ಅಣಬೆ ಬಾಯಿಗೆ ರುಚಿ ಮಾತ್ರವಲ್ಲ, ಅದರಲ್ಲಿ ದೇಹಕ್ಕೆ ಅಗತ್ಯವಿರುವ ಅನೇಕ ಅಂಶಗಳೂ ತುಂಬಿಕೊಂಡಿವೆ. ಅಣಬೆಯಲ್ಲಿನ ಪ್ರೊಟೀನ್ ವಿಟಮಿನ್, ಮಿನರಲ್, ಅಮಿನೊ ಆಸಿಡ್, ಆಂಟಿ ಬಯಾಟಿಕ್, ಮತ್ತು ಆಂಟಿ ಯಾಕ್ಸಿಡಂಟ್ ಅಂಶಗಳು ಆರೋಗ್ಯಕ್ಕೆ ಪೂರಕವಾಗಿದೆ. ಈ ಎಲ್ಲಾ ಅಂಶಗಳನ್ನು ಅಣಬೆ ಒಳಗೊಂಡಿದೆ.
Advertisement
ಮಶ್ರೂಮ್ ನಿತ್ಯದ ಆಹಾರವಾಗಿ ಬಳಸಿದರೆ ಅದ್ಭುತ ಆರೋಗ್ಯ ಹೊಂದುವುದರಲ್ಲಿ ಸಂಶಯವೇ ಇಲ್ಲ. ಡಯಟ್‍ನಲ್ಲಿ ಅಣಬೆಗೆ ಮೊದಲ ಆದ್ಯತೆ ನೀಡಿದರೆ ಎಷ್ಟೋ ರೋಗಗಳನ್ನು ತಡೆಯಬಹುದಾಗಿದೆ. ಇದನ್ನೂ ಓದಿ: ಅಕ್ಕಿ ತೊಳೆದ ನೀರಿನಿಂದ ನಿಮ್ಮ ಸೌಂದರ್ಯ ಹೆಚ್ಚಿಸಬಹುದು
Advertisement
* ದೇಹದ ಆರೋಗ್ಯ ಸುಧಾರಣೆಗೆ ಸಹಾಯ ಮಾಡು ಅಂಶಗಳನ್ನು ಅಣಬೆ ಒಳಗೊಂಡಿದೆ. ಆರೋಗ್ಯ ಪ್ರಜ್ಞೆ ಜೊತೆಗೆ ತೂಕವನ್ನು ಕಡಿಮೆ ಮಾಡಿಕೊಳ್ಳಲು ಬಯಸುವವರು ಅಣಬೆಯನ್ನು ತಪ್ಪದೆ ಸೇವಿಸಬೇಕು. ಇದನ್ನೂ ಓದಿ: ಅನ್ನದಿಂದ ಆರೋಗ್ಯಕ್ಕೆ ಸಿಗುವ ಪ್ರಯೋಜನಗಳೇನು ಗೊತ್ತಾ?
Advertisement
Advertisement
* ಅಣಬೆಯಲ್ಲಿ ವಿಟಮಿನ್ ಡಿ ಅಧಿಕವಾಗಿರುತ್ತದೆ. ಇದು ಮೊಡವೆಯನ್ನು ಕಡಿಮೆ ಮಾಡಲು ಸಹಾಯವನ್ನು ಮಾಡುತ್ತದೆ.
* ಅಣಬೆಗಳು ಕರುಳಿನ ಆರೋಗ್ಯಕ್ಕೆ ಅತ್ಯುತ್ತಮ ಆಹಾರ. ಒಳ್ಳೆಯ ಬ್ಯಾಕ್ಟೀರಿಯಾಗಖನ್ನು ಒಳಗೊಂಡಿದ್ದು, ಅವುಗಳ ಸೇವನೆಯಿಂದ ನಮ್ಮ ದೇಹದಲ್ಲಿಯೂ ಒಳ್ಳೆಯ ಬ್ಯಾಕ್ಟೀರಿಯಾಗಳನ್ನು ಪೋಷಣೆ ಮಾಡುತ್ತದೆ.
* ಕಬ್ಬಿಣಾಂಶದ ಪರಿಣಾಮ ಹೇರವಾಗಿದ್ದು, ರಕ್ತ ಹೀನತೆಯಿಂದ ಬಳಲುತ್ತಿರುವವರಿಗೆ ವರದಾನ ಎನ್ನ ಬಹುದಾಗಿದೆ. ಕೆಂಪು ರಕ್ತಕಣಗಳ ಉತ್ಪಾದನೆ ಪ್ರಮಾಣ ಹೆಚ್ಚಿಸುತ್ತದೆ. ಇದನ್ನೂ ಓದಿ: ಚಳಿಗಾಲದಲ್ಲಿ ನೀವು ಸೇವಿಸುವ ಆಹಾರದಲ್ಲಿ ಈ ಅಂಶಗಳು ಇರಲಿ
* ಕ್ಯಾಲ್ಸಿಯಂ ಅಂಶ ಹೆಚ್ಚಾಗಿದ್ದು, ಸಂದು ನೋವಿಗೆ ಶಮನಕಾರಿಯಾಗಿದೆ.
* ಕ್ಯಾನ್ಸರ್ ನಿರೋಧಕ ಅಂಶಗಳನ್ನು ಒಳಗೊಂಡಿದ್ದು, ಪ್ರಮುಖವಾಗಿ ಸ್ತನ ಕ್ಯಾನ್ಸರ್ ಬಾರದಂತೆ ತಡೆಯುತ್ತದೆ.