ಹಸಿದವನಿಗೆ ಅನ್ನ ಹಾಕಿದರೆ ಒಳಿತಾಗುತ್ತದೆ ಎಂಬ ಹಿರಿಯರ ಮಾತಿದೆ. ಆದರೆ ಪ್ರಸ್ತುತ ದಿನಗಳಲ್ಲಿ ಲೆಕ್ಕಕ್ಕಿಂತ ಹೆಚ್ಚಿನ ಆಹಾರ ತೆಗೆದುಕೊಂಡು ಎಸೆಯುವವರೇ ಜಾಸ್ತಿ. ಇದು ಒಳ್ಳೆಯ ಅಭ್ಯಾಸವಲ್ಲ. ಹಾಗಿದ್ದರೆ ಉಳಿದ ಅನ್ನದಿಂದ ಏನು ಮಾಡಬಹುದು ಎಂದು ಯೋಚಿಸುತ್ತಿದ್ದೀರಾ? ನಿಮ್ಮ ಈ ಪ್ರಶ್ನೆಗೆ ನಮ್ಮ ಬಳಿ ಉತ್ತರವಿದೆ. ರಾತ್ರಿ ಉಳಿದ ಅನ್ನದಿಂದ ಬೊಂಬಾಟ್ ಮಶ್ರೂಮ್ ಫ್ರೈಡ್ರೈಸ್ ಮಾಡುವುದನ್ನು ನಾವು ತಿಳಿಸಿಕೊಡುತ್ತೇವೆ. ಹಾಗಿದ್ದರೆ ಇದನ್ನು ಹೇಗೆ ಮಾಡುವುದು ಎಂಬುದನ್ನು ತಿಳಿದುಕೊಳ್ಳೋಣ.
Advertisement
ಬೇಕಾಗುವ ಸಾಮಾಗ್ರಿಗಳು:
ಉಳಿದ ಅನ್ನ – 1 ಕಪ್
ತೊಳೆದು ಹೆಚ್ಚಿಟ್ಟುಕೊಂಡ ಅಣಬೆ – 150 ಗ್ರಾಂ
ಹೆಚ್ಚಿದ ಬೆಳ್ಳುಳ್ಳಿ – ಸ್ವಲ್ಪ
ಹೆಚ್ಚಿದ ಈರುಳ್ಳಿ – ಅರ್ಧ ಕಪ್
ಕೊತ್ತಂಬರಿ ಸೊಪ್ಪು – ಅರ್ಧ ಚಮಚ
ಆಲಿವ್ ಆಯಿಲ್- 2 ಚಮಚ
ಕರಿಮೆಣಸಿನ ಪುಡಿ – ಕಾಲು ಚಮಚ
ಉಪ್ಪು – ಅಗತ್ಯಕ್ಕೆ ತಕ್ಕಷ್ಟು
Advertisement
Advertisement
ಮಾಡುವ ವಿಧಾನ:
Advertisement
- ಮೊದಲಿಗೆ ಒಂದು ಬಾಣಾಲೆಯಲ್ಲಿ ಆಲಿವ್ ಆಯಿಲ್ ಹಾಕಿಕೊಂಡು ಕಾದ ನಂತರ ಬೆಳ್ಳುಳ್ಳಿ ಮತ್ತು ಈರುಳ್ಳಿಯನ್ನು ಹಾಕಿಕೊಂಡು 2 ನಿಮಿಷಗಳ ಕಾಲ ಚನ್ನಾಗಿ ಫ್ರೈ ಮಾಡಿಕೊಳ್ಳಿ.
- ಬಳಿಕ ಇದಕ್ಕೆ ಹೆಚ್ಚಿದ ಅಣಬೆಗಳನ್ನು ಹಾಕಿಕೊಂಡು ಕಂದು ಬಣ್ಣ ಬರುವವರೆಗೆ ಚನ್ನಾಗಿ ಹುರಿದುಕೊಳ್ಳಿ. ಇದರ ನೀರಿನಾಂಶ ಸಂಪೂರ್ಣವಾಗಿ ಬಿಡುವುದರಿಂದ ಫ್ರೈಡ್ರೈಸ್ ಇನ್ನಷ್ಟು ರುಚಿಯನ್ನು ನೀಡುತ್ತದೆ.
- ನಂತರ ಹೆಚ್ಚಿದ ಕೊತ್ತಂಬರಿ ಸೊಪ್ಪನ್ನು ಹಾಕಿಕೊಂಡು ಸ್ವಲ್ಪ ಫ್ರೈ ಮಾಡಿ ನಂತರ ಅದಕ್ಕೆ ಕರಿಮೆಣಸಿನ ಪುಡಿ ಹಾಗೂ ರುಚಿಗೆ ತಕ್ಕಷ್ಟು ಉಪ್ಪನ್ನು ಸೇರಿಸಿಕೊಳ್ಳಿ.
- ಬಳಿಕ ಈ ಮಿಶ್ರಣಕ್ಕೆ ಅನ್ನವನ್ನು ಹಾಕಿಕೊಂಡು 5ರಿಂದ 6 ನಿಮಿಷಗಳ ಕಾಲ ಚನ್ನಾಗಿ ಮಿಕ್ಸ್ ಮಾಡಿಕೊಳ್ಳಿ.
- ಈಗ ಮಶ್ರೂಮ್ ಫ್ರೈಡ್ರೈಸ್ ತಿನ್ನಲು ರೆಡಿ. ಇದನ್ನು ಬಿಸಿ ಇರುವಾಗಲೇ ಸರ್ವ್ ಮಾಡಿ ತಿಂದು ಆನಂದಿಸಿ.