ಬೆಳಗಾವಿ: ಕಿತ್ತೂರು ಚೆನ್ನಮ್ಮಳ ನಾಡಿನಲ್ಲಿ ಬೃಹತ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಈಗಾಗಲೇ ರೂಪರೇಷಗಳನ್ನು ಹಾಕಿಕೊಳ್ಳಲಾಗಿದ್ದು, ಈ ಯೋಜನೆಯಿಂದ ಈ ಭಾಗದ ಅಭಿವೃದ್ಧಿಗೆ ಅನುಕೂಲವಾಗಲಿದೆ ಎಂದು ಬೃಹತ್ ಮತ್ತು ಮದ್ಯಮ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಹೇಳಿದರು.
Advertisement
ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬೆಳಗಾವಿ ಮತ್ತು ಹುಬ್ಬಳ್ಳಿ ಡೋಮ್ಯಾಸ್ಟಿಕ್ ಏರ್ ಪೋರ್ಟ್ ಮಾಡಿಕೊಂಡು ಕಿತ್ತೂರಿನಲ್ಲಿಯೂ ಒಂದು ಏರ್ ಪೋರ್ಟ್ ಅನ್ನು ನಿರ್ಮಿಸುವುದಾಗಿ ಮುಂಬರುವ ದಿನಗಳಲ್ಲಿ ಕಾರ್ಯ ನಡೆಯಲಿದೆ. ಈಗಾಗಲೇ ಖಾಸಗಿ ಬಂಡವಾಳ ಹೂಡಿಕೆದಾರರೊಂದಿಗೆ ಚರ್ಚಿಸಲಾಗಿದೆ. ಶೀಘ್ರದಲ್ಲಿ ವಿಮಾನ ನಿಲ್ದಾಣವಾಗಲಿದೆ ಎಂದು ಆಶ್ವಾಸನೆ ನೀಡಿದರು. ಇದನ್ನೂ ಓದಿ: ಮಾವಿನಹಣ್ಣಿನ ಮಾರ್ಕೆಟ್ ನಮ್ಮದಾಗಬೇಕು – ಹಾಸನದಲ್ಲಿ ಹೊಸ ಅಭಿಯಾನ
Advertisement
Advertisement
ಉತ್ತರ ಕರ್ನಾಟಕದಲ್ಲಿ ಅಭಿವೃದ್ಧಿ ಹೊಂದಲು ಮೂಲಭೂತ ಸೌಕರ್ಯ ಬೇಕು. ಕಾರವಾರ ವಿಮಾನ ನಿಲ್ದಾಣ ಪಿಪಿ ಮಾದರಿಯಲ್ಲಿ ಅಭಿವೃದ್ಧಿಪಡಿಸುವ ಕೆಲಸ ಮಾಡಲಾಗುತ್ತದೆ. ಅದರಂತೆ, ಕಿತ್ತೂರಿನಲ್ಲಿಯೂ ಒಂದು ವಿಮಾನ ನಿಲ್ದಾಣ ಮಾಡುವ ಖಾಸಗಿ ಕಂಪನಿಯವರು ಅವರು ಸಹ ಸಹಮತ ನೀಡಿದ್ದಾರೆ. ಶೀಘ್ರದಲ್ಲಿಯೇ ಕಿತ್ತೂರಿನಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಾಗಲಿದೆ ಎಂದು ಭರವಸೆ ನೀಡಿದರು. ಇದನ್ನೂ ಓದಿ: ಮಂಡ್ಯ ವಿದ್ಯಾರ್ಥಿನಿಗೆ ನಗದು ಬಹುಮಾನ – ಹಲಾಲ್ ವಿರುದ್ಧ ಅಭಿಯಾನ: ಎರಡಕ್ಕೂ ನಂಟೇನು?