಸ್‌ನಡಿಯಲ್ಲಿ ಬಂಧನಕ್ಕೆ ಒಳಗಾಗಿರುವ ಮುರುಘಾ ಶ್ರೀಗಳನ್ನು ಅನಾಥ ಸೇವಾಶ್ರಮದ ಅಧ್ಯಕ್ಷ ಸ್ಥಾನದಿಂದ ವಜಾ ಮಾಡಲಾಗಿದೆ.

ಚಿತ್ರದುರ್ಗ ಜಿಲ್ಲೆಯ ಹೊಳೆಲ್ಕೆರೆ ತಾಲೂಕಿನ ಮಲ್ಲಾಡಿಹಳ್ಳಿ ಗ್ರಾಮದಲ್ಲಿರುವ ಅನಾಥ ಸೇವಾಶ್ರಮದಲ್ಲಿ ಮುರುಘಾ ಶ್ರೀಗಳು ಅಧ್ಯಕ್ಷರಾಗಿದ್ದರು.

ಲೈಂಗಿಕ ದೌರ್ಜನ್ಯ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಅನಾಥ ಸೇವಾಶ್ರಮ ವಿಶ್ವಸ್ತ ಸಮಿತಿಯು ಅವರನ್ನು ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸಿರುವುದಾಗಿ ತಿಳಿಸಿದೆ. ಈ ಬಗ್ಗೆ ಗೌರವ ಕಾರ್ಯದರ್ಶಿ ಪ್ರೊ. ಕೆ. ಇ ರಾಧಾಕೃಷ್ಣ ಪ್ರಕಟಣೆಯನ್ನು ಹೊರಡಿಸಿದ್ದಾರೆ. ಜೊತೆಗೆ ವಿಶ್ವಸ್ತ ಸಮಿತಿಯ ಸದಸ್ಯತ್ವದಿಂದಲೂ ಮುರುಘಾ ಶ್ರೀ ಅಮಾನತು ಮಾಡಿರುವುದಾಗಿ ತಿಳಿಸಿದ್ದಾರೆ. ಇದನ್ನೂ ಓದಿ: ತನಿಖೆಗೆ ಸಹಕರಿಸದೇ ಮುರುಘಾ ಶ್ರೀ ಮತ್ತೆ ಆಸ್ಪತ್ರೆ ಸುತ್ತಾಟ

ಮುರುಘಾ ಶರಣರ ವಿರುದ್ಧ ಮೈಸೂರಿನ ನಜರಾಬಾದ್ ಪೊಲೀಸ್ ಠಾಣೆಯಲ್ಲಿ ಮಠದ ಶಾಲೆಯಲ್ಲಿ ಓದುತ್ತಿರುವ ಇಬ್ಬರು ವಿದ್ಯಾರ್ಥಿನಿಯಿರಿಂದ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಾಗಿತ್ತು. ನಂತರ ಪ್ರಕರಣ ತಮ್ಮ ವ್ಯಾಪ್ತಿಗೆ ಬರುವುದಿಲ್ಲ ಎಂಬ ಕಾರಣ ನೀಡಿ ಮೈಸೂರಿನಿಂದ ಚಿತ್ರದುರ್ಗಕ್ಕೆ ಪ್ರಕರಣದ ವಿಚಾರಣೆಯನ್ನು ಹಸ್ತಾಂತರಿಸಲಾಗಿತ್ತು. ಬಳಿಕ ದೊಡ್ಡ ಮಟ್ಟದ ಪ್ರತಿಭಟನೆಗಳು ನಡೆದ ಹಿನ್ನೆಲೆ ಮುರುಘಾ ಶರಣರನ್ನು ಗುರುವಾರ ತಡರಾತ್ರಿ ಪೊಲೀಸರು ಬಂಧಿಸಿದ್ದರು. ಈ ಹಿನ್ನೆಲೆಯಲ್ಲಿ ಅವರನ್ನು ತೀವ್ರವಾಗಿ ವಿಚಾರಣೆಗೆ ಒಳಪಡಿಸಲಾಗುತ್ತಿದೆ. ಇದನ್ನೂ ಓದಿ: ಪೋಕ್ಸೋ ಕೇಸ್‌ – ಸಾಕ್ಷ್ಯ ನಾಶ ಮಾಡಿದ್ರಾ ಮುರುಘಾ ಶ್ರೀ?

Live Tv

Leave a Reply

Your email address will not be published. Required fields are marked *

Back to top button