ಬೆಳಗಾವಿ: ನಮ್ಮ ಕುಟುಂಬದಿಂದ ಮೂರನೇ ವ್ಯಕ್ತಿ ಚುನಾವಣೆಗೆ ಸ್ಪರ್ಧೆ ಮಾಡಿದರೆ ಅವತ್ತೆ ನಾನು ರಾಜೀನಾಮೆ ಕೊಟ್ಟು ಮನೆಯಲ್ಲಿ ಇರುತ್ತೇನೆ ಎಂದು ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಹೇಳಿದರು.
ನಗರದಲ್ಲಿ ಕುಟುಂಬ ರಾಜಕಾರಣದ ಬಗ್ಗೆ ಮೋದಿ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ನಮ್ಮ ಕುಟುಂಬದಿಂದ ಮೂರನೇ ವ್ಯಕ್ತಿ ಸ್ಪರ್ಧಿಸಿದರೆ ಅವತ್ತೆ ರಾಜೀನಾಮೆ ಕೊಟ್ಟು ಮನೆಯಲ್ಲಿ ಇರುತ್ತೇನೆ. ಮೊದಲಿಂದಲೂ ನಾವು ಇಬ್ಬರು ರಾಜಕಾರಣದಲ್ಲಿ ಇದ್ದೇವೆ. ನಿರಾಣಿ ಕುಟುಂಬದ ಮೂರನೇಯರು ರಾಜಕೀಯಕ್ಕೆ ಬರ್ತಿಲ್ಲ. ಇದು ನೂರಕ್ಕೆ ನೂರರಷ್ಟು ಸತ್ಯವಾಗಿದ್ದು, ನಿರಾಣಿ ಕುಟುಂಬದ ಮೂರನೇ ವ್ಯಕ್ತಿಯ ಸ್ಪರ್ಧೆ ಮಾಧ್ಯಮಗಳ ಸೃಷ್ಟಿಯಾಗಿದೆ ಎಂದರು. ಇದನ್ನೂ ಓದಿ: ರೋಹಿತ್ ಚಕ್ರತೀರ್ಥ ಸಮಿತಿಯಿಂದ ಪಿಯುಸಿ ಪಠ್ಯ ಪರಿಷ್ಕರಣೆ ಮುಕ್ತಾಯ
Advertisement
Advertisement
ಸಹೋದರ ಸಂಗಮೇಶ ನಿರಾಣಿ ಕಳೆದ 4 ವರ್ಷದಿಂದ ಜಮಖಂಡಿಯಲ್ಲಿ ಸಭೆ ಸಮಾರಂಭ ಮಾಡಿಲ್ಲ. ನನಗೆ ಈ ರೀತಿಯ ಬ್ಲೆಮ್ ಬರಬಾರದು ಎಂದು ಜಮಖಂಡಿ ಮಾಜಿ ಶಾಸಕರ ಅನುಮತಿ ಪಡೆದು ಹೋಗುತ್ತಿರುವೆ. ನಾನು ನನ್ನ ಸಹೋದರ ಹನುಮಂತ ನಿರಾಣಿ ಹೊರತುಪಡಿಸಿ ನಮ್ಮ ಮನೆಯಲ್ಲಿ ಯಾರು ಚುನಾವಣೆಗೆ ಸ್ಪರ್ಧೆ ಮಾಡುವುದಿಲ್ಲ. ಒಂದು ವೇಳೆ ಯಾರಾದರೂ ನನ್ನ ಮಾತು ಕೇಳದೇ ನಮ್ಮ ಕುಟುಂಬದವರು ರಾಜಕೀಯಕ್ಕೆ ಎಂಟ್ರಿಯಾದರೆ ಅವತ್ತೇ ನಾನು ರಾಜೀನಾಮೆ ಕೊಟ್ಟು ಮನೆಯಲ್ಲಿ ಇರುತ್ತೇನೆ ಎಂದರು. ಇದನ್ನೂ ಓದಿ: ಕಾಂಗ್ರೆಸ್‌ಗೆ ಬ್ರಿಜೇಶ್ ಕಾಳಪ್ಪ ರಾಜೀನಾಮೆ
Advertisement
Advertisement
ಪ್ರಧಾನಮಂತ್ರಿ ಹೇಳಿದ್ದನ್ನ ನಾನು ಪಾಲಿಸುತ್ತೇನೆ. ಮೊದಲಿನಿಂದಲೂ ಇಬ್ಬರಿಗೆ ಟಿಕೆಟ್ ಕೊಟ್ಟಿದ್ದಾರೆ ನಾವು ಮುಂದುವರಿಯುತ್ತೇವೆ. ನೂರಕ್ಕೆ ನೂರರಷ್ಟು ಮೂರನೆಯವರು ರಾಜಕೀಯಕ್ಕೆ ಬರುವುದಿಲ್ಲ. ಇದರಲ್ಲಿ ಯಾವುದೇ ಸಂಶಯವೇ ಬೇಡಾ. ನಾವು ಸ್ಪರ್ಧೆ ಮಾಡುವುದಿಲ್ಲ ಅಂದ್ಮೇಲೆ ಮತ್ತೊಬ್ಬರ ಬಗ್ಗೆ ನಾನು ಮಾತನಾಡುವುದಿಲ್ಲ. ಮನಾವು ಜಮಖಂಡಿ ಆಗಲಿ, ರಾಮದುರ್ಗ ಆಗಲಿ ಅಲ್ಲಿ ಕಾಲಿಟ್ಟಿಲ್ಲ ಎಂದು ಹೇಳಿದರು.