ಚಿತ್ರದುರ್ಗ: ಪೋಕ್ಸೊ ಪ್ರಕರಣದಡಿ ಬಂಧಿತರಾಗಿರುವ ಮುರುಘಾ ಮಠದ ಶರಣರ ಆರೋಗ್ಯದಲ್ಲಿ ಏರುಪೇರು ಕಾಣಿಸಿಕೊಂಡಿದ್ದು, ಇದೀಗ ಅವರನ್ನು ಐಸಿಯುಗೆ ಶಿಫ್ಟ್ ಮಾಡಲಾಗಿದೆ.
ಎದೆನೋವು ಕಾಣಿಸಿಕೊಂಡ ಹಿನ್ನೆಲೆಯ್ಲಲಿ ಸತತ 2 ಗಂಟೆಗಳ ಕಾಲ ಶ್ರೀಗಳ ತಪಾಸಣೆ ನಡೆಸಲಾಗಿದೆ. ಚೆಸ್ಟ್ ಸ್ಕ್ಯಾನ್, ಇಸಿಜಿ, ಎಕೊ, ಎಂ ಆರ್ ಐ ಸ್ಕ್ಯಾನ್ ಹೀಗೆ ಪರೀಕ್ಷೆ ನಡೆಸಲಾಗಿದೆ.
Advertisement
Advertisement
ಎದೆನೋವು ಹಾಗೂ ರಕ್ತದೊತ್ತಡದಿಂದ ಶ್ರೀಗಳು ಬಳಲುತ್ತಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಇದೀಗ ಮತ್ತೆ ಏರುಪೇರು ಉಂಟಾದ ಹಿನ್ನೆಲೆಯಲ್ಲಿ ಅವರನ್ನು ಜಿಲ್ಲಾಸ್ಪತ್ರೆಯ ಐಸಿಯುಗೆ ರವಾನಿಸಲಾಗಿದೆ. ಇದನ್ನೂ ಓದಿ: ಮುರುಘಾ ಶ್ರೀಗಳಿಗೆ ಎದೆ ನೋವು – ಆಸ್ಪತ್ರೆಗೆ ದಾಖಲು
Advertisement
Advertisement
ಇತ್ತ ಜಿಲ್ಲಾಸ್ಪತ್ರೆಯ ಆವರಣದಲ್ಲಿ ನೀರವ ಮೌನ ಆವರಿಸಿದೆ. ಎಸ್ ಜೆಎಂ ವಿದ್ಯಾಪೀಠದ ಉದ್ಯೋಗಿಗಳು ಆಸ್ಪತ್ರೆಗೆ ಬಂದಿದ್ದಾರೆ. ವೀರಶೈವ ಸಮಾಜದ ಮುಖಂಡರು ಹಾಗೂ ರಾಜ್ಯದ ನಾನಾಕಡೆಯ ಭಕ್ತರು ಆಗಮಿಸಿದ್ದು, ಮುರುಘಾ ಶ್ರೀ ದರ್ಶನಕ್ಕಾಗಿ ಕಾದು ನಿಂತಿದ್ದಾರೆ. ಈ ಹಿನ್ನೆಲೆಯಲ್ಲಿ ಆಸ್ಪತ್ರೆ ಆವರಣದಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಕ್ಷಣಕ್ಷಣಕ್ಕೂ ಆಸ್ಪತ್ರೆ ಆವರಣದಲ್ಲಿ ಜನಸಂದಣಿ ಹೆಚ್ಚಾಗುತ್ತಿದೆ.