ಚಿತ್ರದುರ್ಗ: ಕೋಟೆನಾಡು ಚಿತ್ರದುರ್ಗದ ಮುರುಘಾಮಠಕ್ಕೆ ಭೇಟಿ ನೀಡಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಲಿಂಗಧಾರಣೆ ಮಾಡಿ, ವಿಭೂತಿ ಹಚ್ಚಿದ ಮುರುಘಾಶ್ರೀಗಳು ತತ್ವದ ಉಪದೇಶ ಮಾಡಿದರು.
ಸಿದ್ದರಾಮಯ್ಯ ಅವರ 75ನೇ ಜನ್ಮದಿನದ ಪ್ರಯುಕ್ತ ದಾವಣೆಗೆರೆಯಲ್ಲಿ ನಡೆಯುತ್ತಿರುವ ಸಿದ್ದರಾಮೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಹುಬ್ಬಳ್ಳಿಯಿಂದ ಹೊರಟಿದ್ದ ರಾಹುಲ್ ಗಾಂಧಿ ಅವರು ಚಿತ್ರದುರ್ಗದ ಮುರುಘಾಮಠಕ್ಕೆ ಇಂದು ಬೆಳಗ್ಗೆ ಭೇಟಿ ನೀಡಿದ್ದರು. ಈ ವೇಳೆ ಮುರುಘಾಮಠದ ಡಾ.ಶಿವಮೂರ್ತಿ ಮುರುಘಾ ಶರಣರು ಸೇರಿದಂತೆ ವಿವಿಧ ಮಠಾಧೀಶರಿಂದ ಆಶೀರ್ವಾದ ಪಡೆದರು. ಇದನ್ನೂ ಓದಿ: ಸಿದ್ದರಾಮೋತ್ಸವ : ‘ಮೈಸೂರು ಹುಲಿಯಾ’, ‘ಸೆಲ್ಫ್ ಮೇಡ್ ಸಿದ್ದಣ್ಣ’ ಹಾಡು ರಿಲೀಸ್
ಮುರುಘಾಮಠಕ್ಕೆ ಆಗಮಿಸಿದ ರಾಹುಲ್ ಗಾಂಧಿ ಅವರು ಮೊದಲಿಗೆ ಬಸವಣ್ಣನ ಭಾವಚಿತ್ರ ಹಾರ ಹಾಕಿ ನಮಸ್ಕರಿಸಿದರು. ನಂತರ ಮಠಾಧೀಶರೊಂದಿಗೆ ಕೊಂಚ ಕಾಲ ಸಂವಾದ ನಡೆಸಿದ ರಾಹುಲ್ ಗಾಂಧಿ ಅವರಿಗೆ ಹಾರ ಹಾಕಿ, ಶಾಲು ಹೊದಿಸಿ, ಬಸವಣ್ಣನವರ ಬಾವಚಿತ್ರ ನೀಡಿ ಸನ್ಮಾನ ಮಾಡಲಾಯಿತು. ಬಳಿಕ ರಾಹುಲ್ ಗಾಂಧಿಗೆ ಲಿಂಗಧಾರಣೆ ಮಾಡಿ, ವಿಭೂತಿ ಹಚ್ಚಿ, ಲಿಂಗ ಪೂಜೆ ತತ್ವದ ಉಪದೇಶ ಮಾಡಿದರು ಮತ್ತು ಲಿಂಗ ಪೂಜೆ ಪಾಲಿಸುವುದಾಗಿ ರಾಹುಲ್ ಗಾಂಧಿ ತಿಳಿಸಿದರು.
ಈ ವೇಳೆ ರಾಹುಲ್ ಗಾಂಧಿ ಜೊತೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಮಲ್ಲಿಕಾರ್ಜುನ ಖರ್ಗೆ, ಸುರ್ಜೆವಾಲಾ, ವೇಣುಗೋಪಾಲ, ಕೆಪಿಪಿಸಿ ಕಾರ್ಯಧ್ಯಕ್ಷ ಈಶ್ವರ್ ಖಂಡ್ರೆ ಸಾಥ್ ನೀಡಿದರು. ಇದನ್ನೂ ಓದಿ: ಹುಬ್ಬಳ್ಳಿಯ ಜಿಮ್‍ನಲ್ಲಿ ಬಿಗಿ ಭದ್ರತೆಯಲ್ಲಿಯೇ ರಾಹುಲ್ ಗಾಂಧಿ ವರ್ಕೌಟ್