ದಾವಣಗೆರೆ: ಈ ಸಂದರ್ಭದಲ್ಲಿ ನಾವು ಮೌನವಾಗಿರುತ್ತೇವೆ. ಭಕ್ತರಿಗೆ ಮೌನವೇ ದೊಡ್ಡ ಸಂದೇಶ ಎಂದು ದಾವಣಗೆರೆಯಲ್ಲಿ ಮುರುಘಾ ಶ್ರೀಗಳು (Murugha Shree) ಭಕ್ತರಿಗೆ ಸಂದೇಶ ರವಾನಿಸಿದರು.
ಫೋಕ್ಸೊ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರದುರ್ಗ ಜೈಲಿನಿಂದ ಬಿಡುಗಡೆಯಾದ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರು ದಾವಣಗೆರೆಯ ವಿರಕ್ತ ಮಠಕ್ಕೆ ಭೇಟಿ ನೀಡುವ ಮುನ್ನ ಮಾತನಾಡಿದರು. ಈ ಸಂದರ್ಭದಲ್ಲಿ ನಾವು ಮೌನವಾಗಿರುತ್ತೇವೆ. ಭಕ್ತರಿಗೆ ಮೌನವೇ ದೊಡ್ಡ ಸಂದೇಶ. ಇದು ಏನೂ ಹೇಳುವ ಸಂದರ್ಭವಲ್ಲ. ಯಾವುದನ್ನೂ ಹೇಳಲ್ಲ, ನಿಮ್ಮನ್ನೂ ಮತ್ತೊಮ್ಮೆ ಕರೆಯಿಸಿ ಮಾತನಾಡುತ್ತೇನೆ ಎಂದು ಹೇಳಿದರು. ಇದನ್ನೂ ಓದಿ: ತನಿಖಾಧಿಕಾರಿಗಳ ತಪ್ಪಿನಿಂದ ಮುರುಘಾ ಶ್ರೀಗೆ ಜಾಮೀನು: ಒಡನಾಡಿ ಸ್ಟ್ಯಾನ್ಲಿ ಪರಶು
Advertisement
Advertisement
ಚಿಂತೆ ಬೇಡ, ಈಗ ಸಂದೇಶ ಕೊಡುವ ಕಾಲವಲ್ಲ. ಎರಡನೇ ಕೇಸ್ ಕಾನೂನು ತೊಡಕು ಹಿನ್ನಲೆಯಲ್ಲಿ ವಿಚಾರಣೆ ನಡೀತಾ ಇದೆ. ಏನೂ ಹೇಳಲ್ಲ, ಭಕ್ತರು ಎಲ್ಲಿ ವ್ಯವಸ್ಥೆ ಮಾಡುತ್ತಾರೋ ಅಲ್ಲಿ ಇರುತ್ತೇನೆ ಎಂದು ತಿಳಿಸಿದರು.
Advertisement
ದಾವವಣಗೆರೆ ವಿರಕ್ತ ಮಠದಲ್ಲಿ ನೆಲೆಸಿರುವ ಮುರುಘಾ ಶರಣರು ಅಪ್ತಕೋಣೆಯಲ್ಲಿ ವಿಶ್ರಾಂತಿ ಮಾಡುತ್ತಿದ್ದಾರೆ. ಕೆಲ ಅತ್ಯಾಪ್ತ ಭಕ್ತರು, ಮುಖಂಡರು ವಿರಕ್ತ ಮಠಕ್ಕೆ ಆಗಮಿಸಿ ಯೋಗಕ್ಷೇಮ ವಿಚಾರಿಸುತ್ತಿದ್ದಾರೆ. 14 ತಿಂಗಳ ಸೆರೆವಾಸದಿಂದ ಜೈಲಿನಿಂದ ಬಿಡುಗಡೆಯಾದ ಶಿವಮೂರ್ತಿ ಮುರುಘಾ ಶರಣರು ಸದ್ಯ ದಾವಣಗೆರೆ ವಿರಕ್ತ ಮಠದಲ್ಲಿ ನೆಲೆಸಿದ್ದರಿಂದ ಮುರುಘಾ ಶ್ರೀಗಳನ್ನು ಭೇಟಿಯಾಗಲು ವಿವಿಧ ಮಠಾಧೀಶರು ವಿರಕ್ತ ಮಠದತ್ತ ಆಗಮಿಸುತ್ತಿದ್ದಾರೆ. ಇದನ್ನೂ ಓದಿ: ಪೋಕ್ಸೋ ಕೇಸ್ – ಜೈಲಿನಿಂದ ಮುರುಘಾ ಶ್ರೀ ಬಿಡುಗಡೆ
Advertisement
ದಾವಣಗೆರೆಯ ದೊಡ್ಡಪೇಟೆಯಲ್ಲಿರುವ ವಿರಕ್ತ ಮಠಕ್ಕೆ ಚಿತ್ರದುರ್ಗದ ಬೋವಿ ಮಠದ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ, ಮಾದಾರ ಚನ್ನಯ್ಯ ಶ್ರೀಗಳು, ಮಡಿವಾಳ ಮಾಚಿದೇವ ಸ್ವಾಮೀಜಿ ಸೇರಿದಂತೆ ಹಲವು ಮಠಾಧೀಶರು ಆಗಮಿಸಿ ಯೋಗಕ್ಷೇಮ ವಿಚಾರಿಸಿದರು. ಪೋಕ್ಸೊ ಪ್ರಕರಣದಿಂದ ಜಾಮೀನಿನ ಮೇಲೆ ಬಿಡುಗಡೆಯಾಗಿರುವ ಮುರುಘಾ ಶ್ರೀಗಳನ್ನು ಭೇಟಿಯಾಗಿ ಕೆಲ ಕಾಲ ಮಾತನಾಡಿಸಿ ಕೆಲ ವಿಚಾರಗಳನ್ನು ಚರ್ಚಿಸಿದರು.