ಬೆಂಗಳೂರು: ಮುರುಘಾ ಶ್ರೀ (Murugha Sri) ವಿರುದ್ಧ ಮಾಡಿದ್ದ ಷಡ್ಯಂತ್ರ ಪ್ರಕರಣ ವಿಚಾರವಾಗಿ ಅರ್ಜಿ ವಿಚಾರಣೆ ಕೈಗೆತ್ತಿಕೊಂಡಿರುವ ಹೈಕೋರ್ಟ್ (High Court) ಏಕಸದಸ್ಯ ಪೀಠ ತನಿಖಾಧಿಕಾರಿಗಳ ನಡೆಯ ಬಗ್ಗೆ ತಿಳಿದುಕೊಳ್ಳುವ ಸಲುವಾಗಿ ಸರ್ಕಾರಿ ಪರ ವಕೀಲರಿಗೆ ತನಿಖಾ ವರದಿ ಸಲ್ಲಿಸುವಂತೆ ಸೂಚನೆ ನೀಡಿದೆ.
Advertisement
ಮುರುಘಾ ಶ್ರೀಗಳ ವಿರುದ್ಧ ಮಾಡಿದ್ದ ಷಡ್ಯಂತ್ರ ಪ್ರಕರಣದ ತನಿಖೆ ಸರಿಯಾಗಿ ನಡೆಯುತ್ತಿಲ್ಲ. ತನಿಖಾಧಿಕಾರಿಗಳಾದ ಪೊಲೀಸರು (Police) ಆರೋಪಿ ಬಸವರಾಜನ್ ಜೊತೆ ಕೈ ಜೋಡಿಸಿದ್ದಾರೆ. ಆರೋಪಿಯ ಬಳಿ ಯಾವುದೇ ಸರಿಯಾದ ಸಾಕ್ಷ್ಯವನ್ನು ಕಲೆ ಹಾಕುತ್ತಿಲ್ಲ. ಪ್ರಕರಣದ ಇನ್ನೊಬ್ಬ ಆರೋಪಿ ಸೌಭಾಗ್ಯ ಮೊಬೈಲ್ ಕೂಡ ವಶಪಡಿಸಿಕೊಂಡಿಲ್ಲ. ಪೊಲೀಸರ ತನಿಖೆ ಸರಿಯಿಲ್ಲ ಎಂದು ಮುರುಘಾ ಶ್ರೀಗಳ ಪರವಾಗಿ ಹೈಕೋರ್ಟ್‍ಗೆ ಅರ್ಜಿ ಸಲ್ಲಿಸಲಾಗಿತ್ತು. ಇದನ್ನೂ ಓದಿ: ಶಾ ಫಸ್ಟ್ ರೌಂಡ್ ಬಳಿಕ ರಮೇಶ್ ಜಾರಕಿಹೊಳಿ ಸಿಡಿ ಬಾಂಬ್ ಏಕೆ?
Advertisement
Advertisement
ಅರ್ಜಿ ವಿಚಾರಣೆ ಕೈಗೆತ್ತಿಕೊಂಡ ಹೈಕೋರ್ಟ್ ಏಕಸದಸ್ಯ ಪೀಠ ತನಿಖಾಧಿಕಾರಿಗಳ ನಡೆಯ ಬಗ್ಗೆ ತಿಳಿದುಕೊಳ್ಳುವ ಸಲುವಾಗಿ ಸರ್ಕಾರಿ ಪರ ವಕೀಲರಿಗೆ ತನಿಖಾ ವರದಿ ಸಲ್ಲಿಸುವಂತೆ ಸೂಚನೆ ನೀಡಿದೆ. ತನಿಖಾಧಿಕಾರಿಗಳು ಇಲ್ಲಿಯವರೆಗೆ ತೆಗೆದುಕೊಂಡಂತಹ ಕ್ರಮ ಮತ್ತು ತನಿಖೆಯಲ್ಲಿ ಆದ ಬೆಳವಣಿಗೆಯ ಬಗ್ಗೆ ವರದಿಯನ್ನು ಸಲ್ಲಿಸುವಂತೆ ಸೂಚನೆ ನೀಡಿ ಫೆಬ್ರವರಿ 10ಕ್ಕೆ ಅರ್ಜಿ ವಿಚಾರಣೆಯನ್ನು ಮುಂದೂಡಿದೆ. ಇದನ್ನೂ ಓದಿ: ರಮೇಶ್ ಜಾರಕಿಹೊಳಿಗೆ ಕಾಮನ್ ಸೆನ್ಸ್ ಇಲ್ಲ – `ವಿಷಕನ್ಯೆ’ ಪದ ಬಳಕೆಗೆ ಹೆಬ್ಬಾಳ್ಕರ್ ಸಹೋದರ ಖಂಡನೆ
Advertisement
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k