-ರಾಜೇಶ್ ಕೃಷ್ಣನ್ ಸಹಾಯ, ವಿಜಯ್ ಪ್ರಕಾಶ್ ಮಮತೆ ತಿಳಿಸಿದ್ರು
ಬೆಂಗಳೂರು: ಮ್ಯಾಜಿಕಲ್ ಮ್ಯೂಸಿಕ್ ಕಂಪೋಸರ್ ಅರ್ಜುನ್ ಜನ್ಯ ಗುಣಮುಖರಾಗಿದ್ದು, ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ರಿಯಾಲಿಟಿ ಶೋಗೆ ಕಮ್ ಬ್ಯಾಕ್ ಮಾಡಿದ್ದಾರೆ. ಕಾರ್ಯಕ್ರಮಕ್ಕೆ ಆಗಮಿಸಿದ ಅರ್ಜುನ್ ಜನ್ಯ, ತಮ್ಮ ಚೇತರಿಕೆಗಾಗಿ ಪ್ರಾರ್ಥಿಸಿದ ಎಲ್ಲ ಅಭಿಮಾನಿಗಳಿಗೆ ಧನ್ಯವಾದ ಸಲ್ಲಿಸಿದ್ದಾರೆ.
Advertisement
ತಮಗಾಗಿ ಪ್ರಾರ್ಥಿಸಿದವರಿಗೆ ಎಷ್ಟು ಧನ್ಯವಾದ ಹೇಳಿದ್ರೂ ಕಡಿಮೆ. ನಾಡಿನ ಪ್ರತಿಯೊಬ್ಬರ ಆಶೀರ್ವಾದ, ಪ್ರಾರ್ಥನೆಯಿಂದ ಗುಣಮುಖವಾಗಿದ್ದೇನೆ. ಈ ವೇದಿಕೆಯನ್ನು ಸಹ ಮಿಸ್ ಮಾಡಿಕೊಂಡಿದ್ದೇನೆ. ಆರೋಗ್ಯದಲ್ಲಿ ಏರುಪೇರು ಕಂಡ ತಕ್ಷಣ ಎಲ್ಲರೂ ನನ್ನ ಬಳಿ ಬಂದರು. ನಾನು ಒಪ್ಪಿಕೊಂಡಿದ್ದ ಕಾರ್ಯಕ್ರಮವನ್ನ ರಾಜೇಶ್ ಕೃಷ್ಣನ್ ನಡೆಸಿಕೊಟ್ಟರು. ಇನ್ನು ವಿಜಯ್ ಪ್ರಕಾಶ್ ಮನೆಗೆ ಬಂದು ಗಾಳಿ ಆಂಜನೇಯ ದೇವಸ್ಥಾನಕ್ಕೆ ಕರೆದುಕೊಂಡು ಹೋಗಿ ತಾಯತ ಕಟ್ಟಿಸಿದರು ಎಂದು ಅರ್ಜುನ್ ಜನ್ಯ ಹೇಳಿದರು. ಇದನ್ನೂ ಓದಿ: ಅರ್ಜುನ್ ಜನ್ಯ ಆರೋಗ್ಯದ ಬಗ್ಗೆ ರಾಜೇಶ್ ಕೃಷ್ಣನ್ ಹೇಳಿದ್ದು ಹೀಗೆ
Advertisement
Advertisement
ನಮ್ಮ ತಂದೆ ಅಗಲಿ 25 ರಿಂದ 26 ವರ್ಷ ಆಯ್ತು. ಕೆಲವು ದಿನಗಳಲ್ಲಿ ರಾಜೇಶ್ ಕೃಷ್ಣನ್, ವಿಜಯ್ ಪ್ರಕಾಶ್ ಮತ್ತು ನನಗಾಗಿ ಹಾರೈಸಿದವರಲ್ಲಿ ನಮ್ಮ ತಂದೆಯನ್ನು ನೋಡಿದೆ ಎಂದು ಭಾವುಕರಾದರು. ಕೊನೆಗೆ ನಿರೂಪಕಿ ಅನುಶ್ರೀ, ಸ್ನೇಹಿತರಲ್ಲಿ ತಂದೆಯನ್ನು ಕಾಣುವ ನಿಮ್ಮ ಮನಸ್ಸು ನಿಜಕ್ಕೂ ದೊಡ್ಡದು ಚಪ್ಪಾಳೆ ಮೂಲಕ ಕೊಂಡಾಡಿದರು. ಇದನ್ನೂ ಓದಿ: I am OK, Nothing to Worry: ಅರ್ಜುನ್ ಜನ್ಯ